ಬೆಂಗಳೂರು:ಮನೆಯಲ್ಲಿ ಕೂಡಿ ಹಾಕಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.
ಗೊಟ್ಟಿಗೆರೆ ಬಿ.ಜಿ ರಸ್ತೆ ವೀವರ್ಸ್‌ ಕಾಲನಿ ನಿವಾಸಿ ಪೆರಿಯಾಸ್ವಾಮಿ ಅಪರಾಧಿ. 20 ವರ್ಷ ಜೈಲು, 20 ಸಾವಿರ ರೂ. ದಂಡ ವಿಧಿಸಿ ನ್ಯಾಯಾಧೀಶರಾದ ಇಷ್ರತ್ ಜಹಾನ್ ತೀರ್ಪು ನೀಡಿದ್ದಾರೆ. ನೊಂದ ಬಾಲಕಿಗೆ 4 ಲಕ್ಷ ರೂ. ಸರ್ಕಾರದಿಂದ ಮತ್ತು ದಂಡದ ಮೊತ್ತ 20 ಸಾವಿರ ರೂ. ಸಹ ಬಾಲಕಿಗೆ ನೀಡುವಂತೆ ಆದೇಶದಲ್ಲಿ ಉಲ್ಲೇಖಿಸಿದ್ದಾರೆ. ಸರ್ಕಾರಿ ಅಭಿಯೋಜಕಿ ಗೀತಾ ರಾಮಕೃಷ್ಣ ಗೊರವರ ವಾದ ಮಂಡಿಸಿದ್ದರು.
2020ರ ಫೆಬ್ರವರಿ 10ರ ಬೆಳಗ್ಗೆ ಮನೆಯಲ್ಲಿ ಅಪ್ರಾಪ್ತ ಸಹೋದರಿಯರು ಇದ್ದಾಗ ಪೆರಿಯಾಸ್ವಾಮಿ ಮನೆಗೆ ಬಂದಿದ್ದಾನೆ. ಒಬ್ಬಾಕೆಗೆ ಕಾಸು ಕೊಟ್ಟು ಅಂಗಡಿಗೆ ಕಳುಹಿಸಿ ಮತ್ತೊಬ್ಬಳ ಮೇಲೆ ಅತ್ಯಾಚಾರ ಎಸಗಿದ್ದ. ಈ ಬಗ್ಗೆ ಸಂತ್ರಸ್ತೆ ಪಾಲಕರು ಕೊಟ್ಟ ದೂರಿನ ಮೇರೆಗೆ ಕುಮಾರಸ್ವಾಮಿ ಲೇಔಟ್ ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ಪೆರಿಯಾಸ್ವಾಮಿಯನ್ನು ಬಂಧಿಸಿ ಕೋರ್ಟ್‌ಗೆ ಆರೋಪಪಟ್ಟಿ ಸಲ್ಲಿಸಿದ್ದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ತೀರ್ಪು ನೀಡಿದೆ.
ಬೆಂಗಳೂರಿನಲ್ಲಿ ಮಾ.23 ರಿಂದ 30ರ ತನಕ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
ಹದ್ದಿನಂತೆ ತೀಕ್ಷ್ಣ ದೃಷ್ಟಿಯುಳ್ಳವರು ಮಾತ್ರ ಈ ಫೋಟೋದಲ್ಲಿರುವ ನಾಯಿ ಪತ್ತೆಹಚ್ಚಲು ಸಾಧ್ಯ!
ಬೈಕ್ ಹಾಗೂ ಆ್ಯಂಬುಲೆನ್ಸ್ ನಡುವೆ ಭೀಕರ ಅಪಘಾತ; ದ್ವಿಚಕ್ರ ಸವಾರ ಮೃತ್ಯು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − five =
Remember me
