ಬೆಂಗಳೂರು:ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಚಟುವಟಿಕೆ ಗರಿಗೆದರಿದೆ. ಸಾಲು ಸಾಲು ಸಮಾವೇಶಗಳು ಹಾಗೂ ಸಭೆಗಳು ನಡೆಯುತ್ತಿದ್ದು, ಕಾಂಗ್ರೆಸ್​, ಬಿಜೆಪಿ ಹಾಗೂ ಜೆಡಿಎಸ್​ ಮೂರು ಪಕ್ಷಗಳು ಭರ್ಜರಿ ಕಸರತ್ತು ನಡೆಸುತ್ತಿವೆ. ಇದರ ನಡುವೆ ಆಡಳಿತಾರೂಢ ಬಿಜೆಪಿ ನಾಯಕರಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್​ಎಸ್​ಎಸ್​) ಖಡಕ್​ ಎಚ್ಚರಿಕೆಯನ್ನು ನೀಡಿದೆ.
ವಿಧಾನಸಭಾ ಚುನಾವಣೆಗೆ ಕೆಲವೇ ದಿನ ಬಾಕಿ ಇರುವಾಗಲೇ ತನ್ನ ಸಮೀಕ್ಷಾ ವರದಿಯನ್ನು ಆಧರಿಸಿ ಆರ್​ಎಸ್​ಎಸ್​ ಖಡಕ್ ಎಚ್ಚರಿಕೆ ಸಂದೇಶ ರವಾನಿಸಿದೆ. ಸರ್ಕಾರ ಹಾಗೂ ಶಾಸಕರು ಇಬ್ಬರಿಗೂ ಪ್ರಬಲ ಆಢಳಿತ ವಿರೋಧಿ ಅಲೆ ಇದೆ ಎಂದು ಆರ್​ಎಸ್​ಎಸ್​ ಹೇಳಿದೆ.
ರಾಜ್ಯದಲ್ಲಿ 40 ಪರ್ಸೆಂಟ್ ಶಾಸಕರಿಗೆ ಆಡಳಿತ ವಿರೋಧಿ ಅಲೆ ಇದೆ. ಬಿಜೆಪಿ ಶಾಸಕರು ಜನರಿಂದ ದೂರವಾಗಿದ್ದಾರೆ ಎಂಬ ಭಾವನೆ ಇದೆ. ಆಡಳಿತ ವಿರೋಧಿ ಅಲೆಯಿಂದ ಪಾರಾಗಲು ತಕ್ಷಣವೇ ಎಚ್ಚೆತ್ತುಕೊಳ್ಳಬೇಕು. ಕೂಡಲೇ ಕ್ರಮ ಕೈಗೊಳ್ಳದಿದ್ದರೆ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ ಎಂದು ಆರ್​ಎಸ್​ಎಸ್​ ಎಚ್ಚರಿಸಿದೆ.
ಸರ್ಕಾರದ ಸಾಧನೆ ಬಿಂಬಿಸುವುದರಲ್ಲಿ ಬಿಜೆಪಿ ವಿಫಲವಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಾಧನೆಗಳು ಜನರನ್ನು ತಲುಪಿಲ್ಲ. ಮೋದಿ ಜನಪ್ರಿಯತೆಯನ್ನು ಬಳಸಿಕೊಳ್ಳಲಾಗದ ಸ್ಥಿತಿಯಲ್ಲಿ ರಾಜ್ಯ ಬಿಜೆಪಿ ಇದೆ. ತಕ್ಷಣವೇ ಪಕ್ಷ ಮತ್ತು ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ರಾಜ್ಯ ಮತ್ತು ರಾಷ್ಟ್ರೀಯ ನಾಯಕರಿಗೆ ಆರ್​ಎಸ್ಎಸ್ ಸಲಹೆ ನೀಡಿದೆ ಎಂದು ದಿಗ್ವಿಜಯ ನ್ಯೂಸ್​ಗೆ ಬಿಜೆಪಿಯ ಉನ್ನತ ಮೂಲಗಳಿಂದ ಮಾಹಿತಿ ಬಂದಿದೆ.(ದಿಗ್ವಿಜಯ ನ್ಯೂಸ್​)
ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಸರ್ಕಾರದಿಂದಲೇ ಪ್ರತ್ಯೇಕ ಆ್ಯಪ್ ಅಭಿವೃದ್ಧಿ: ಸಿಎಂ ಬೊಮ್ಮಾಯಿ‌ ಮಾಹಿತಿ

ಗ್ರಾಹಕರಿಗೆ ಹೊಸ ಆಫರ್ ನೀಡಿದ ಬೆಸ್ಕಾಂ; ವಿದ್ಯುತ್ ಬಿಲ್ ಮೇಲೆ 0.25%ರಷ್ಟು ರಿಯಾಯಿತಿ

ರೈಲಿನಲ್ಲಿ ಪ್ರಯಾಣಿಸುವಾಗ ಇಲಿ ಕಡಿತ: ಸಂತ್ರಸ್ತೆಗೆ 20 ಸಾವಿರ ರೂ. ಪರಿಹಾರ ನೀಡಲು ಆದೇಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + fourteen =
Remember me
