ಬೆಳಗಾವಿ:ಹೊರವಲಯದ ಸುವರ್ಣ ವಿಧಾನಸೌಧದ ಬಳಿ ಹಿಂದೂ ಕಾರ್ಯಕರ್ತರು ಮಹಾರಾಷ್ಟ್ರದಿಂದ ಹುಬ್ಬಳ್ಳಿ ಕಡೆಗೆ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ತಡೆದು ಚಾಲಕ ಮತ್ತು ಕ್ಲೀನರ್ ಮೇಲೆ ಹಲ್ಲೆ ನಡೆಸಿದ್ದಾರೆ.
ಇದನ್ನೂ ಓದಿ:ಕಾಂಗ್ರೆಸ್​ನ ಚೊಂಬಾಸ್ತ್ರಕ್ಕೆ ಹುಬ್ಬಳ್ಳಿಯಲ್ಲಿ ತಿರುಗೇಟು ನೀಡಿದ ಜೆಪಿ ನಡ್ಡಾ!
ಉದ್ರಿಕ್ತ ಯುವಕರ ಗುಂಪು ಚಾಲಕ ಮತ್ತು ಕ್ಲೀನರ್‌ನನ್ನು ಥಳಿಸಿ ಲಾರಿ ಗಾಜು ಪುಡಿ ಪುಡಿಗೊಳಿಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿ ಗಾಯಗೊಂಡಿರುವ ಚಾಲಕ ಮತ್ತು ಕ್ಲೀನರ್‌ನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.
ರಸ್ತೆ ತಡೆದು ಪ್ರತಿಭಟನೆ: ಮಾಜಿ ಸಿಎಂ ಜಗದೀಶ ಶೆಟ್ಟರ್, ಶಾಸಕ ಅಭಯ ಪಾಟೀಲ, ಮಾಜಿ ಶಾಸಕ ಸಂಜಯ ಪಾಟೀಲ ಸೇರಿ ಬಿಜೆಪಿ ಮುಖಂಡರು ಸ್ಥಳಕ್ಕೆ ದೌಡಾಯಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ರಸ್ತೆ ಸಂಚಾರ ತಡೆದು ಪ್ರತಿಭಟಿಸಿದರು.
ಅಕ್ರಮವಾಗಿ ಗೋವುಗಳ ಸಾಗಣೆ ನಡೆಯುತ್ತಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಲಾರಿ ತಡೆದು ಕ್ರಮ ಕೈಗೊಳ್ಳಬೇಕಾದ ಪೊಲೀಸರ ಕೆಲಸವನ್ನು ಸಾರ್ವಜನಿಕರು ಮಾಡುವ ಪರಿಸ್ಥಿತಿ ಬಂದಿದೆ ಎಂದು ಶ್ರೀರಾಮಸೇನೆ ಹಿಂದುಸ್ತಾನ ಸಂಘಟನೆ ಅಧ್ಯಕ್ಷ ರಮಾಕಾಂತ ಕೊಂಡೂಸ್ಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹುಬ್ಬಳ್ಳಿ ಕಡೆಗೆ ಹೊರಟಿದ್ದ ಲಾರಿಯಲ್ಲಿ 10 ರಿಂದ 12 ಗೋವುಗಳನ್ನು ಸಾಗಾಟ ಮಾಡಲಾಗುತ್ತಿತ್ತು. ಹಿರೇಬಾಗೇವಾಡಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾನುವಾರು ಸಾಗಿಸುತ್ತಿದ್ದ ಲಾರಿ ತಡೆದ ಯುವಕರ ಗುಂಪು ಪ್ರತಿಭಟನೆ ನಡೆಸಿದೆ. ಪರಿಸ್ಥಿತಿ ನಿಯಂತ್ರಿಸಲಾಗಿದ್ದು, ಹಸುಗಳನ್ನು ಎಲ್ಲಿಂದ ಎಲ್ಲಿಗೆ ಸಾಗಿಸಲಾಗುತ್ತಿತ್ತು ಎಂಬ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ. ನಿಯಮ ಮೀರಿದ್ದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬೆಳಗಾವಿ ಡಿಸಿಪಿ ರೋಹನ್ ಜಗದೀಶ್​ ಅವರು ತಿಳಿಸಿದ್ದಾರೆ.
ಹಿಂದೂ ಹುಡುಗಿಯರನ್ನು ಲವ್ ​ಯಾಕೆ ಮಾಡ್ತೀರಿ..? ನಿಮ್ಮ ಧರ್ಮದಲ್ಲೇ 5 ಮದುವೆ ಮಾಡಿಕೊಳ್ಳಿ: ಪ್ರಥಮ್​ ಆಕ್ರೋಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + nine =
Remember me
