ಬೆಂಗಳೂರು:ಇಂದು ಬೆಳಗ್ಗೆ ಬೆಂಗಳೂರು ನಗರದ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ವಸ್ತು ಒಂದು ಸ್ಫೋಟಗೊಂಡ ಪರಿಣಾಮ ಐವರು ಗಾಯಗೊಂಡಿರುವ ಘಟನೆಯೊಂದು ವರದಿಯಾಗಿದೆ. ಸ್ಫೋಟದ ತೀವ್ರತೆಗೆ ಕೆಫೆ ಹಾಳಾಗಿದ್ದು, ಘಟನೆಯಲ್ಲಿ ಐವರು ಆಸ್ಪತ್ರೆ ಪಾಲಾಗಿದ್ದಾರೆ. ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದು ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ:ಮಾರ್ಚ 9 ರಂದು ರಾಷ್ಟ್ರೀಯ ಲೋಕ ಅದಾಲತ್: ಪ್ರಕರಣಗಳನ್ನು ತ್ವರಿತ ಇತ್ಯರ್ಥಪಡಿಸಿಕೊಳ್ಳಲು ಸುವರ್ಣಾವಕಾಶ
ವರದಿಗಳ ಪ್ರಕಾರ ವ್ಯಕ್ತಿ ಒಬ್ಬರ ಬ್ಯಾಗ್‌ನಲ್ಲಿದ್ದ ನಿಗೂಢ ವಸ್ತು ಸ್ಫೋಟಗೊಂಡ ಪರಿಣಾಮ ಈ ದುರಂತ ಸಂಭವಿಸಿದೆ. ಸ್ಫೋಟದ ಶಬ್ದ ಕೇಳುತ್ತಿದ್ದಂತೆ ಸ್ಥಳದಲ್ಲಿದ್ದ ಸಾರ್ವಜನಿಕರು ಆತಂಕಗೊಂಡು ಚೆಲ್ಲಾಪಿಲ್ಲಿಯಾಗಿದ್ದಾರೆ. ಸದ್ಯ ಹೋಟೆಲ್ ಸುತ್ತಮುತ್ತ ಭಯದ ವಾತಾವರಣ ನಿರ್ಮಾಣವಾಗಿದೆ. ಗಾಯಗೊಂಡವರ ಪೈಕಿ ಓರ್ವನ ಸ್ಥಿತ ಚಿಂತಾಜನಕವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಮುಂದುವರೆಸಲಾಗಿದೆ.
ಸದ್ಯ ಘಟನೆ ಕುರಿತಂತೆ ಎಕ್ಸ್​ನಲ್ಲಿ (ಈ ಹಿಂದಿನ ಟ್ವಿಟರ್) ಪ್ರತಿಕ್ರಿಯಿಸಿರುವ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ರಾಮೇಶ್ವರಂ ಕೆಫೆ ಸಂಸ್ಥಾಪಕರಾದ ನಾಗರಾಜ್ ಅವರೊಂದಿಗೆ ರೆಸ್ಟೋರೆಂಟ್‌ನಲ್ಲಿ ಸಂಭವಿಸಿದ ಸ್ಫೋಟದ ಬಗ್ಗೆ ಮಾತನಾಡಿದೆ. ಗ್ರಾಹಕರು ಬಿಟ್ಟು ಹೋಗಿದ್ದ ಬ್ಯಾಗ್‌ನಿಂದ ಸ್ಫೋಟ ಸಂಭವಿಸಿದೆ ಮತ್ತು ಯಾವುದೇ ಸಿಲಿಂಡರ್ ಸ್ಫೋಟಗೊಂಡಿಲ್ಲ ಎಂದು ಅವರು ನನಗೆ ಮಾಹಿತಿ ನೀಡಿದ್ದಾರೆ. ತಮ್ಮ ಉದ್ಯೋಗಿಯೊಬ್ಬರು ಗಾಯಗೊಂಡಿದ್ದಾರೆ. ಇದು ಬಾಂಬ್ ಸ್ಫೋಟದ ಸ್ಪಷ್ಟ ಪ್ರಕರಣ ಎಂದು ಕಂಡುಬಂದಿದ್ದು, ಇದಕ್ಕೆ ಸಿಎಂ ಸ್ಪಷ್ಟ ಉತ್ತರ ಕೊಡಬೇಕು ಎಂದು ಬೆಂಗಳೂರಿಗರು ಪ್ರಶ್ನಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
Just spoke to Rameshwaram Café founder Sri Nagaraj about the blast in his restaurant.
He informed me that the blast occurred because of a bag that was left by a customer and not any cylinder explosion. One of their employees is injured.
It’s seems to be a clear case of bomb…
— Tejasvi Surya (@Tejasvi_Surya)March 1, 2024

‘ಗೊಂದಲ, ಹೋರಾಟ, ಪ್ರಯತ್ನ’….: ವಿಚ್ಛೇದನ ನೆನೆದು ಸಾನಿಯಾ ಭಾವುಕ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × five =
Remember me
