ಬಳ್ಳಾರಿ:ಮಾರಕ ವೈರಸ್ ಕೊರೊನಾ ಭೀತಿಯು ಗಣಿ ಜಿಲ್ಲೆ ಬಳ್ಳಾರಿಗೂ ಆವರಿಸದೆಯಾ ಎಂಬ ಆತಂಕ ಎದುರಾಗಿದೆ. ಜಿಲ್ಲೆಯ ಹೊಸಪೇಟೆ ಹಾಗೂ ಸಂಡೂರು ತಾಲೂಕಿನ ಜಿಂದಾಲ್​ನಲ್ಲಿ ಎರಡು ಶಂಕಿತ ಪ್ರಕರಣಗಳು ಪತ್ತೆಯಾಗಿವೆ.
ದುಬೈನಿಂದ ಬಂದ ಹೊಸಪೇಟೆಯ ವ್ಯಕ್ತಿಯೊಬ್ಬನಿಗೆ ಕೊರೊನಾ ಲಕ್ಷಣಗಳು ಕಂಡುಬಂದಿವೆ. ಆತನನ್ನು ತಪಾಸಣೆಗೂ ಒಳಪಡಿಸಿದ್ದು, ರಕ್ತ ಮಾದರಿಗಳನ್ನು ಪರೀಕ್ಷೆಗೆ ಬೆಂಗಳೂರಿನ ಪ್ರಯೋಗಾಲಯಕ್ಕೆ ಗುರುವಾರವೇ ಕಳುಹಿಸಲಾಗಿದೆ. ಅಲ್ಲಿಂದ ವರದಿ ಬಂದ ನಂತರ ಪ್ರಕರಣ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲಿದೆ.
ಮತ್ತೊಂದು ಪ್ರಕರಣ ತೋರಣಗಲ್ಲಿನ ಜಿಂದಾಲ್ ಪ್ರದೇಶದಿಂದ ವರದಿಯಾಗಿದೆ. ಕೊರೊನಾ ಶಂಕಿತ ಆ ವ್ಯಕ್ತಿಯ ರಕ್ತದ ಮಾದರಿಯನ್ನೂ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ಖಚಿತಪಡಿಸಿವೆ.
ಕೊರೊನಾ ಬಗ್ಗೆ ಆತಂಕಪಡುವ ಅಗತ್ಯವಿಲ್ಲ. ಹೊರಗಿಂದ ಬಂದಂತಹ ವ್ಯಕ್ತಿಗಳಿಗೆ ಇರಬಹುದು ಎಂದು ಪರೀಕ್ಷೆ ಮಾಡಲಾಗಿದೆ. ನಮ್ಮ ಜನರಲ್ಲಿ ಕೊರೊನಾ ವೈರಸ್ ಬಗ್ಗೆ ಯಾವುದೇ ಗುಣ ಲಕ್ಷಣ ಕಂಡು‌ಬಂದಿಲ್ಲ. ಜನರು ಯಾವುದೇ ಕಾರಣಕ್ಕೆ ವದಂತಿ ಸುದ್ದಿಗಳಿಗೆ ಕಿವಿಗೊಡಬೇಡಿ. ಇಲ್ಲಿ ಸಕಾಲಕ್ಕೆ ಚಿಕಿತ್ಸೆ ನೀಡಲು ಜಿಲ್ಲಾಡಳಿತ ಸಕಲ‌ ಸಿದ್ದತೆ ಮಾಡಿಕೊಂಡಿದೆ ಎಂದು ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + seven =
Remember me
