ಬೆಳಗಾವಿ:ಕೇಂದ್ರ ಚುನಾವಣಾ ಆಯೋಗದ ವತಿಯಿಂದ ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಕೊಡಮಾಡುವ ಅತ್ಯುತ್ತಮ “ಜಿಲ್ಲಾ ಚುನಾವಣಾಧಿಕಾರಿ” ಪ್ರಶಸ್ತಿಗೆ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಭಾಜನರಾಗಿದ್ದಾರೆ.
ಬೆಂಗಳೂರಿನ ಸರ್ ಪುಟ್ಟಣ್ಣ ಚೆಟ್ಟಿ ಟೌನ್ ಹಾಲ್​ನಲ್ಲಿ ಜ.25 ರಂದು ಮಧ್ಯಾಹ್ನ 1 ಗಂಟೆಗೆ ನಡೆಯಲಿರುವ “ರಾಷ್ಟ್ರೀಯ ಮತದಾರರ ದಿನಾಚರಣೆ” ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಶಸ್ತಿಯನ್ನು ಪ್ರದಾನ‌ ಮಾಡಲಿದ್ದಾರೆ.
ಮತದಾರರ ನೋಂದಣಿ, ಪರಿಷ್ಕರಣೆ ಸೇರಿದಂತೆ ಒಟ್ಟಾರೆ ಚುನಾವಣಾ ಕಾರ್ಯವನ್ನು ಅತ್ಯುತ್ತಮವಾಗಿ ಕಾರ್ಯನಿರ್ವಹಣೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.
ಇದೇ ರೀತಿ ತುಮಕೂರು, ಯಾದಗಿರಿ ಮತ್ತು ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೂ ಪ್ರಶಸ್ತಿ ನೀಡಲಾಗುತ್ತಿದೆ. ಇದಲ್ಲದೇ ವಿವಿಧ ಜಿಲ್ಲೆಗಳ ಮತದಾರರ ನೋಂದಣಾಧಿಕಾರಿಗಳು, ಸಹಾಯಕ ನೋಂದಣಾಧಿಕಾರಿಗಳು, ಬೂತ್ ಮಟ್ಟದ ಅಧಿಕಾರಿಗಳು, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಚುನಾವಣಾ ಶಾಖೆಯ ತಾಂತ್ರಿಕ ಸಿಬ್ಬಂದಿಗೂ ಪ್ರತ್ಯೇಕ ವಿಭಾಗಗಳಲ್ಲಿ ಪ್ರಶಸ್ತಿ ಘೋಷಿಸಲಾಗಿದೆ ಎಂದು ಚುನಾವಣಾ ಆಯೋಗ ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 4 =
Remember me
