ಬೆಂಗಳೂರು:ಬಿಬಿಎಂಪಿ ಮುಖ್ಯ ಕಚೇರಿಯ ಆವರಣದದಲ್ಲಿರುವ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ ಏಳು ಮಂದಿ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಬಿಬಿಎಂಪಿಯ ಗುಣ ನಿಯಂತ್ರಣ ವಿಭಾಗದ ಪ್ರಯೋಗಾಲಯ ಮತ್ತು ಕಚೇರಿ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಸದ್ಯ ಬೆಂಕಿಯನ್ನು ಹತೋಟಿಗೆ ತರಲಾಗಿದೆ. ಈ ಘಟನೆ ನಡೆದು ಅರ್ಧ ಗಂಟೆ ಬಳಿಕ ಅಗ್ನಿಶಾಮಕ ದಳ ವಾಹನ ಸ್ಥಳಕ್ಕೆ ಆಗಮಿಸಿದ್ದು, ಬೆಂಕಿ ನಿಯಂತ್ರಣ ಮಾಡುವ ಕಾರ್ಯ ನಡೆದಿದೆ.
ಬಿಬಿಎಂಪಿ ನೌಕರರು ಹಾಗೂ ಸಾರ್ವಜನಿಕರು ಸ್ಥಳದಲ್ಲಿ ಜಮಾಯಿಸಿದ್ದಾರೆ. ಈ ಅವಗಢದಿಂದ 7 ಜನ ಬಿಬಿಎಂಪಿ ನೌಕರರಿಗೆ ತೀವ್ರ ಗಾಯಗಳಾಗಿವೆ. ಪ್ರಾಥಮಿಕ ಮಾಹಿತಿ ಪ್ರಕಾರ ಗ್ಯಾಸ್ನಿಂದ ಬೆಂಕಿ ಹತ್ತಿಕೊಂಡಿದೆ ಎನ್ನಲಾಗಿದೆ. ಸ್ಥಳಕ್ಕೆ ಪಾಲಿಕೆ ಕಮಿಷನರ್ ತುಷಾರ್ ಗಿರಿನಾಥ್ ಆಗಮಿಸಿದ್ದಾರೆ.
ಬೆಂಕಿ ದುರ್ಘಟನೆಯನ್ನು ಗಾಯಗೊಂಡವರನ್ನು ಸೇಂಟ್ ಮಾರ್ಥಾಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಗಂಭೀರವಾಗಿ ಸುಟ್ಟ ಬಿಬಿಎಂಪಿ ನೌಕರನಿಗೆ ಸೆಂಟ್ ಮಾರ್ಥಾಸ್​ನಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ವಿಕ್ಟೋರಿಯ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ.
ಈ ಕುರಿತಾಗಿ ಮಾತನಾಡಿದ ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೋಸ್ ಆಯುಕ್ತ ಸತೀಶ್,” ಬಿಬಿಎಂಪಿ ಮುಖ್ಯ ಕಚೇರಿಯ ಪ್ರಯೋಗಾಲಯದಲ್ಲಿ ಘಟನೆ ನಡೆದಿದೆ. ಘಟನೆಯಲ್ಲಿ ಒಟ್ಟು ಏಳು ಜನರಿಗೆ ಗಾಯಗಳಾಗಿದೆ. ನಾಲ್ಕು ಜನರಿಗೆ ಗಂಭೀರ ಗಾಯಗಳಾಗಿದೆ.. ಈಗಾಗಲೇ ಅಗ್ನಿಶಾಮಕ ಸಿಬ್ಬಂದಿ ಪರಿಶೀಲನೆ ಮಾಡುತ್ತಿದ್ದಾರೆ. ಸದ್ಯಕ್ಕೆ ಪ್ರಾಥಮಿಕ ಹಂತದ ಮಾಹಿತಿ ಸಿಕ್ಕಿದೆ. ಬೆಂಕಿ ಹೊತ್ತಿಕೊಳ್ಳೋಕೆ ಅಸಲಿ ಕಾರಣ ಏನು ಅನ್ನೋದು ತನಿಖೆ ನಂತರ ಗೊತ್ತಾಗಲಿದೆ” ಎಂದಿದ್ದಾರೆ.
ಪ್ರತಿದಿನ ಕ್ಯಾರೆಟ್ ತಿನ್ನುವುದರಿಂದ ಕಣ್ಣಿನ ದೃಷ್ಟಿ ಸುಧಾರಿಸುತ್ತದೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + 15 =
Remember me
