ಬಳ್ಳಾರಿ:ಲೋಕಸಭಾ ಚುನಾವಣೆ ವೇಳೆ ಬಳ್ಳಾರಿಯಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ಮಾಡಿದ್ದಾರೆ. ಬ್ರೂಸ್‌ಪೇಟೆ ಮನೆ ಮೇಲೆ ದಾಳಿ ನಡೆಸಿದ ಖಾಕಿಪಡೆ, ದಾಖಲೆಗಳಿಲ್ಲದ 5.6 ಕೋಟಿ ರೂ. ನಗದು ಹಾಗೂ 3 ಕೆಜಿ ಬಂಗಾರ, 68 ಕೆಜಿ ಬೆಳ್ಳಿ ಗಟ್ಟಿ, 103 ಕೆಜಿ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ಇದನ್ನೂ ಓದಿ:ಅಶ್ವಿನಿ ಪುನೀತ್​​ರಾಜ್​ಕುಮಾರ್​ ಬೆಂಬಲಕ್ಕೆ ನಿಂತ ನಟ ಜಗ್ಗೇಶ್; ನೇರವಾಗಿ ಇವರ ವಿರುದ್ಧ ಆಕ್ರೋಶ
ಖಚಿತ ಮಾಹಿತಿ ಮೇರೆಗೆ ಪೊಲೀಸರು ಈ ದಾಳಿ ನಡೆಸಿದ್ದು, ನಗರದ ಬ್ರೂಸ್ ಪೇಟೆ ಠಾಣೆ ವ್ಯಾಪ್ತಿಯಲ್ಲಿ ದಾಖಲೆ ಇಲ್ಲದೇ ಹಣವನ್ನ ಕಾರಿನಲ್ಲಿ ಸಾಗಿಸುತ್ತಿದ್ದ ವ್ಯಕ್ತಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಎಲ್ಲ ವಸ್ತುಗಳನ್ನು ಮಹಜರು ಮಾಡಿ ವಶಕ್ಕೆ ಪಡೆದುಕೊಂಡಿದ್ದಾರೆ. 98 ಕೆಪಿ ಆ್ಯಕ್ಟ್ ಅಡಿ ಪ್ರಕರಣವನ್ನು ದಾಖಲಿಸಿ ಆದಾಯ ತೆರಿಗೆ ಇಲಾಖೆಗೆ ಇದನ್ನು ಹಸ್ತಾಂತರ ಮಾಡಲಾಗುವುದು. ಈ ಪ್ರಕರಣದಲ್ಲಿ ಹೇಮಾ ಜ್ಯುವೆಲರ್ಸ್ ಮಾಲೀಕರಾದ ನರೇಶ್ ಸೋನಿ ಮನೆಯಲ್ಲಿ ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ತಿಳಿಸಿದ್ದಾರೆ.
98 ಕೆಪಿ ಆ್ಯಕ್ಟ್ ಅಡಿ ಪ್ರಕರಣ ದಾಖಲಿಸಿ ಆದಾಯ ತೆರಿಗೆ ಇಲಾಖೆಗೆ ಪ್ರಕರಣ ಹಸ್ತಾಂತರ ಮಾಡುತ್ತೇವೆ. ಈಗಗಲೇ ನರೇಶ್ ಸೋನಿಗೆ ನೋಟೀಸ್ ಜಾರಿ ಮಾಡಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಎಸ್ಪಿ ಹೇಳಿದರು.
ಗಜಪಡೆಯ ಕೀಳು ಮಟ್ಟದ ಪೋಸ್ಟ್‌ ವಿಚಾರಕ್ಕೆ ಸ್ಟ್ರಾಂಗ್ ಕೌಂಟರ್ ಕೊಟ್ಟ ಆ್ಯಂಕರ್ ಅನುಶ್ರೀ! ಏನಿದೆ ಪೋಸ್ಟ್​ನಲ್ಲಿ ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + seventeen =
Remember me
