– ಬಾಳೆಹಣ್ಣಿನಲ್ಲಿದೆ ಆಯುರ್ವೇದದ ಔಷಧೀಯ ಗುಣಗಳು
ಬೆಂಗಳೂರು:ಎಲ್ಲಾ ಕಾಲದಲ್ಲೂ ಲಭ್ಯವಿರುವ ಹಣ್ಣು ಬಾಳೆಹಣ್ಣು. ಜನಸಾಮಾನ್ಯರಿಗೆ ಕೈಗೆಟಕುವ ಬೆಲೆಯಲ್ಲಿ ಸಿಗುವ ಈ ಬಾಳೆ ಹಣ್ಣು ಉತ್ತಮ ಆರೋಗ್ಯಕ್ಕೆ ಬೇಕಾಗಿರುವ ಪೋಷಕಾಂಶಗಳನ್ನು ಹೊಂದಿದೆ. ಈ ಹಣ್ಣನ್ನು ಪ್ರತಿನಿತ್ಯ ಸೇವನೆ ಮಾಡುವುದರಿಂದ ಕೆಲವು ಕಾಯಿಲೆಗಳಿಂದ ದೂರ ಇರಬಹುದಾಗಿದೆ.
ಬಾಳೆಹಣ್ಣಿನಲ್ಲಿರುವ ಪೋಷಕಾಂಶಗಳು:ಪ್ರೋಟೀನ್, ಪೊಟ್ಯಾಸಿಯಮ್, ಮೆಗ್ನೀಸಿಯಮ್, ವಿಟಮಿನ್-ಎ, ಬಿ, ಸಿ ಮತ್ತು ವಿಟಮಿನ್ ಬಿ6 , ಕಬ್ಬಿಣಂಶ, ಹಾಗೂ ನಾರಿನಾಂಶ ಸೇರಿದಂತೆ, ತನ್ನಲ್ಲಿ ವಿವಿಧ ಬಗೆಯ ಆರೋಗ್ಯಕರ ಗುಣಗಳನ್ನು ಒಳಗೊಂಡಿದೆ.
ಬಾಳೆಹಣ್ಣಿನ ಔಷಧೀಯ ಗುಣಗಳು:ಪ್ರತಿದಿನ ಬಾಳೆಹಣ್ಣನ್ನು ಸೇವಿಸುವುದರಿಂದ ನಿಮ್ಮ ಜ್ಞಾಪಕಶಕ್ತಿಯನ್ನು ಬಲಪಡಿಸುತ್ತದೆ.
ವಿಟಮಿನ್ ಬಿ 6 ಮತ್ತು ಮೆಗ್ನೀಸಿಯಮ್ ಸ್ನಾಯುಗಳನ್ನು ಸಡಿಲಗೊಳಿಸುತ್ತದೆ ಮತ್ತು ನಿದ್ರೆಗೆ ಸಹಾಯ ಮಾಡುತ್ತದೆ.
ಬಾಳೆಹಣ್ಣನ್ನು ತಿನ್ನುವುದರಿಂದ ಅಸಿಡಿಟಿ , ಎದೆ ಉರಿ ಹೊಟ್ಟೆ ಉಬ್ಬರ ಇವು ಕಡಿಮೆಯಾಗುತ್ತವೆ
ಬಾಳೆಹಣ್ಣಿನಲ್ಲಿ ಪೊಟ್ಯಾಸಿಯಂ ಅಂಶ ಹೆಚ್ಚಾಗಿದೆ. ಪೊಟ್ಯಾಸಿಯಂ ಪುರುಷರ ಲೈಂಗಿಕ ಶಕ್ತಿ ಹೆಚ್ಚಿಸುವಲ್ಲಿ ಹಾಗು ವೀರ್ಯಾಣುವಿನ ಬೆಳವಣಿಗೆಯಲ್ಲಿ ಮಹತ್ತರ ಪಾತ್ರ ವಹಿಸುತ್ತದೆ.
ಹಣ್ಣಿನಲ್ಲಿ ಪೊಟ್ಯಾಸಿಯಂ ಅಂಶ ಹೆಚ್ಚಾಗಿರುವುದರಿಂದ , ಇದು ಅಧಿಕ ರಕ್ತದೊತ್ತಡ ಅಥವಾ ಹೈ ಬಿಪಿಯಲ್ಲಿ ಉಪಯುಕ್ತವಾಗಿದೆ.
ಮುಖದ ಸೌಂದರ್ಯ ಹಾಗೂ ಕಾಂತಿಯನ್ನು ವರ್ಧಿಸುವುದಲ್ಲದೆ ಚರ್ಮದ ಆರೋಗ್ಯವನ್ನೂ ವೃದ್ಧಿಸುತ್ತದೆ . ಇದಕ್ಕೆ ಪಕ್ವವಾದ ಬಾಳೆಹಣ್ಣನ್ನು ಚೆನ್ನಾಗಿ ಕಿವುಚಿ ಅದನ್ನು ಮುಖಕ್ಕೆ ಲೇಪಿಸಿ ೨೦ ನಿಮಿಷದ ನಂತರ ಮುಖ ತೊಳೆಯಿರಿ.
ರಾತ್ರಿ ಮಲಗುವ ಮುನ್ನ ಬಾಳೆಹಣ್ಣು ಸೇವಿಸಿ:ರಾತ್ರಿ ಮಲಗುವ ಮುನ್ನ ಒಂದೆರಡು ಬಾಳೆಹಣ್ಣನ್ನು ತಿನ್ನುವುದರಿಂದ ಯಾವುದೇ ಸಮಸ್ಯೆ ಇಲ್ಲ. ಯಾಕೆಂದರೆ ಇದರಲ್ಲಿರುವ ನಾರಿನಾಂಶವು ಜೀರ್ಣಕ್ರಿಯೆಯ ಪ್ರಕ್ರಿಯೆಯನ್ನು ಹೆಚ್ಚಿಸುತ್ತದೆ. ಅಷ್ಟೇ ಅಲ್ಲದೇ ಇದರಲ್ಲಿರುವ ಇರುವಂತಹ ಮೆಗ್ನಿಶಿಯಂ ಅಂಶವು ಒಳ್ಳೆಯ ನಿದ್ರೆಗೆ ಕಾರಣವಾಗುವುದು.
3ನೇ ಪತ್ನಿಗಾಗಿ ನಿದ್ದೆ ಮಾಡುತ್ತಿದ್ದ ಮಗನ ಕತ್ತು ಹಿಸುಕಿ ಕೊಂದ ತಂದೆ; ಹತ್ಯೆ ವಿಡಿಯೋ ಹೆಂಡತಿಗೆ ಕಳುಹಿಸಿದ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 1 =
Remember me
