ಉಡುಪಿ:ಬೆಂಗಳೂರು ಗಲಬೆಗೆ‌ ಸಂಬಂಧಿಸಿ ಫೇಸ್ಬುಕ್ ನಲ್ಲಿ ಚರ್ಚೆ ಮಾಡಿ ಕರೆ ಕೊಟ್ಟಿದ್ದಾರೆ. ಸ್ಥಳೀಯರು ಪ್ಲಾನ್ ಮಾಡಿ ಈ ಕೃತ್ಯ ಎಸಗಿದ್ದು, ಇದು ಪೂರ್ವ ನಿಯೋಜಿತ ಷಡ್ಯಂತ್ರ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಬುಧವಾರ ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುಂಡಾಟದ ಮೂಲಕ ಸಮಾಜ ಹದಗೆಡಿಸಲು ಹಲವು ಪ್ರಯತ್ನ ಮಾಡಿದ್ದಾರೆ. ಗಲಬೆ ನಿಯಂತ್ರಣ ಸಂಪೂರ್ಣ ತಪ್ಪಿದಾಗ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಮನಸೋಇಚ್ಛೆ ವರ್ತಿಸಿದಾಗ ಕೊನೆಯ ಅಸ್ತ್ರವಾಗಿ ಗೋಲಿಬಾರ್ ಮಾಡಲಾಗಿದೆ. ಮೂರು ಜನ ಗೋಲಿಬಾರ್ ನಲ್ಲಿ ಅಸುನೀಗಿದ್ದಾರೆ.ಪೊಲೀಸರಿಗೂ ಕಲ್ಲುತೂರಾಟದಿಂದ ಗಾಯಗಳಾಗಿವೆ. ಓರ್ವ ಪೋಲೀಸ್ ತಲೆಗೆ ಗಂಭೀರ ಗಾಯವಾಗಿದೆ.
ಸದ್ಯ ಪರಿಸ್ಥಿತಿ ಹತೋಟಿಯಲ್ಲಿದೆ ಎಂದು ಸಚಿವ ತಿಳಿಸಿದರು. ಈಗಾಗಲೇ 110 ಜನ ಬಂಧನವಾಗಿದ್ದು, ಬಂಧನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ. ಶಾಂತಿ ಸುವ್ಯವಸ್ಥೆ ಕಾಪಾಡಲು ಪ್ರಥಮ ಆದ್ಯತೆಯಾಗಿದ್ದು, ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡುತ್ತಿದ್ದೇವೆ. ಮುಂಜಾಗ್ರತಾ ಕ್ರಮವಾಗಿ ಕೇಂದ್ರ ಗೃಹ ಕಾರ್ಯದರ್ಶಿ ನಿರಂತರ ಸಂಪರ್ಕದಲ್ಲಿದ್ದಾರೆ.
ಮೂರು ಹೈದರಾಬಾದಿನಿಂದ ಮೂರು ಚೆನ್ನೈನಿಂದ ಬರ್ತಾ ಇದೆ. ಆರು ಕಂಪನಿಯನ್ನು ಎಲ್ಲಿಡಿಪ್ಲೈ ಮಾಡಬೇಕು ಅನ್ನೋದನ್ನ ಪೊಲೀಸ್ ಅಧಿಕಾರಿಗಳು ತೀರ್ಮಾನ ಮಾಡುತ್ತಾರೆ. ರ್ಯಾಪಿಡ್ ಅಕ್ಷನ್ ಫಾರ್ಸ್ ಬರ್ತಾಯಿದೆ.ಗರುಡ ಫೋರ್ಸ್ ಕೂಡ ಸ್ಥಳದಲ್ಲಿದೆ.ಪುಂಡರ ಹಿಂದೆ ಯಾರಿದ್ದಾರೆ ಎಂದು ತನಿಖೆ ಮಾಡುತ್ತೇವೆ. ಸಿಎಂ ಜೊತೆ ಬೆಳಗ್ಗೆ ಬಗ್ಗೆ ಚರ್ಚೆ ಮಾಡಿದ್ದೇನೆ. ಮಧ್ಯಾಹ್ನ ಸಿಎಂ ಮತ್ತು ಹಿರಿಯ ಅಧಿಕಾರಿ ಜೊತೆ ಮತ್ತೊಂದು ಸುತ್ತಿನ ಚರ್ಚೆ ನಡೆಯಲಿದೆ.
ಸಿಸಿ ಕ್ಯಾಮರ ದಾಖಲೆ ಪೊಲೀಸ್ ಠಾಣೆಯ ದಾಖಲೆ ಸಂಗ್ರಹಿಸುತ್ತೇವೆ. ಪುಂಡಾಟಿಕೆ ಮುಂಚೂಣಿಯಲ್ಲಿದ್ದವರ ಮಾಹಿತಿ ಸಂಗ್ರಹವಾಗುತ್ತಿದೆ ಎಂದು‌ ಸಚಿವರು ತಿಳಿಸಿದ್ದಾರೆ. ಪೂರ್ವ ನಿಗದಿಯಾದ ಮಂಗಳೂರು ಸಭೆಯನ್ನು ರದ್ದುಗೊಳಿಸಿ ಸಚಿವರು ಬೆಂಗಳೂರಿಗೆ ತುರ್ತು‌ ದೌಡಾಯಿಸಿದ್ದಾರೆ.
ಡಿಜೆ ಹಳ್ಳಿ ಗಲಭೆಗೆ ಕಾರಣವೇನು? ಪೊಲೀಸ್​ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − 3 =
Remember me
