ಬೆಂಗಳೂರು:ಜುಲೈ 19 ರಂದು ಬನಶಂಕರಿಯಲ್ಲಿ ಬರ್ಬರವಾಗಿ ಹತ್ಯೆಯಾದ ರೌಡಿ ಶೀಟರ್ ಬಬ್ಲಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಶೋಕ್​ನಗರ ಇನ್ಸ್‌ಪೆಕ್ಟರ್ ಭರತ್​​ರನ್ನು ವರ್ಗಾವಣೆ ಮಾಡಲಾಗಿದೆ.
ಪ್ರಕರಣದ ಹಿನ್ನೆಲೆ:
ಕೊಲೆಯಾದ ರೌಡಿಶೀಟರ್ ಬಬ್ಲಿ ಈ ಹಿಂದೆ ಶಾಂತಿನಗರದ ಸ್ಮಶಾನದ ಬಳಿ ಅರುಣ್ ಎಂಬಾತನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದ. ಈ ಸಂಬಂಧ ಅಶೋಕ್​ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ಬಬ್ಲಿಯನ್ನು ಬಂಧಿಸದೇ ಇನ್ಸ್​​ಪೆಕ್ಟರ್ ಅಶೋಕ್ ನಿರ್ಲಕ್ಷ್ಯ ವಹಿಸಿ, ಕರ್ತವ್ಯ ಲೋಪ ಎಸಗಿದ್ದಾರೆ ಎಂಬ ಆರೋಪ ಹಿನ್ನೆಲೆ ವರ್ಗಾವಣೆ ಮಾಡಲಾಗಿದೆ.
ಇದನ್ನೂ ಓದಿ:ಬೆಂಗಳೂರಿನಲ್ಲೊಂದು ಶಾಕಿಂಗ್​ ಘಟನೆ: ಬ್ಯಾಂಕ್​ ಒಳಗೆ ನುಗ್ಗಿ ರೌಡಿಯ ಭೀಕರ ಹತ್ಯೆ!
ರೌಡಿಗಳಿಗೆ ಶಾಕ್ ಕೊಟ್ಟ ಪೊಲೀಸರು:
ಬೆಂಗಳೂರಿನಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾದ ಹಿನ್ನೆಲೆ, ಪಶ್ಚಿಮ ವಿಭಾಗ ಡಿಸಿಪಿ ಸಂಜೀವ್ ಪಾಟೀಲ್ ನೇತೃತ್ವದಲ್ಲಿ ರೌಡಿ ಶೀಟರ್ ಮನೆಗಳ ಮೇಲೆ ದಾಳಿ ನಡೆಸಲಾಯಿತು. ಪಶ್ಚಿಮ ವಿಭಾಗದ ಕೆಂಗೇರಿ ಸಬ್​​ಡಿವಿಷನ್ ನಲ್ಲಿ 200ಕ್ಕೂ ಹೆಚ್ಚು ಪೊಲೀಸರಿಂದ ಚಾಮರಾಜಪೇಟೆ, ಬ್ಯಾಟರಾಯನಪುರ, ಜೆಜೆ ನಗರದಲ್ಲಿ ದಾಳಿ ನಡೆಸಲಾಯಿತು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:13 + four =
Remember me
