ಬೆಳಗಾವಿ:ಮದುವೆ ದಿನಾಂಕ ನಿಶ್ಚಯ ಮಾಡಲು ಸ್ವಗ್ರಾಮಕ್ಕೆ ಆಗಮಿಸುತ್ತಿದ್ದ ಯೋಧ ಆಕಸ್ಮಿಕವಾಗಿ ರೈಲಿನಿಂದ ಕಾಲು ಜಾರಿ ಕೆಳಗೆ ಬಿದ್ದು ಮೃತಪಟ್ಟಿರುವ ಕರುಣಾಜನಕ ಘಟನೆ ಪಂಜಾಬ್​ನ ಲೂಧಿಯಾನ ರೈಲು ನಿಲ್ದಾಣದ ಸಮೀಪದಲ್ಲಿ ಗುರುವಾರ (ಜೂ.8) ನಡೆದಿದೆ.
ಕಾಶಿನಾಥ್ ಶಿಂದಿಗಾರ (28) ಮೃತ ಯೋಧ. ಈತ ಗೋಕಾಕ ತಾಲೂಕಿನ ಕನಸಗೇರಿ ಗ್ರಾಮದ ನಿವಾಸಿ. 8 ವರ್ಷಗಳ ಹಿಂದೆ ಸೇನೆಗೆ ಸೇರಿದ್ದ. ಇತ್ತೀಚೆಗಷ್ಟೇ ಕಾಶಿನಾಥ್​ಗೆ ನಿಶ್ಚಿತಾರ್ಥ ಆಗಿತ್ತು. ಮದುವೆಯ ದಿನಾಂಕ ನಿಗದಿ ಮಾಡಲು ಪಾಲಕರು ನಿರ್ಧರಿಸಿದ್ದರು. ಈ ಹಿನ್ನೆಲೆಯಲ್ಲಿ ಕಾಶಿನಾಥ್​, ಪಂಜಾಬ್​ನಿಂದ ರೈಲು ಮೂಲಕ ಸ್ವಗ್ರಾಮಕ್ಕೆ ಆಗಮಿಸುತ್ತಿದ್ದ. ಆದರೆ, ಮಾರ್ಗಮಧ್ಯೆ ಕಾಲು ಜಾರಿ ರೈಲಿನಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ.
ಇದನ್ನೂ ಓದಿ:ವಿಮಾನ ಪತನ: ಅಮೆಜಾನ್​ ಕಾಡಲ್ಲಿ ಮೃತದೇಹಗಳ ಮಧ್ಯೆ ಬದುಕುಳಿದಿದ್ದ ನಾಲ್ವರು ಮಕ್ಕಳು 40 ದಿನಗಳ ಬಳಿಕ ಪತ್ತೆ
ಸ್ವಗ್ರಾಮಕ್ಕೆ ಯೋಧನ ಪಾರ್ಥಿವ ಶರೀರ ಆಗಮಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇಡೀ ಗ್ರಾಮದಲ್ಲಿ ದುಃಖದ ಕಾರ್ಮೋಡ ಆವರಿಸಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಸ್ವಗ್ರಾಮದಲ್ಲೇ ಅಂತ್ಯಕ್ರಿಯೆ ಸಿದ್ಧತೆ ಮಾಡಲಾಗಿದೆ.(ದಿಗ್ವಿಜಯ ನ್ಯೂಸ್​)
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮಗ ಜಸ್ಟ್​ ಪಾಸ್: ಸಂಭ್ರಮಿಸಿದ ಪಾಲಕರು, ನೆಟ್ಟಿಗರ ಪ್ರತಿಕ್ರಿಯೆ ವೈರಲ್​

ಬಿಜೆಪಿ ಭೂ ಹಂಚಿಕೆ ಕೈ ತನಿಖೆ: ಆರು ತಿಂಗಳ ಹಿಂದಿನ ಭೂಮಿ ಮಂಜೂರು ಪ್ರಕರಣಗಳ ಪರಾಮರ್ಶೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − thirteen =
Remember me
