ಬೆಳಗಾವಿ:ಸಾರಿಗೆ ಸಚಿವ ಲಕ್ಷ್ಮಣ ಸವದಿ ತವರಿನಲ್ಲೇ ವಿದ್ಯಾರ್ಥಿಗಳು ಬಸ್​ಗಾಗಿ ಪರದಾಡುವಂತಾಗಿದೆ. ಸರಿಯಾದ ಸಮಯಕ್ಕೆ ಬಸ್​ ಇಲ್ಲದೆ, ಶಾಲಾ-ಕಾಲೇಜಿಗೆ ತೆರಳಲು ಖಾನಾಪುರ ತಾಲೂಕಿನ ವಿದ್ಯಾರ್ಥಿಗಳು ಸಂಕಷ್ಟ ಎದುರಿಸುತ್ತಿದ್ದಾರೆ.
ಇಷ್ಟೇ ಅಲ್ಲದೆ, ಬಸ್ಸಿನ ಕೊರತೆಯಿಂದಾಗಿ ಸದ್ಯ ಇರುವ ಬಸ್​ನಲ್ಲಿ ವಿದ್ಯಾರ್ಥಿಗಳನ್ನು ಕುರಿ ತುಂಬಿದ ಹಾಗೇ ತುಂಬಿ ಕರೆದೊಯ್ಯುತ್ತಿದ್ದಾರೆ. ಇದರ ಪರಿಣಾಮ ಇಂದು ಕಿಕ್ಕಿರಿದ ಬಸ್​ನಲ್ಲಿ ಪ್ರಯಾಣಿಕರ ಮಧ್ಯೆ ಸಿಲುಕಿ ಉಸಿರುಗಟ್ಟಿ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದಾರೆ.
ಇದನ್ನೂ ಓದಿರಿ:ಇನ್ಮುಂದೆ ನಾನಾಯಿತು ನನ್ನ ಪಾಡಾಯಿತು…; ಜಗ್ಗೇಶ್
ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ತಕ್ಷಣ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ವಿಷಯ ತಿಳಿದ ವಿದ್ಯಾರ್ಥಿಗಳ ಪಾಲಕರು ಹಾಗೂ ವಿದ್ಯಾರ್ಥಿಗಳು ಸಾರಿಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಸಮರ್ಪಕವಾಗಿ ಸರಿಯಾದ ಸಮಯಕ್ಕೆ ಬಸ್ ಬಿಡುವಂತೆ ವಿದ್ಯಾರ್ಥಿಗಳ ಆಗ್ರಹಿಸಿದ್ದಾರೆ. ಬೆಳಗ್ಗೆ 7-8 ಕ್ಕೆ ರಾಮನಗರ – ಖಾನಾಪೂರ ಮತ್ತು ಮಧ್ಯಾಹ್ನ 2-3 ಕ್ಕೆ ಖಾನಾಪೂರ – ರಾಮನಗರ ಬಸ್ ಬಿಡಲು ಆಗ್ರಹಿಸಿದ್ದಾರೆ.(ದಿಗ್ವಿಜಯ ನ್ಯೂಸ್​)
ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ

ಬೆಳಗಾವಿ: ವೇಶ್ಯಾವಾಟಿಕೆ ಸಂತ್ರಸ್ತೆಯರನ್ನು ಪಾಲಕರಿಗೆ ಹಸ್ತಾಂತರಿಸಿ ಮಾನವೀಯತೆ ಮೆರೆದ ಪೊಲೀಸರು!

ಸ್ಫೋಟಕಗಳ ಜತೆ ಹುಡುಗಾಟ; ಎಚ್ಚೆತ್ತುಕೊಳ್ಳದ ಸರ್ಕಾರ, ಶಿವಮೊಗ್ಗ ಬಳಿಕ ಚಿಕ್ಕಬಳ್ಳಾಪುರದಲ್ಲೂ ದುರಂತ..

ಕಿದ್ವಾಯಿ-ನಿಮ್ಹಾನ್ಸ್ ಮಾದರಿ ಇನ್ನಷ್ಟು ಆಸ್ಪತ್ರೆ; ರಾಜ್ಯದಲ್ಲಿ ವಲಯವಾರು ಕೇಂದ್ರಗಳ ಆರಂಭಕ್ಕೆ ಸಿಎಂ ನಿರ್ಧಾರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × five =
Remember me
