ಬೆಳಗಾವಿ:ಉಪನ್ಯಾಸಕನ ವಿರುದ್ಧ ಅಸಭ್ಯ ವರ್ತಿಸಿದ ಆರೋಪ ಕೇಳಿಬಂದಿದ್ದು, ಕಾಲೇಜಿನ ಸ್ಟಾಫ್ ರೂಮ್‌ನಲ್ಲೇ ಉಪನ್ಯಾಸಕಿಯರು ಉಪನ್ಯಾಸಕನಿಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಏಪ್ರಿಲ್ 12 ರಂದು ಬೆಳಗಾವಿಯ ಸರ್ಕಾರಿ ಸರ್ದಾರ್ ಪಿಯು ಕಾಲೇಜಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಕಾಲೇಜಿನ ಖಾಯಂ ಉಪನ್ಯಾಸಕನನ್ನು ಅತಿಥಿ ಉಪನ್ಯಾಸಕಿಯರು ಹಿಗ್ಗಾಮುಗ್ಗಾ ಥಳಿಸಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇಂಗ್ಲಿಷ್ ವಿಭಾಗದ ಖಾಯಂ ಉಪನ್ಯಾಸಕ ಅಮಿತ್ ಬಸವಮೂರ್ತಿಗೆ ಕಾಲಿನಿಂದ ಒದ್ದು ಚಪ್ಪಲಿ ಹಾಗೂ ಕೋಲಿನಿಂದ ಧರ್ಮದೇಟು ನೀಡಲಾಗಿದೆ.
ನಿತ್ಯ ಮದ್ಯ ಸೇವಿಸಿ ಕಾಲೇಜಿಗೆ ಆಗಮಿಸುತ್ತಿದ್ದರು. ಇದಲ್ಲದೆ, ಮಹಿಳಾ ಸಿಬ್ಬಂದಿ ಇರುವ ವಿಶ್ರಾಂತಿ ಕೊಠಡಿಗೆ ತೆರಳಿ ಅಸಭ್ಯ ವರ್ತಿಸುತ್ತಿದ್ದರು ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದರು. ಈ ಬಗ್ಗೆ ಕಾಲೇಜಿನ ಪ್ರಾಂಶುಪಾಲರಿಗೆ ದೂರು ನೀಡಿದರೂ ಕ್ರಮ ಕೈಗೊಳ್ಳದ ಹಿನ್ನೆಲೆ ನಾವೇ ಥಳಿಸಿದೆವು ಎಂದು ಉಪನ್ಯಾಸಕಿಯರು ಹೇಳಿಕೊಂಡಿದ್ದಾರೆ.
ಇದೀಗ ಉಪನ್ಯಾಸಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬೆಳಗಾವಿಯ ಮಹಿಳಾ‌ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ.(ದಿಗ್ವಿಜಯ ನ್ಯೂಸ್​)
ಗುಪ್ತಾಂಗದಲ್ಲಿ ಮದ್ಯದ ಬಾಟಲ್​ ತೂರಿಸಿ ಚಿತ್ರಹಿಂಸೆ: ಸ್ಟಾರ್​ ನಟನ ವಿರುದ್ಧ ನಟಿಯಿಂದ ಗಂಭೀರ ಆರೋಪ

ತೊಂದರೆ ಕೊಟ್ರೆ ಭಾರತ ಯಾರನ್ನೂ ಬಿಡುವುದಿಲ್ಲ: ಚೀನಾಗೆ ಎಚ್ಚರಿಕೆ ಸಂದೇಶ ರವಾನಿಸಿದ ರಕ್ಷಣಾ ಸಚಿವರು

ಒಂದೇ ವರ್ಷ16 ಚಿತ್ರಗಳು; ಡಾ.ರಾಜ್ ಉತ್ಸವ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 3 =
Remember me
