ಬೆಳಗಾವಿ:ಬಿಜೆಪಿ ಹೈಕಮಾಂಡ್​ನಿಂದ ಸಂದೇಶ ಬಂದ ನಂತರ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರು ಹೇಳಿದರು.
ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿಗೆ ನೀಡಲು ಸಿಎಂ ಬಿಎಸ್​ವೈ ಇಂದು ಬೆಳಗ್ಗೆ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬೆಳಗಾವಿ ಜಿಲ್ಲೆಯಲ್ಲಿ ಅತಿವೃಷ್ಠಿ ಹಾನಿಯಾಗಿದೆ. ದೇವರ ದೆಯೆಯಿಂದ ಮಳೆ ಕಮ್ಮಿಯಾಗಿದೆ. ಮಳೆ ನಿಲ್ಲಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆಂದರು.
ಬಳಿಕ ರಾಜೀನಾಮೆ ವಿಚಾರವಾಗಿ ಮಾತನಾಡಿದ ಅವರು ಇಂದು ಸಂಜೆ ದೆಹಲಿ ಹೈಕಮಾಂಡ್​ನಿಂದ ಸಂದೇಶ ಬರಲಿದೆ. ಆ ಬಳಿಕ ಏನು ನಡೆಯಲಿದೆ ಎಂದು ನಿಮಗೇ ಗೊತ್ತಾಗುತ್ತದೆ. ಸಂದೇಶ ಬಂದ ಬಳಿಕ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದರು.
ದಲಿತ ಸಿಎಂ ವಿಚಾರವಾಗಿ ಮಾತನಾಡಿದ ಅವರು ಆ ಬಗ್ಗೆ ಹೈಕಮಾಂಡ್​ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದರು. ಪ್ರಧಾನಿ ಮೋದಿ, ಅಮಿತ್​ ಷಾ ಮತ್ತು ನಡ್ಡಾ ಬಗ್ಗೆ ವಿಶ್ವಾಸವಿದೆ. ಎಲ್ಲವನ್ನೂ ಹೈಕಮಾಂಡ್​ಗೆ ಬಿಟ್ಟಿದ್ದೇನೆ. ಸಂಜೆ ಸಂದೇಶ ಬರುತ್ತಿದ್ದಂತೆ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇನೆಂದು ಹೇಳಿದರು.
ಬಿಎಸ್​ವೈ ಇಂದು ಬೆಳಗಾವಿ ಜಿಲ್ಲೆಯ ಹುಕ್ಕೇರಿ ತೂಲೂಕಿನ ಸಂಕೇಶ್ವರ ಪಟ್ಟಣದ ಮಠಗಲ್ಲಿ, ಕುಂಬಾರ ಓಣಿ ಸೇರಿದಂತೆ ಜಿಲ್ಲೆಯ ವಿವಿಧ ಮುಳುಗಡೆ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.(ದಿಗ್ವಿಜಯ ನ್ಯೂಸ್​)
ಎದುರುಮನೆ ಯುವಕನ ಪರಿಚಯ: ಹೆಣ್ಣು ಮಕ್ಕಳೊಂದಿಗೆ ಮನೆಬಿಟ್ಟ ಮಹಿಳೆಯಿಂದ ಪತಿಗೆ ಶಾಕ್​!

ಆಗಸ್ಟ್​ 15ರಿಂದ ಈ ರಾಜ್ಯದಲ್ಲಿ ಉಚಿತ ವೈಫೈ: ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವದ ಉಡುಗೊರೆ!

Tokyo Olympics| ಬೆಳ್ಳಿ ಗೆದ್ದ ಮೀರಾಬಾಯಿ ಚಾನುಗೆ ಸರ್ಕಾರಿ ಉದ್ಯೋಗದ ಜತೆಗೆ 1 ಕೋಟಿ ರೂ. ಬಹುಮಾನ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + fifteen =
Remember me
