ಬೆಂಗಳೂರು:ಇದೇ ಪ್ರಥಮ ಬಾರಿಗೆ ರಾಜಧಾನಿ ಬೆಂಗಳೂರಿನಲ್ಲಿ ನಡೆಯಲಿರುವ ‘ಬೆಂಗಳೂರು ಕಂಬಳ’ಕ್ಕೆ ಕನಿಷ್ಠ 3ರಿಂದ 5 ಲಕ್ಷ ಜನರು ಬರುವ ನಿರೀಕ್ಷೆ ಇದ್ದು, ಅದಕ್ಕೆ ತಕ್ಕಂತೆ ತಯಾರಿ ಮಾಡಿಕೊಳ್ಳಲಾಗುತ್ತಿದೆ ಎಂದು ಬೆಂಗಳೂರು ಕಂಬಳ ಸಮಿತಿ (ರಿ.) ಗೌರವಾಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ ಹೇಳಿದರು.
ಇದನ್ನೂ ಓದಿ:ಭ್ರಷ್ಟಾಚಾರ ನಿರ್ಮೂಲನೆಗೆ ಕೈ ಜೋಡಿಸಿ; ಜಾಗೃತಿ ಅರಿವು ಸಪ್ತಾಹದಲ್ಲಿ ಅಧಿಕಾರಿಗಳಿಗೆ ನ್ಯಾಯಾಧೀಶ ಪುಟ್ಟರಾಜು ಕರೆ
ನ. 25, 26ರಂದು ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳ ತಯಾರಿ ಸಲುವಾಗಿ ಇಂದು ಬೆಂಗಳೂರಿನ ಬಂಟರ ಸಂಘದಲ್ಲಿ ಕರಾವಳಿಯ ವಿವಿಧ ಜಾತಿ-ಭಾಷಾ ಸಂಘಟನೆಗಳ ಜೊತೆ ನಡೆದ ಬೃಹತ್ ಸಮಾಲೋಚನಾ ಸಭೆ ಬಳಿಕ ಆಯೋಜಿಸಿದ ಬಹಿರಂಗ ಸಮಾವೇಶದಲ್ಲಿ ಅವರು ಈ ವಿಷಯ ತಿಳಿಸಿದರು.
ಇದು ಐತಿಹಾಸಿಕ ಕಾರ್ಯಕ್ರಮವಾಗಿದ್ದು, ಕರಾವಳಿಯ ಸಮಸ್ತ ಸಮುದಾಯದವರು ಒಂದೆಡೆ ಒಗ್ಗಟ್ಟಾಗಿ ಸೇರುವ ಬೃಹತ್ ವೇದಿಕೆ ಇದಾಗಲಿದೆ ಎಂದರು. ಇಂದಿನ ಸಮಾಲೋಚನಾ ಸಭೆಯಲ್ಲಿ ಕರಾವಳಿಯ ವಿವಿಧ ಭಾಷೆ-ಜಾತಿಗಳ 50ಕ್ಕೂ ಅಧಿಕ ಸಂಘಟನೆಗಳು ಭಾಗಿಯಾಗಿದ್ದು ಅವರೊಂದಿಗೆ ಕಾರ್ಯಕ್ರಮದ ರೂಪುರೇಷೆ ಬಗ್ಗೆ ಮಾತುಕತೆ ನಡೆಸಲಾಗಿದೆ ಎಂದರು.
ಇದನ್ನೂ ಓದಿ:ಹಳಿಯಾಳದ ಭಾಗವತಿ ಗ್ರಾಪಂ ಅಭಿವೃದ್ಧಿ ಅಧಿಕಾರಿ ದೇಸಾಯಿ ಅವರಿಗೆ ಪಿಡಿಒ ಆಫ್‌ ದಿ ಮಂತ್‌ ಪ್ರಶಸ್ತಿ
ಬೆಂಗಳೂರು ಕಂಬಳಕ್ಕೆ ಈಗಾಗಲೇ 150ಕ್ಕೂ ಅಧಿಕ ಕೋಣಗಳ ನೋಂದಣಿಯಾಗಿದ್ದು, ಆ ಎಲ್ಲ ಕೋಣಗಳನ್ನು ನ.23ರಂದು ಉಪ್ಪಿನಂಗಡಿಯಲ್ಲಿ ಬೀಳ್ಕೊಡುಗೆ ಮಾಡಿ ಕಳಿಸಿಕೊಡಲಾಗುವುದು ಎಂದು ಕಂಬಳ ಸಮಿತಿ ಅಧ್ಯಕ್ಷ, ಶಾಸಕ ಅಶೋಕ್ ರೈ ತಿಳಿಸಿದರು. ಅಷ್ಟೂ ಕೋಣಗಳನ್ನು ಹಾಸನ ಹಾಗೂ ನೆಲಮಂಗಲದಲ್ಲಿ ಅದ್ಧೂರಿಯಾಗಿ ಸ್ವಾಗತಿಸಿಕೊಳ್ಳಲಾಗುವುದು. ಅಲ್ಲದೆ ಪ್ರತಿ ತಾಲೂಕಲ್ಲೂ ಸ್ವಾಗತ-ಬೀಳ್ಕೊಡುಗೆ ಇರಲಿದೆ ಎಂದರು.
