ಬೆಳಗಾವಿ:ನಾಲ್ಕು ವರ್ಷದ ಬಾಲಕನನ್ನು ಕುಡಗೋಲಿನಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಹಾರೋಗೊಪ್ಪ ಗ್ರಾಮದಲ್ಲಿ ನಡೆದಿದೆ. ಆಸ್ತಿ ವಿಚಾರದಲ್ಲಿ ನಡೆದ ಜಗಳದಿಂದಾಗಿ ಈ ಕೊಲೆ ನಡೆದಿರುವುದಾಗಿ ತಿಳಿಸಲಾಗಿದೆ.
ಇದನ್ನೂ ಓದಿ:ಡ್ರ್ಯಾಗನ್​ಫ್ರುಟ್​ ಈಗ ‘ಕಮಲಂಫ್ರುಟ್​’ ಮರುನಾಮಕರಣಕ್ಕೆ ಕಾರಣ ಏನು ಗೊತ್ತಾ?
ಮಾರುತಿ ವೀರಪ್ಪ ಸಂಕನ್ನವರ (4) ಕೊಲೆಯಾದ ಬಾಲಕ. ಮಗುವನ್ನು ಆಟವಾಡಲೆಂದು ಮನೆಯಲ್ಲೇ ಬಿಟ್ಟು ತಂದೆ ತಾಯಿ ಹೋಲಕ್ಕೆ ಕೆಲಸಕ್ಕೆ ಹೋಗಿದ್ದರು. ಮಗು ಭಿರೇಶ್ವರ ದೇವಸ್ಥಾನದ ಮುಂಭಾಗ ಆಟವಾಡುತ್ತಿದ್ದಾಗ ಕುಡಗೋಲಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಮಗುವಿನ ದೊಡ್ಡಪ್ಪ ಈರಪ್ಪ ಸಂಕನ್ನವರ ಈ ಕೊಲೆ ಮಾಡಿದ್ದಾನೆ. ಕೊಲೆ ಮಾಡಿದ ನಂತರ ಆತ ಅಲ್ಲಿಂದ ಪರಾರಿಯಾಗಿದ್ದಾನೆ.
ಇದನ್ನೂ ಓದಿ:ದಿಶಾ ಸಭೆ: ಸಂಸದೆ ಸುಮಲತಾ ಟಾಪರ್​- ಕೇಂದ್ರದ ವೆಬ್​ಸೈಟ್​ನಲ್ಲಿಯೂ ಹೆಸರು ಉಲ್ಲೇಖ
ಮೃತ ಬಾಲಕನ ತಂದೆ ಹಾಗೂ ಕೊಲೆ ಮಾಡಿದ ಆರೋಪಿ ಈರಪ್ಪನ ನಡುವೆ ಈ ಹಿಂದೆ ಜಮೀನು ವಿಚಾರದಲ್ಲಿ ಗಲಾಟೆ ನಡೆದಿತ್ತು. ಪಿತ್ರಾರ್ಜಿತ ಆಸ್ತಿ ವಿವಾದಕ್ಕೆ‌ ಸಂಬಂಧಿಸಿದಂತೆ ವೈಮನಸ್ಸು ಉಂಟಾಗಿತ್ತು. ಅದೇ ಕಾರಣದಿಂದಾಗಿ ಮಗುವನ್ನು ಕೊಲೆ ಮಾಡಿರುವುದಾಗಿ ತಿಳಿಸಲಾಗಿದೆ. ಮುರಗೋಡ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗೆ ಹುಡುಕಾಟ ನಡೆಸಲಾಗುತ್ತಿದೆ. (ದಿಗ್ವಿಜಯ ನ್ಯೂಸ್​)
ಪ್ಲೀಸ್​ ಬಾಗಿಲು ತೆಗಿ.. ನಾವೆಲ್ಲ ಇದ್ದೇವೆ.. ಎಂದು ಗೋಗರೆಯುತ್ತಿದ್ದರೂ ನೋಡನೋಡುತ್ತಿದ್ದಂತೆ ನೇಣಿಗೆ ಶರಣಾದ!

ಗಂಡ ಊರಿನಲ್ಲಿ ಇಲ್ಲದಾಗ ನನ್ನ ಕರೆದು ಏನೇನೋ ಮಾಡಿದಳು- ಈಗ ದಿಕ್ಕೇ ತೋಚದಾಗಿದೆ, ಏನು ಮಾಡಲಿ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 1 =
Remember me
