ಬೆಳಗಾವಿ:ರಾಜ್ಯದಲ್ಲಿ ಕರ್ನಾಟಕ-ಮಹಾರಾಷ್ಟ್ರ ಗಡಿವಿವಾದ ಉಲ್ಬಣಿಸಿದೆ. ಈ ಹಿಂದೆ ಕರ್ನಾಟಕಕ್ಕೆ ಬರಲಿರುವ ಮಹಾರಾಷ್ಟ್ರ ಸಚಿವರಿಗೆ ಇಲ್ಲಿಗೆ ಆಗಮಿಸಲು ಬಿಡಬಾರದು ಎಂದು ಬೆಳಗಾವಿ ಪೊಲೀಸ್​ ಕಮಿಷನರ್​ಗೆ ಮನವಿ ಮಾಡಲಾಗಿತ್ತು. ಈಗ ಬೆಳಗಾವಿಯ ಜಿಲ್ಲಾಧಿಕಾರಿ, ಮಹಾರಾಷ್ಟ್ರದ ಸಚಿವರು ಬೆಳಗಾವಿ ಜಿಲ್ಲೆಯ ಗಡಿ ದಾಟಬಾರದು ಎಂದು ನಿರ್ಬಂಧ ಹೇರಿದ್ದಾರೆ.
ಮಹಾರಾಷ್ಟ್ರ ಮೂವರು ಸಚಿವರು ನಾಳೆ ಬೆಳಗಾವಿಗೆ ಆಗಮನ ಹಿನ್ನಲೆಯಲ್ಲಿ ಮಹಾರಾಷ್ಟ್ರ ಮೂರು ಸಚಿವರಿಗೆ ಬೆಳಗಾವಿ ಜಿಲ್ಲೆಗಡಿ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಇದರ ಜೊತೆಗೆ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಜಿಲ್ಲಾಧಿಕಾರಿ ಡಾ. ನಿತೇಶ್ ಪಾಟೀಲ್​ ಈ ಆದೇಶವನ್ನು ಜಾರಿ ಮಾಡಿದ್ದಾರೆ.
ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಆಗಮಿಸಿ ಪ್ರಚೋದನಕಾರಿ ಭಾಷಣ ಮಾಡಿ ಶಾಂತಿಗೆ ಭಂಗ ತರುವ ಸಾಧ್ಯತೆ ಇದೆ ಎಂದು ಗಡಿ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧ ಆದೇಶವನ್ನು ಜಿಲ್ಲಾಧಿಕಾರಿ ಹೊರಡಿಸಿದ್ದಾರೆ. ಮಹಾರಾಷ್ಟ್ರದ ಸಚಿವ ಚಂದ್ರಕಾಂತ ಪಾಟೀಲ, ಶಂಭುರಾಜೆ ದೇಸಾಯಿ, ಮತ್ತು ಮಹಾರಾಷ್ಟ್ರ ಸಂಸದ ಧೈರ್ಯಶೀಲ ಮಾನೆ ಈ ಮೂರು ಸಚಿವರಿಗೆ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧ ಹೇರಲಾಗಿದೆ.
ಬೆಳಗಾವಿಯ ಎಂಇಎಸ್ ಪುಂಡರ ಮನವಿ ಮೇರೆಗೆ ನಾಳೆ ಬೆಳಗಾವಿಗೆ ಆಗಮಿಸಲು ಮಹಾರಾಷ್ಟ್ರ ಸಚಿವರು ಸಜ್ಜಾಗಿದ್ದರು. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಈ ನಿರ್ಬಂಧ ಆದೇಶವನ್ನು ಜಾರಿಗೊಳಿಸಿದ್ದಾರೆ.


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + 16 =
Remember me
