ಬೆಂಗಳೂರು:ರೈತನ ಬಟ್ಟೆ ಕೊಳೆಯಾಗಿದೆ ಅಂತ ಇತ್ತೀಚೆಗಷ್ಟೇ ಸಿಬ್ಬಂದಿ ನಮ್ಮ ಮೆಟ್ರೋದೊಳಗೆ ಬಿಡದೆ ತಡೆದಿದ್ದರು. ಇದರ ಬೆನ್ನಲ್ಲೇ ಇದೀಗ ಬೆಂಗಳೂರು ನಗರದ ಪ್ರತಿಷ್ಠಿತ ಮಾಲ್‌ನಲ್ಲಿ ರೈತನಿಗೆ ಅವಮಾನ ಮಾಡಿದ ಗಂಭೀರ ಆರೋಪ ಕೇಳಿ ಬಂದಿದೆ. ಪಂಚೆ ಹಾಕೊಂಡು ಬಂದಿದ್ದಕ್ಕೆ ರೈತನನ್ನು ಒಳಗೆ ಬಿಡದೆ ಜಿಟಿ ಮಾಲ್ ಸಿಬ್ಬಂದಿ ದರ್ಪ ತೋರಿದ ಘಟನೆ ನಡೆದಿದೆ.
ಇದನ್ನೂ ಓದಿ:ಪಾಕಿಸ್ತಾನದ ಸೇನಾನೆಲೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ: 8 ಯೋಧರ ಸಾವು
ಹಾವೇರಿ ಮೂಲದ ನಾಗರಾಜ್ ಎನ್ನುವರು ಇಂದು (ಜುಲೈ 16) ತಮ್ಮ ತಂದೆ ತಾಯಿಗೆ ಸಿನಿಮಾ ತೋರಿಸಲು ನಗರದ ಮಾಗಡಿ ರಸ್ತೆಯಲ್ಲಿರುವ ಜಿಟಿ ಮಾಲ್ ಕರೆದೊಯ್ದಿದ್ದಾರೆ. ಆದರೆ, ನಾಗರಾಜ್ ತಮ್ಮ ತಂದೆ ಪಂಚೆ ಹಾಕಿಕೊಂಡು ತಲೆಗೆ ಪಟಗ ಸುತ್ತಿಕೊಂಡಿದ್ದಾರೆ. ಇದನ್ನು ನೋಡಿದ ಸಿಬ್ಬಂದಿ ಅವರನ್ನು ಮಾಲ್​ ಒಳಗೆ ಪ್ರವೇಶಿಸಲು ನಿರಾಕರಿಸಿದ್ದಾರೆ.
ಪಂಚೆ ಹಾಕೊಂಡು ಬಂದಿದ್ದಕ್ಕೆ ರೈತನನ್ನು ಒಳಗೆ ಬಿಡದೆ ಮಾಲ್ ಸಿಬ್ಬಂದಿ ತಡೆದು ಅವಮಾನ ಮಾಡಿದ್ದಾರೆ ಎನ್ನಲಾಗಿದ್ದು, ಮಾಲ್ ಸಿಬ್ಬಂದಿಯ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಪ್ರತಿಷ್ಠಿತ ಮಾಲ್‍ನಲ್ಲಿ ರೈತನಿಗೆ ಅವಮಾನ ಮಾಡಿದ ಗಂಭೀರ ಆರೋಪ ಕೇಳಿ ಬಂದಿದೆ. ತಂದೆಯನ್ನು ಸಿನಿಮಾ ತೋರಿಸಲು ಮಗ ಕರೆದುಕೊಂಡು ಹೋಗುವಾಗ ಮಾಲ್ ಪ್ರವೇಶ ದ್ವಾರದಲ್ಲಿ ತಡೆದಿದ್ದಾರೆ. ರೈತರು ಪಂಚೆ ಹಾಕಿದ್ದಾರೆ ಅನ್ನೋ ಕಾರಣಕ್ಕೆ ಅವರನ್ನು ಸೆಕ್ಯೂರಿಟಿ ಸಿಬ್ಬಂದಿ ಮಾಲ್ ಒಳಗೆ ಪ್ರವೇಶ ಮಾಡಲು ಬಿಡಲಿಲ್ಲ. ಅರ್ಧ ಗಂಟೆಗೂ ಹೆಚ್ಚು ಕಾಲ ಪಂಚೆ ಹಾಕಿದ್ದ ರೈತನನ್ನು ಮಾಲ್ ಮುಂದೆಯೇ ಕೂರಿಸಿದ್ದರು ಎಂದು ಆರೋಪಿಸಲಾಗಿದೆ.
ರೈತನ ಮಗ ನಾಗರಾಜ್ ಎಂಬುವರು ಮಾಲ್ ಒಳಗೆ ಬಿಡಿ ಅಂತ ಮನವಿ ಮಾಡಿದರು ಸಿಬ್ಬಂದಿ ಅವರ ಪ್ರವೇಶಿಸಿ ನಿರಾಕರಿಸಿ ದರ್ಪ ತೋರಿದ್ದಾರೆ. ಪಂಚೆ ಹಾಕೊಂಡಿದ್ದಾರೆ ಹೀಗಾಗಿ ಬಿಡುವುದಿಲ್ಲ. ಮಾಲ್‍ನಲ್ಲಿ ಪಂಚೆ ಹಾಕಿದವರನ್ನು ಬಿಡುವುದಿಲ್ಲ. ನಮ್ಮ ಮಾಲಿನಲ್ಲಿ ಈ ರೀತಿ ರೂಲ್ಸ್ ಇದೆ ಅಂತ ಹೇಳಿದ್ದಾರಂತೆ. ಈ ಬಗ್ಗೆ ವಿಡಿಯೋ ಮಾಡಿರೋ ನಾಗರಾಜ್ ಅವರು ಮಾಲ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸರ್ಕಾರಕ್ಕೆ ವಾಲ್ಮೀಕಿ ಜನಾಂಗದ ಶಾಪ ತಟ್ಟಬಾರದೆಂದರೆ ಸಿಬಿಐ ತನಿಖೆಗೆ ವಹಿಸಿ: ಆರ್. ಅಶೋಕ್

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:1 × 1 =
Remember me
