ಉಗರಗೋಳ (ಬೆಳಗಾವಿ):ಬಿಸಿಲ ಬೇಗೆಗೆ ಬೇಸತ್ತಿದ್ದ ಭುವಿಗೆ ಕಳೆದ ಕೆಲವು ದಿನಗಳಿಂದ ಮಳೆರಾಯ ತಂಪೆರೆದಿದ್ದಾನೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಯಲ್ಲಮ್ಮನ ಗುಡ್ಡದಲ್ಲಿ ಸುತ್ತ ಗುರುವಾರ ಸುರಿದ ಧಾರಾಕಾರ ಮಳೆಯಿಂದ ಅಪಾರ ಪ್ರಮಾಣದ ನೀರು ದೇವಸ್ಥಾನದ ಒಳಗೆ ನುಗ್ಗಿತು.
ಇದನ್ನೂ ಓದಿ:ಸಿಎಂ ಸಿದ್ದರಾಮಯ್ಯಗೆ ರಾಜೀನಾಮೆ ಪತ್ರ ಸಲ್ಲಿಸಿದ ಬಿ.ನಾಗೇಂದ್ರ
ನಿರಂತರವಾಗಿ ಸುರಿದ ಮಳೆಯಿಂದ ಸುತ್ತಲಿನ ಗುಡ್ಡಗಳಿಂದ ಹರಿದು ಬಂದ ನೀರು ಅಲ್ಲಿನ ಎಣ್ಣೆಕೊಂಡ ಸೇರಿತು. ಹೊಂಡ ತುಂಬಿದ ಬಳಿಕ ದೇವಸ್ಥಾನದ ಪ್ರಾಂಗಣಕ್ಕೂ ನುಗ್ಗಿತು. ಹಾಗಾಗಿ ದೇವಿ ದರ್ಶನಕ್ಕಾಗಿ ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಬಂದಿದ್ದ ಭಕ್ತರು ಪರದಾಡಿದರು. ಈ ಹಿಂದೆ ಎಣ್ಣೆ ಹೊಂಡ ತುಂಬಿ ಹರಿದರೂ, ಮಳೆ ನೀರು ಸರಾಗವಾಗಿ ಹರಿದುಹೋಗುತ್ತಿತ್ತು. ಆದರೆ, ಈ ಬಾರಿ ಚರಂಡಿಗಳು ಬ್ಲಾಕ್ ಆಗಿದ್ದರಿಂದ ದೇವಸ್ಥಾನಕ್ಕೆ ನೀರು ನುಗ್ಗಿದೆ.
ಮಳೆಯ ಹಿನ್ನೆಲೆ ದೇವಿಯ ದೇವಸ್ಥಾನದ ಸುತ್ತಮುತ್ತ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಅಲ್ಲದೆ ನೀರಿನ ಹರಿವು ಹೆಚ್ಚಾಗಿದ್ದಕ್ಕೆ ದೇವಸ್ಥಾನದ ಸುತ್ತಮುತ್ತ ಇದ್ದ ಅಂಗಡಿ ಮುಂಗಟ್ಟುಗಳಲ್ಲಿ ಭಕ್ತರು ನಿಂತಿದೆ. ಬೈಲಹೊಂಗಲ, ಗೋಕಾಕ್, ರಾಮದುರ್ಗ ಮತ್ತು ರಾಯಬಾಗ ತಾಲೂಕಿನಲ್ಲೂ ಉತ್ತಮ ಮಳೆ ಸುರಿದಿದೆ.
ಕಾಂಗ್ರೆಸ್​ಗೆ ಬೆಂಬಲ ನೀಡಿದ ಮಹಾರಾಷ್ಟ್ರದ ಪಕ್ಷೇತರ ಸಂಸದ ವಿಶಾಲ್!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:four × 4 =
Remember me
