ಬೆಂಗಳೂರು:ಹಿಂದಿನಿಂದಲೂ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಚರ್ಚೆ ಪರ-ವಿರೋಧ ಅಭಿಪ್ರಾಯ ಕೇಳಿಬರುತ್ತಿವೆ. ಇದೀಗ ಮತ್ತೊಮ್ಮೆ ಈ ವಿಚಾರ ಮುನ್ನೆಲೆಗೆ ಬಂದಿದ್ದು ಆ ಭಾಗದ ಶಾಸಕರು, ಸಚಿವರು ಸಿಎಂ ಮೇಲೆ ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದೆ.
ಕರ್ನಾಟಕ-ಮಹಾರಾಷ್ಟ್ರ ಗಡಿ ನಿರ್ಣಯಕ್ಕೆ ಸಂಬಂಧಿಸಿದಂತೆ ಸುಮಾರು ಎರಡು ದಶಕಗಳಿಂದ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಇದೀಗ ಸರ್ಕಾರ ಬೆಳಗಾವಿ ಜಿಲ್ಲೆಯನ್ನು ವಿಭಜನೆ ಮಾಡಲು ಮುಂದಾಗುತ್ತಾ ಎನ್ನುವ ಪ್ರಶ್ನೆ ಎದ್ದು ನಿಂತಿದೆ. ಮೂರು ವಿಭಾಗಗಳನ್ನಾಗಿ ಮಾಡಲು ಸರ್ಕಾರ ಚಿಂತನೆ ನಡೆಸುತ್ತಿದೆ ಎನ್ನಲಾಗಿದ್ದು, ಈ ಕುರಿತಾಗಿ ಆ ಭಾಗದ ಶಾಸಕರು ಹಾಗು ಸಚಿವರಿಂದ ಸಿಎಂ ಮೇಲೆ ಒತ್ತಡ ಇದೆ ಎನ್ನುವ ಮಾಹಿತಿ ದಿಗ್ವಿಜಯ ನ್ಯೂಸ್ ಚ್ಯಾನಲ್‍ಗೆ ಲಭಿಸಿದೆ.
ಇದನ್ನೂ ಓದಿ:ಬೆಳಗಾವಿ ಜಿಲ್ಲೆ ವಿಭಜನೆಗೆ ಪರ-ವಿರೋಧ
ಬೆಳಗಾವಿ ಜಿಲ್ಲೆಯನ್ನು ಗೋಕಾಕ್, ಚಿಕ್ಕೋಡಿ ಹಾಗು ಬೆಳಗಾವಿ ಎಂಬ ಮೂರು ಜಿಲ್ಲೆಗಳನ್ನಾಗಿ ಮಾಡಲು ಒತ್ತಡ ಬರುತ್ತಿದ್ದು ಈ ವಿಚಾರ ಇತ್ತೀಚೆಗೆ ಸಿಎಂ ಜೊತೆ ನಡೆದ ಆ ಭಾಗದ ಶಾಸಕರ ಸಭೆಯಲ್ಲೂ ಮುನ್ನೆಲೆಗೆ ಬಂದಿತ್ತು. ಅದಷ್ಟೇ ಅಲ್ಲದೇ ವಿಭಜನೆ ಕುರಿತಾಗಿ ಸಚಿವ ಸತೀಶ್ ಜಾರಕಿಹೊಳಿ ಕೂಡ ಒಲವು ಹೊಂದಿದ್ದಾರೆ. ಅವರು ಸಿಎಂ ಜೊತೆ ಬೆಳಗಾವಿ ಜಿಲ್ಲೆ ವಿಭಜನೆ ಬಗ್ಗೆ ಚರ್ಚಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ:ಸಚಿವರಿಗೆ ಬೆಳಗಾವಿ ಜಿಲ್ಲಾ ವಿಭಜನೆ ಬಿಸಿ
ಬೆಳಗಾವಿಯು ರಾಜ್ಯದ ಅತೀ ದೊಡ್ಡ ಜಿಲ್ಲೆಯಾಗಿದ್ದು 14 ತಾಲೂಕುಗಳನ್ನು ಹೊಂದಿದೆ. ಬೆಳಗಾವಿ ಜಿಲ್ಲೆಯಲ್ಲಿ 50 ಲಕ್ಷಕ್ಕೂ ಹೆಚ್ಚು ಜನರು ವಾಸಿಸುತ್ತಿದ್ದು 18 ವಿಧಾನಸಭೆ, 3 ಲೋಕಸಭೆ ಕ್ಷೇತ್ರದ ವ್ಯಾಪ್ತಿಯನ್ನು ಹೊಂದಿರುದೆ. ಇಲ್ಲಿ 14 ತಾಲೂಕು, 6 ಆರ್‍ಟಿಓ ಕಚೇರಿ, 506 ಗ್ರಾಮ ಪಂಚಾಯತ್, 345 ತಾಲೂಕು ಪಂಚಾಯತ್ ಸದಸ್ಯರು, 90 ಜಿಲ್ಲಾ ಪಂಚಾಯತ್ ಸದಸ್ಯರಿದ್ದಾರೆ.
ಇದನ್ನೂ ಓದಿ:ವಿಧಾನ ಪರಿಷತ್ ಚುನಾವಣೆ: ಬೆಳಗಾವಿ ಹಾಗೂ ಹುಬ್ಬಳ್ಳಿ ಎರಡೂ ಕ್ಷೇತ್ರಗಳದ್ದೂ ಒಂದೇ ಕಥೆ-ವ್ಯಥೆ…
ಈ ಹಿಂದೆ ಜೆಎಚ್ ಪಟೇಲ್, ಬೆಳಗಾವಿ ವಿಭಜನೆ ಮಾಡಿ ಚಿಕ್ಕೋಡಿ ಜಿಲ್ಲೆ ರಚಿಸಲು ಆದೇಶ ನೀಡಿದ್ದರು. ಈ ಕುರಿತಾಗಿ ಕನ್ನಡಪರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಈ ಆದೇಶವನ್ನು ತಡೆಹಿಡಿದಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + 15 =
Remember me
