ಬೆಂಗಳೂರು:ನಿರೀಕ್ಷೆಯಂತೆ ರಾಜ್ಯಕ್ಕೆ ನೈಋತ್ಯ ಮುಂಗಾರು ಭಾನುವಾರ ಅಧಿಕೃತವಾಗಿ ಪ್ರವೇಶಿಸಿದೆ. ವಾಡಿಕೆಗೂ ಮುನ್ನ ಕೇರಳಕ್ಕೆ ಕಾಲಿಟ್ಟು, 3 ದಿನದ ಬಳಿಕ ರಾಜ್ಯದ ಕರಾವಳಿ ಭಾಗಕ್ಕೆ ಆಗಮಿಸಿದೆ. ಮಾನ್ಸೂನ್ ಚಿತ್ರದುರ್ಗವರೆಗೆ ಆವರಿಸಿದ್ದು, ಜೂ.10ರೊಳಗೆ ರಾಜ್ಯಾದ್ಯಂತ ವ್ಯಾಪಿಸುವ ಸಾಧ್ಯತೆ ಇದೆ.
ಬೆಂಗಳೂರು ನಗರ, ಬೆಂ. ಗ್ರಾಮಾಂತರ, ಮಂಡ್ಯ, ರಾಮನಗರ, ಹಾಸನ, ಮೈಸೂರು, ಬೀದರ್ ಸೇರಿ ರಾಜ್ಯದ ಹಲವೆಡೆ ಭರ್ಜರಿ ವರ್ಷಧಾರೆಯಾಗಿದೆ. ಧಾರಾಕಾರ ಮಳೆಗೆ ರಾಜಧಾನಿ ಬೆಂಗಳೂರು ತತ್ತರಿಸಿದೆ. ಬೆಂಗಳೂರಿನಲ್ಲಿ ಸತತ 2 ದಿನವೂ ವರುಣಾರ್ಭಟ ಮುಂದುವರಿದಿದ್ದು, 3 ಗಂಟೆಗಳಲ್ಲಿ ಅವಧಿಯಲ್ಲಿ 100 ಮಿ.ಮೀ ಮಳೆಯಾಗಿದೆ. ಕೆಲವು ಕಡೆ ಅಂಡರ್ ಪಾಸ್​ಗಳಲ್ಲಿ ಬಸ್, ವಾಹನಗಳು ಸಿಲುಕಿ ಸವಾರರು ಪರದಾಡಿದರು. ಸಂಜೆ 5.30ಕ್ಕೆ ಶುರುವಾದ ಬಿರುಗಾಳಿ, ಗುಡುಗು ಮಿಂಚು ಸಹಿತ ಮಳೆಯು ರಾತ್ರಿ 8 ಗಂಟೆವರೆಗೆ ಸುರಿಯಿತು. ಭಾರೀ ಮಳೆಗೆ ನೂರಾರು ಮರಗಳು ಧರೆಗುರುಳಿವೆ.
ಕಳೆದ ವರ್ಷ ಮಳೆ ಕೊರತೆ ಕೃಷಿ ಚಟುವಟಿಕೆಗಳ ಮೇಲೆ ಗಂಭೀರ ಪರಿಣಾಮ ಬೀರಿತ್ತು. ಮೂರ್ನಾಲ್ಕು ವರ್ಷಗಳಿಂದ ಮಳೆ ದಿನಗಳು ಬದಲಾಗುತ್ತಿರುವ ಕಾರಣ 2020 ಮತ್ತು 2022ರ ಜೂನ್​ನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಕಡಿಮೆ ಪ್ರಮಾಣದಲ್ಲಿ ಮಳೆ ಬಿದ್ದಿತ್ತು. ಈ ಬಾರಿ ರಾಜ್ಯದಲ್ಲಿ ಮುಂಗಾರು ಆಶಾದಾಯಕವಾಗಿದೆ. ಜೂನ್​ನಿಂದ ಸೆಪ್ಟೆಂಬರ್​ವರೆಗೆ ವಾಡಿಕೆ ಅಥವಾ ವಾಡಿಕೆಗಿಂತ ಹೆಚ್ಚು ಮಳೆ ಸುರಿಯಲಿದೆ. ಜುಲೈನಿಂದ ಮಳೆ ಹೆಚ್ಚಾಗುವ ಸಾಧ್ಯತೆ ಇದೆ.
ಭಾರಿ ವರ್ಷಧಾರೆ:ಮಂಡ್ಯ, ಮೈಸೂರು, ಹಾಸನದಲ್ಲಿ ಸೋಮವಾರದಿಂದ ಜೂ.7ರವರೆಗೆ, ದ.ಕನ್ನಡ, ಬಾಗಲಕೋಟೆ, ಉಡುಪಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ನಗರ, ಬೆಂ.ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ತುಮಕೂರಿನಲ್ಲಿ ಮುಂದಿನ 24 ಗಂಟೆ ಭಾರಿ ಮಳೆ ಬೀಳುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಮಂಗಳವಾರ (ಜೂ.4) ಯೆಲ್ಲೋ ಅಲರ್ಟ್ ಇರಲಿದೆ. ಉಳಿದೆಡೆ ಗುಡುಗು ಮಿಂಚು ಸಹಿತ ವರ್ಷಧಾರೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ದಯವಿಟ್ಟು ಈ ಸಮಯದಲ್ಲಿ ಫುಡ್​ ಆರ್ಡರ್​ ಮಾಡೋದನ್ನು ಆದಷ್ಟು ನಿಲ್ಲಿಸಿ: ಗ್ರಾಹಕರಲ್ಲಿ ಝೊಮ್ಯಾಟೋ ಸಂಸ್ಥೆ ಮನವಿ

….
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 3 =
Remember me
