ಬೆಂಗಳೂರು:ಕಾಂಗ್ರೆಸ್​ ಟಿಕೆಟ್ ಆಕಾಂಕ್ಷಿಗಳ ಸಭೆಗೆ ಬಂದಿದ್ದ ವೇಳೆ ಹೃದಯಾಘಾತದಿಂದ ಕುಸಿದು ಬಿದ್ದಿದ್ದ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಇಂದು ನಡೆದ ಟಿಕೆಟ್​ ಆಕಾಂಕ್ಷಿಗಳ ಸಭೆಯಲ್ಲಿ ಶ್ರೀಶೈಲಪ್ಪ ಭಾಗಿಯಾಗಿದ್ದರು. ಸಭೆಯ ನಡುವೆಯೇ ಹೃದಯಾಘಾತದಿಂದ ಕುಸಿದು ಬಿದ್ದ ಹಿನ್ನೆಲೆಯಲ್ಲಿ ತಕ್ಷಣ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ರೋಣ ಮತ್ತು ಗದಗದಲ್ಲಿ ಎಂಎಲ್ಎಯಾಗಿದ್ದ ಶ್ರೀಶೈಲಪ್ಪ 2019 ರಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್​ನಿಂದ ಟಿಕೆಟ್​ ಪಡೆಯಲು ಪ್ರಯತ್ನಿಸುತ್ತಿದ್ದರು. ಆದರೆ, ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.
ಶ್ರೀಶೈಲಪ್ಪ ನಿಧನರಾದ ಹಿನ್ನೆಲೆಯಲ್ಲಿ ಕಾಂಗ್ರೆಸ್​ ಟಿಕೆಟ್​ ಆಕ್ಷಾಂಕ್ಷಿಗಳು ಸಭೆಯನ್ನು ಮುಂದೂಡಲಾಗಿದೆ. ಅದಕ್ಕೂ ಮುನ್ನ ಶ್ರೀಲಪ್ಪ ಅವರಿಗೆ ಕಾಂಗ್ರೆಸ್​ ನಾಯಕರು ಶ್ರದ್ಧಾಂಜಲಿ ಸಲ್ಲಿಸಿದರು. ನವೆಂಬರ್ 27ರಂದು ಝೂಮ್ ಮೂಲಕ ಟಿಕೆಟ್​ ಆಕಾಂಕ್ಷಿಗಳ ಸಭೆಯನ್ನು ನಿಗದಿ ಮಾಡಲಾಗಿದೆ.
ಕೇಜ್ರಿವಾಲ್ ಕೊಲೆಗೆ ಬಿಜೆಪಿ ಸಂಚು ಮಾಡುತ್ತಿದೆ ಎಂದ ಸಿಸೋಡಿಯಾ!

ಸಪ್ತಪದಿ ತುಳಿಯೋ ಮುನ್ನವೇ ಸನ್ನಿಧಿಗೆ ಮೋಸ? ಈ ಸಂಗತಿ ಗೊತ್ತಾದ್ರೆ ವೈಷ್ಣವಿಗೆ ಉಗಿದು ಉಪ್ಪಿನಕಾಯಿ ಹಾಕ್ತಾರಂತೆ!

ಚಂದನ್​ ಶೆಟ್ಟಿಯನ್ನು ಬಿಟ್ಟು ಸೋಲೋ ಟ್ರಿಪ್ ಹೋದ ನಿವೇದಿತಾ; ಇಲ್ಲಿವೆ ನೋಡಿ ಫೋಟೋಗಳು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × four =
Remember me
