ಬೆಳಗಾವಿ:ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾದ ದಂಪತಿಯಲ್ಲಿ ಪತಿ ಮೃತಪಟ್ಟರೆ, ಪತ್ನಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ.
ಬೆಳಗಾವಿ ನಗರದ ಒಂದನೇ ರೈಲ್ವೆ ಗೇಟ್ ಬಳಿ ಘಟನೆ ನಡೆದಿದ್ದು, ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ದಂಪತಿ ಆತ್ಮಹತ್ಯೆ ನಿರ್ಧಾರ ಮಾಡಿದ್ದರು. ಬೆಳಗಾವಿ ತಾಲೂಕಿನ ಹಿಂಡಲಗಾ ನಿವಾಸಿ ರಾಕೇಶ್ ಪಾಟೀಲ್ ಸಾವಿಗೀಡಾದರೆ, ಪತ್ನಿ ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇದನ್ನೂ ಓದಿರಿ:ಪ್ರೇಮಿಗಳಿಬ್ಬರ ಪ್ರೇಮ ವಿವಾಹಕ್ಕೆ ಬಲಿಯಾಯ್ತು ಲಕ್ಷಾಂತರ ರೂ. ಮೌಲ್ಯದ ಅಡಿಕೆ ಗಿಡಗಳು!
ಬುಧವಾರ ರಾತ್ರಿ ಕುಟುಂಬದ ಸದಸ್ಯರ ಜತೆ ಜಳವಾಗಿತ್ತು. ಈ ಹಿನ್ನೆಲೆಯಲ್ಲಿ ಗುರುವಾರ ಬೆಳಗ್ಗೆ ಗೂಡ್ಸ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಳ್ಳಲು ದಂಪತಿ ನಿರ್ಧರಿಸಿದ್ದರು. ಆದರೆ, ವಿಧಿಯಾಟದಲ್ಲಿ ಪತ್ನಿ ಬದುಕುಳಿದಿದ್ದು, ಪತಿ ಇಹಲೋಕ ತ್ಯಜಿಸಿದ್ದಾರೆ. ಇದೀಗ ಪತಿ ಕಳೆದುಕೊಂಡ ಪತ್ನಿಯ ಜೀವನ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದಂತಾಗಿದೆ.
ಘಟನಾ ಸ್ಥಳಕ್ಕೆ ಬೆಳಗಾವಿ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.(ದಿಗ್ವಿಜಯ ನ್ಯೂಸ್​)
ವೈದ್ಯರು ರಾತ್ರಿ ಸಮಯದಲ್ಲೇಕೆ ಶವಪರೀಕ್ಷೆ ಮಾಡುವುದಿಲ್ಲ? ಸತ್ಯ ತಿಳಿದ್ರೆ ನೀವು ಶಾಕ್​ ಆಗೋದು ಖಂಡಿತ!

ಬಯಲಾಯ್ತು ಕರಾಳಮುಖ! ಪ್ರತಿಭಟನೆ ಹೆಸರಲ್ಲಿ ಭಾರತಕ್ಕೆ ಕಪ್ಪುಮಸಿ ಬಳಿಯೋದು ಹೇಗೆ ಎಂದು ಪಾಠ ಮಾಡಿದ ‘ಪರಿಸರ ಹೋರಾಟಗಾರ್ತಿ’…

ಮಧ್ಯರಾತ್ರಿ ಕಿರುತೆರೆ ನಟಿಯನ್ನು ಕೆಣಕಿ ಜೈಲು ಪಾಲಾದ ನಾಲ್ವರು ದುಷ್ಕರ್ಮಿಗಳು..!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + fourteen =
Remember me
