ಬೆಳಗಾವಿ:ಎಂಎಸ್​ಐಎಲ್ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ತಿರಸ್ಕರಿಸಿದ ಕುಮಟಳ್ಳಿ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಭೇಟಿಗೆ ಬೆಂಗಳೂರಿಗೆ ತೆರಳಿದರು.
ಬೆಂಗಳೂರಿಗೆ ತೆರಳುವ ಮುನ್ನ ಅಥಣಿಯಲ್ಲಿ ಮಾಧ್ಯಮಗಳ ಜತೆ ಕುಮಟಳ್ಳಿ ಮಾತನಾಡಿದರು. ಎಂಎಸ್​ಐಎಲ್ ಬದಲು ಭೂಸೇನಾ ನಿಗಮ ಕೊಡಬೇಕು ಎಂದು ವರಿಷ್ಠರ ಮುಂದೆ ಕುಮಟಳ್ಳಿ ಬೇಡಿಕೆ ಇಟ್ಟಿದ್ದೆ ಎಂದು ತಿಳಿಸಿದರು.
ಸಚಿವ ಸ್ಥಾನದ ತೀವ್ರ ಆಕಾಂಕ್ಷಿಯಾಗಿದ್ದ ಅಥಣಿ ಬಿಜೆಪಿ ಶಾಸಕ ಮಹೇಶ ಕುಮಟಳ್ಳಿ ಅವರಿಗೆ ಸಚಿವ ಸ್ಥಾನ ನೀಡದೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿದ್ದ ಪಕ್ಷದ ವರಿಷ್ಠರ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನನಗೆ ಸಚಿವ ಸ್ಥಾನ ಕೊಡಬೇಕು ಎಂದು ಅಥಣಿ ಅಷ್ಟೆ ಅಲ್ಲ ರಾಜ್ಯದ ವಿವಿಧ ಕಡೆ ಜನ ಪ್ರತಿಭಟನೆ ಮಾಡುವವರಿದ್ದರು, ಆದರೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಜುಗರ ಆಗಬಾರದು ಎಂದು ನಾನು ಬೇಡ ಎಂದು ಹೇಳಿದ್ದೇನೆ ಎಂದು ಅಥಣಿಯಲ್ಲಿ ಶಾಸಕ ಮಹೇಶ ಕುಮಟಳ್ಳಿ ತಿಳಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − one =
Remember me
