ಬಳ್ಳಾರಿ:ವೈದ್ಯ ಹಣಮಂತ ದಡ್ಡಿ ಹಾಗೂ ಶಿಕ್ಷಣ ತಜ್ಞ ವೂಡೇ ಪಿ.ಕೃಷ್ಣ ಅವರಿಗೆ ಸೋಮವಾರ ಕನ್ನಡ ವಿವಿಯ ಮಂಟಪ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ 28ನೇ ನುಡಿಹಬ್ಬ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ನಾಡೋಜ ಪುರಸ್ಕಾರ ಪ್ರದಾನ ಮಾಡಿದರು.
ನುಡಿಹಬ್ಬದಲ್ಲಿ ಇಬ್ಬರಿಗೆ ಡಿ.ಲಿಟ್ ಹಾಗೂ 74 ಜನರಿಗೆ ಪಿಎಚ್‌ಡಿ ಪದವಿ ಪ್ರದಾನ ಮಾಡಲಾಯಿತು. ನ್ಯಾಕ್ ಸಮಿತಿ ನಿರ್ದೇಶಕ ಪ್ರೊ.ಎಸ್.ಸಿ.ಶರ್ಮಾ, ಕುಲಪತಿ ಸ.ಚಿ.ರಮೇಶ, ಕುಲಸಚಿವ ಎ.ಸುಬ್ಬಣ್ಣ ರೈ ಹಾಗೂ ಇತರರು ಹಾಜರಿದ್ದರು. ರಾಜ್ಯಪಾಲ ವಜೂಭಾಯಿ ವಾಲಾ ಗೈರಾಗಿದ್ದರು. ಕೋವಿಡ್ ಮಾರ್ಗಸೂಚಿಗಳ ಪಾಲನೆ ಹಿನ್ನೆಲೆಯಲ್ಲಿ ಸೀಮಿತ ಜನರಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿತ್ತು. ಕಾರ್ಯಕ್ರಮದ ವೀಕ್ಷಣೆಗೆ ಆನ್‌ಲೈನ್ ವ್ಯವಸ್ಥೆ ಮಾಡಲಾಗಿತ್ತು.
ಮಹತ್ವದ ಕೊಡುಗೆ ನೀಡಿದವರಿಗೆ ಗೌರವ:ಭಾಷೆ, ಸಾಹಿತ್ಯ, ಸಂಸ್ಕೃತಿ, ಸಮಾಜ ಹಾಗೂ ಕಲೆಗೆ ಮಹತ್ವದ ಕೊಡುಗೆ ನೀಡಿದವರಿಗೆ ಕನ್ನಡ ವಿವಿಯಿಂದ ನಾಡೋಜ ಗೌರವ ಪ್ರದಾನ ಮಾಡಲಾಗುತ್ತಿದೆ. ಬಾಗಲಕೋಟೆ ಜಿಲ್ಲೆ ಜಮಖಂಡಿಯಲ್ಲಿ ಖಾಸಗಿ ಆಸ್ಪತ್ರೆ ಹೊಂದಿರುವ ಡಾ.ಹಣಮಂತ ದಡ್ಡಿ ವಿವಿಧ ಸಂಘ, ಸಂಸ್ಥೆಗಳ ಮೂಲಕ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿದ್ದಾರೆ. ಇತಿಹಾಸಕ್ಕೆ ಸಂಬಂಧಿಸಿದ ಕೃತಿಗಳನ್ನು ರಚಿಸಿದ್ದಾರೆ. ಬೆಂಗಳೂರಿನ ಡಾ.ವೂಡೇ ಪಿ.ಕೃಷ್ಣ ಶೇಷಾದ್ರಿಪುರಂ ಶಿಕ್ಷಣ ಸಂಸ್ಥೆಯ ಗೌರವ ಕಾರ್ಯದರ್ಶಿಯಾಗಿದ್ದಾರೆ. ಶಿಕ್ಷಣ, ರಾಷ್ಟ್ರೀಯ, ವಾನವೀಯ ಹಾಗೂ ಯುವಜನ ಸೇವೆಗಳ ಮೂಲಕ ಗುರುತಿಸಿಕೊಂಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + 20 =
Remember me
