ಬೆಂಗಳೂರು:ಕುಡಿಯುವ ನೀರಿನ ಸಮಸ್ಯೆ ಮತ್ತು ಒಳಚರಂಡಿ ತ್ಯಾಜ್ಯ ಹೊರ ಹರಿಯುತ್ತಿರುವ ಸಮಸ್ಯೆಗಳ ಕುರಿತು ಸಾರ್ವಜನಿಕ ಕುಂದು ಕೊರತೆ ಆಲಿಸಲು ಬೆಂಗಳೂರು ಜಲಮಂಡಳಿಯು ಶುಕ್ರವಾರ ಫೋನ್ ಇನ್ ಕಾರ್ಯಕ್ರಮವನ್ನು ಆಯೋಜಿಸಿದೆ. ಕಾರ್ಯಕ್ರಮದಲ್ಲಿ ಖುದ್ದು ಜಲಮಂಡಳಿ ಅಧ್ಯಕ್ಷರಾದ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಪಾಲ್ಗೊಂಡು ಸಾರ್ವಜನಿಕರ ಕುಂದು-ಕೊರತೆಳನ್ನು ಆಲಿಸಲಿದ್ದಾರೆ. ಬೆಳಗ್ಗೆ 9.30 ರಿಂದ 10:30ರವರೆಗೆ ಸಾರ್ವಜನಿಕರು ಫೋನ್ ಕರೆ ಮಾಡಬಹುದು.
ಕುಡಿಯುವ ನೀರಿನ ಸಮಸ್ಯೆ, ಚರಂಡಿ, ಒಳಚರಂಡಿ, ಇಳಿಗುಂಡಿ, ಜಲಮಾಪನ ದೋಷ, ನೀರಿನ ಶುಲ್ಕ ವ್ಯತ್ಯಾಸ ಇತ್ಯಾದಿ ಜಲಮಂಡಳಿಗೆ ಸಂಬಂಧಪಟ್ಟ ದೂರುಗಳನ್ನು ಫೋನ್ ಇನ್ ಮೂಲಕ ಸಾರ್ವಜನಿಕರು ಪರಿಹರಿಸಿಕೊಳ್ಳಬಹುದು. ನೀರಿನ ಸಂಪರ್ಕ ಹೊಂದಿರುವ ಗ್ರಾಹಕರು ತಮ್ಮ ಆರ್.ಆರ್.ಸಂಖ್ಯೆಯನ್ನು ತಿಳಿಸಿ ದೂರನ್ನು ನೀಡಬಹುದು.
ಸಾರ್ವಜನಿಕರು ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ : 080-22945119 ಮತ್ತು 080-22229639.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + eleven =
Remember me
