ಚಿಕ್ಕೋಡಿ:ಶ್ರೀರಾಮಸೇನೆ ಕಾರ್ಯಕರ್ತನೊಬ್ಬ ತಲವಾರ್​ನಿಂದ ಕೈ ಬೆರಳು ಕೋಯ್ದು ರಕ್ತದಿಂದ ದುರ್ಗಾದೇವಿಗೆ ತಿಲಕವಿಟ್ಟ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಸ್ತವಾಡ ಗ್ರಾಮದಲ್ಲಿ ನಡೆದಿದೆ.

ನವರಾತ್ರಿ ಉತ್ಸವದಲ್ಲಿ ಶ್ರೀರಾಮಸೇನೆ ಕಾರ್ಯಕರ್ತರೊಬ್ಬರು ತನ್ನ ಬೆರಳನ್ನು ತಲವಾರ್‌ನಿಂದ ಕೊಯ್ದುಕೊಂಡು ದುರ್ಗಾದೇವಿ ಮೂರ್ತಿಗೆ ತಿಲಕವಿಟ್ಟ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಸ್ತವಾಡ ಗ್ರಾಮದಲ್ಲಿ ನಡೆದಿದೆ. ಸದ್ಯ ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ವಿಡಿಯೋದಲ್ಲಿ ಏನಿದೆ?:ಬಸ್ತವಾಡ ಗ್ರಾಮದ ಕಾಡಸಿದ್ದೇಶ್ವರ ದೇವಸ್ಥಾನದ ಬಳಿ ಗ್ರಾಮದ ದುರ್ಗಾಮಾತಾ ಉತ್ಸವ ಕಮೀಟಿ ನವರಾತ್ರಿ ಉತ್ಸವದ ಹಿನ್ನೆಲೆ ಪ್ರತಿಷ್ಠಾಪಿಸಿರುವ ದುರ್ಗಾದೇವಿ ಮೂರ್ತಿಗೆ ಶ್ರೀರಾಮಸೇನೆ ಕಾರ್ಯಕರ್ತ ತನ್ನ ಬೆರಳು ಕೊಯ್ದುಕೊಂಡು ದೇವಿಯ ಮೂರ್ತಿಯ ಹಣೆಗೆ ರಕ್ತದ ತಿಲಕ ಹಚ್ಚಲಾಗಿದೆ.

ನವರಾತ್ರಿ ಹಿನ್ನೆಲೆ ಹುಕ್ಕೇರಿ ತಾಲೂಕಿನ ವಿವಿಧೆಡೆ ‘ದುರ್ಗಾ ಮಾತಾ ದೌಡ್’ ಆಯೋಜನೆ ಮಾಡಲಾಗಿದ್ದು, ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಕೈಯಲ್ಲಿ ತಲವಾರ್ ಹಿಡಿದು ಮೆರವಣಿಗೆ ನಡೆಸಿದ್ದಾರೆ. ಕೈಯಲ್ಲಿ ತಲವಾರ್ ಹಿಡಿದು ಯುವಕ, ಯುವತಿಯರು ದೌಡ್‌ನಲ್ಲಿ ಭಾಗಿಯಾದರು.
VIDEO | 319 ವೈನ್ ಗ್ಲಾಸ್​​ ತಲೆ ಮೇಲೆ ಹೊತ್ತು ವಿಶ್ವ ದಾಖಲೆ ಬರೆದ; ಕೊನೆಗೆ ಈತ ಮಾಡಿದ್ದೇನು?


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + 19 =
Remember me
