ಬೆಂಗಳೂರು:ಬೆಂಗಳೂರಿನಲ್ಲಿ ಮಾ.23 ರಿಂದ 30 ತನಕ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದೆ ಎಂದು ಚಿತ್ರೋತ್ಸವ ಸಂಘಟನಾ ಸಮಿತಿ ಅಧ್ಯಕ್ಷ ಮತ್ತು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
14ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಮಿತಿ ಸಭೆಯ ಬಳಿಕ ಮಾತನಾಡಿ, ಸುಮಾರು 52 ದೇಶಗಳಿಂದ 150 ಚಿತ್ರಗಳು ಭಾಗವಹಿಸಲಿವೆ ಎಂದರು. ಗುಣಮಟ್ಟದ ಚಿತ್ರಗಳ ಆಯ್ಕೆ ಮಾಡಲು ಸೂಚಿಸಲಾಗಿದೆ. ಜೂರಿಗಳ ಆಯ್ಕೆ ಬಗ್ಗೆ ಮಾನದಂಡ ಅನುಸರಿಸಲಾಗುತ್ತದೆ ಎಂದರು.
ವಿಧಾನಸೌಧ ಮುಂಭಾಗದಲ್ಲಿ ಅಂದು ಮುಖ್ಯಮಂತ್ರಿ ಚಿತ್ರೋತ್ಸವಕ್ಕೆ ಚಾಲನೆ ನೀಡುವರು. ರಾಜ್ಯಪಾಲರನ್ನು ಆಹ್ವಾನಿಸಲಾಗುವುದು ಎಂದರು. ಕನ್ನಡದ ಚಿತ್ರಗಳಿಗೆ ಆದ್ಯತೆ ನೀಡಲಾಗುತ್ತದೆ. ಪ್ರಶಸ್ತಿಗೆ ಆಯ್ಕೆಯಾದ ಚಿತ್ರಗಳಿಗೆ ಪ್ರಶಸ್ತಿ ಮೊತ್ತ ಹೆಚ್ಚು ಮಾಡಲು ನಿರ್ಧರಿಸಲಾಗಿದೆ ಎಂದರು.
ಚಿತ್ರೋತ್ಸವದಲ್ಲಿ ವಿಚಾರ ಸಂಕಿರಣ, ಚರ್ಚೆ, ಸಂವಾದ ನಡೆಯಲಿವೆ. ಈ ಬಾರಿಯೂ 4.48 ಕೋಟಿ ರೂ. ಅನುದಾನವನ್ನು ಸಿಎಂ ಬಿಡುಗಡೆ ಮಾಡಿದ್ದಾರೆ ಎಂದರು.
ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ವಾರ್ತಾ ಇಲಾಖೆಯ ಆಯುಕ್ತ ಡಾ.ಪಿ.ಎಸ್.ಹರ್ಷ, ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಅಶೋಕ್ ಕಶ್ಯಪ್ ಹಾಜರಿದ್ದರು.
ಹದ್ದಿನಂತೆ ತೀಕ್ಷ್ಣ ದೃಷ್ಟಿಯುಳ್ಳವರು ಮಾತ್ರ ಈ ಫೋಟೋದಲ್ಲಿರುವ ನಾಯಿ ಪತ್ತೆಹಚ್ಚಲು ಸಾಧ್ಯ!

ಅವನು ತೇಜಸ್ವಿ ಅಲ್ಲ… ಅಮವಾಸ್ಯೆ; ಅದಕ್ಕೆ ನಾನು ಅಮವಾಸ್ಯೆ ಅಂತಾನೇ ಕರೆಯೋದು!

ಬಿಸಿಲ ಬೇಗೆಗೆ ಬಸವಳಿದ ಕಾಡಾನೆಗಳಿಂದ ಕೆರೆಯಲ್ಲಿ ಜಲ ಕ್ರೀಡೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × three =
Remember me
