ಬೆಂಗಳೂರು:ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟಿಸಿದ ಘಟನೆ ಮಾಸುವ ಮುನ್ನವೇ ಈಗ, ಬೆಂಗಳೂರಿನ ಜಾಲಹಳ್ಳಿ ಬಳಿಯ ಕದಂಬ ಹೋಟೆಲ್‌ನಲ್ಲಿ ಬಾಂಬ್ ಇಡಲಾಗಿದೆ ಎಂದು ಪೊಲೀಸರಿಗೆ ಪತ್ರ ಬರೆಯಲಾಗಿದೆ.
ಹೆಚ್ಎಮ್‌ಟಿ ಗ್ರೌಂಡ್ ಬಳಿ ಇರುವ ಕದಂಬ ಹೋಟೆಲ್ ನಲ್ಲಿ ಬಾಂಬ್ ಇಟ್ಟಿರುವುದಾಗಿ ಜಾಲಹಳ್ಳಿ ಪೊಲೀಸ್ ಸ್ಟೇಷನ್ ಗೆ ಅನಾಮದೇಯ ಪತ್ರ ಬಂದಿದೆ. ಹೊಟೆಲ್‌ನಲ್ಲಿ ಬಾಂಬ್ ಇಟ್ಟಿರುವುದಾಗಿ ಪೊಲೀಸ್ ಸ್ಟೇಷನ್​​ಗೆ ಪತ್ರ ಬರೆಯಲಾಗಿದೆ.
ರಾಮೇಶ್ವರಂ ಕೆಫೆಯಲ್ಲಿ ಬ್ಲಾಸ್ಟ್ ಮಾಡಿದ್ದು ನಾನೇ. ಈಗ ಈ ಕದಂಬ ಹೊಟೇಲ್ ನಲ್ಲಿ ಬಾಂಬ್ ಇಟ್ಟಿರುವುದು ಕೂಡ ನಾನೇ ಎಂದು ಪೊಲೀಸರಿಗೆ ಪತ್ರ ಬರೆದಿದ್ದಾನೆ. ಪೊಲೀಸರಿಗೆ ಕೆಟ್ಟದಾಗಿ ಅವ್ಯಾಚ್ಯ ಶಬ್ದಗಳಿಂದ ನಿಂದನೆ ಮಾಡಲಾಗಿದೆ. ಸೋಮವಾರ (ಏ.22) ಮಧ್ಯಾಹ್ನ 12ರ ಸುಮಾರಿಗೆ ಪೋಸ್ಟ್‌ ಮುಖಾಂತರ ಬೆದರಿಕೆ ಪತ್ರವು ಸಿಬ್ಬಂದಿ ಕೈಸೇರಿದೆ. ಈ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಗ್ರಾಹಕರು ಹಾಗೂ ಹೋಟೆಲ್‌ ಸಿಬ್ಬಂದಿಯನ್ನು ಹೊರಗೆ ಕಳಿಸಿ ಹೋಟೆಲ್‌ನೊಳಗೆ ಜಾಲಹಳ್ಳಿ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯದಳದಿಂದ ಪರಿಶೀಲನೆ ನಡೆಸಲಾಗುತ್ತಿದೆ. ಪತ್ರ ಎಲ್ಲಿಂದ ಬಂತು, ಯಾರು ಬರೆದಿದ್ದು ಎಂಬುದರ ಕುರಿತು ತನಿಖೆ ಚುರುಕುಗೊಂಡಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 15 =
Remember me