ಬೆಂಗಳೂರು ಕಂಬಳ ಬೆಂಗಳೂರಿನ ಅರಮನೆ ಮೈದಾನದ 70 ಎಕರೆ ಜಾಗದಲ್ಲಿ ನಡೆಯಲಿದೆ ಎಂದು ಸಮಿತಿ ಕಾರ್ಯಾಧ್ಯಕ್ಷ, ಸಂಗೀತ ನಿರ್ದೇಶಕ ಗುರುಕಿರಣ್ ತಿಳಿಸಿದರು. ‘ಬೆಂಗಳೂರು ಕಂಬಳ ನಮ್ಮ ಕಂಬಳ’ ಎಂಬ ಥೀಮ್ ಸಾಂಗ್ ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು. ಈ ಥೀಮ್ ಸಾಂಗ್‌ ವಿ.ಮನೋಹರ್ ಸಾಹಿತ್ಯ, ಗುರುಕಿರಣ್ ಸಂಗೀತ ಸಂಯೋಜನೆ, ಮಣಿಕಾಂತ್ ಕದ್ರಿ ಪ್ರೋಗ್ರಾಮಿಂಗ್‌ನಲ್ಲಿ ಮೂಡಿ ಬಂದಿದೆ.
ಇದನ್ನೂ ಓದಿ:ನಗದು ಬಹುಮಾನ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಒಂದು ಕೋಟಿ ರೂ. ಘೋಷಿಸಿದ ಸಿಎಂ:ಬೆಂಗಳೂರು ಕಂಬಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 1 ಕೋಟಿ ರೂ. ಅನುದಾನ ಘೋಷಿಸಿದ್ದಾರೆ ಎಂದು ಕಂಬಳ ಸಮಿತಿ ಉಪಾಧ್ಯಕ್ಷ ಗುಣರಂಜನ್ ಶೆಟ್ಟಿ ತಿಳಿಸಿದ್ದಾರೆ.
ತಾರಾಕಳೆ:ಬೆಂಗಳೂರು ಕಂಬಳಕ್ಕೆ ಬಾಲಿವುಡ್ ನಟಿ ಐಶ್ವರ್ಯಾ ರೈ, ಕರಾವಳಿ ಬೆಡಗಿ ಅನುಷ್ಕಾ ಶೆಟ್ಟಿ ಸೇರಿದಂತೆ ವಿವಿಧ ಚಿತ್ರರಂಗಗಳಲ್ಲಿ ಇರುವ ಕರಾವಳಿ ಮೂಲದ ಸಿನಿಮಾ ತಾರೆಯರು ಆಗಮಿಸಲಿದ್ದಾರೆ ಎಂದು ಸಮಿತಿ ಸಂಘಟನಾ ಅಧ್ಯಕ್ಷ ಉಮೇಶ್ ಶೆಟ್ಟಿ ತಿಳಿಸಿದ್ದಾರೆ.
ಇದನ್ನೂ ಓದಿ:ಎಸ್ಸೆಸ್ಸೆಲ್ಸಿಯಲ್ಲಿ ಶೇ.100 ಫಲಿತಾಂಶ ತನ್ನಿ ಇಲ್ಲವೇ ಜಿಲ್ಲೆ ಬಿಡಲು ಸಜ್ಜಾಗಿ-ಶಿಕ್ಷಣಾಧಿಕಾರಿಗಳಿಗೆ ಸಚಿವ ವೈದ್ಯ ವಾರ್ನಿಂಗ್‌
ಬೆಂಗಳೂರು ಕಂಬಳಕ್ಕೆ ಆಭರಣ ಜುವೆಲ್ಲರ್ಸ್ ಅವರು ಶೀರ್ಷಿಕೆ ಪ್ರಾಯೋಜಕರಾಗಿದ್ದು, ಆಭರಣ ಜುವೆಲ್ಲರ್ಸ್‌ನ ವ್ಯವಸ್ಥಾಪಕ ನಿರ್ದೇಶಕ ಪ್ರಕಾಶ್ ಕಾಮತ್, ಬೆಂಗಳೂರು ಕಂಬಳ ಸಮಿತಿ ಗೌರವ ಸಲಹೆಗಾರ ಉಪೇಂದ್ರ ಶೆಟ್ಟಿ ಉಪಸ್ಥಿತರಿದ್ದರು.
2023 ರಲ್ಲಿ ಇದೇ ನನ್ನ ಅತ್ಯುತ್ತಮ ಚಿತ್ರ: ಅಷ್ಟಕ್ಕೂ ಶಾರೂಖ್ ಖಾನ್​ ಹೇಳಿದ ಸಿನಿಮಾ ಯಾವುದು?

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:fourteen − three =
Remember me
