ಬಳ್ಳಾರಿ:ಭೀಕರ ರಸ್ತೆ ಅಪಘಾತದಲ್ಲಿ ಪತಿ-ಪತ್ನಿ ಇಬ್ಬರು ದಾರುಣವಾಗಿ ಸಾವಿಗೀಡಾಗಿರುವ ಘಟನೆ ಹೊಸಪೇಟೆಯ ಅನಂತಶಯನ ದೇವಸ್ಥಾನದ ರಸ್ತೆಯಲ್ಲಿ ನಡೆದಿದೆ.
ಹೊಸಪೇಟೆ ನಿವಾಸಿಗಳಾದ ರಾಜು ಹಾಗೂ ಪತ್ನಿ ಶಾಂತ ಮೃತ ದುರ್ದೈವಿಗಳು. ದಂಪತಿ ಟಿವಿಎಸ್​ ಎಕ್ಸಲ್​ನಲ್ಲಿ ದೇವಸ್ಥಾನಕ್ಕೆ ತೆರಳಿದ್ದರು. ಈ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ರಸ್ತೆಯಲ್ಲಿ ಬಿದ್ದು ತೀವ್ರ ರಕ್ತಸ್ರಾವವಾಗಿ ದಂಪತಿ ಪ್ರಾಣಬಿಟ್ಟಿದ್ದಾರೆ.
ಇದನ್ನೂ ಓದಿ:ಅಮ್ಮ ಎಲ್ಲಿ ಎಂದು ಮಗಳನ್ನು ಪ್ರಶ್ನಿಸಿದ ವ್ಯಕ್ತಿಗೆ ಗೊತ್ತಾಯ್ತು ಪತ್ನಿಯ ಅಕ್ರಮ ಸಂಬಂಧ!
ಘಟನಾ ಸ್ಥಳಕ್ಕೆ ಹೊಸಪೇಟೆ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ದಂಪತಿ ಕಳೆದುಕೊಂಡು ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.(ದಿಗ್ವಿಜಯ ನ್ಯೂಸ್​)
ಕಾಲಿನಿಂದ ಒದ್ದ, ಹೊಟ್ಟೆಗೆ, ಮುಖಕ್ಕೆ ಗುದ್ದಿದ- ಕ್ಯಾಮೆರಾಮನ್​ನಿಂದ ಪತ್ರಕರ್ತನ ಮೇಲೆ ಹಲ್ಲೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × one =
Remember me
