ಬೆಂಗಳೂರು:ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆಯೂ ಸಾಮಾಜಿಕ ಜಾಲತಾಣಗಳನ್ನು ನೋಡಿ ಹೆಚ್ಚು ಪ್ರಭಾವಿತರಾಗುತ್ತಿದ್ದು, ವೈರಲ್​ ಆಗುವ ಭರದಲ್ಲಿ ಹುಚ್ಚಾಟವಾಡಿ ತಮ್ಮ ಮೈಮೇಲೆ ಗಂಡಾಂತರವನ್ನು ಎಳೆದುಕೊಳ್ಳುತ್ತಿದ್ದಾರೆ. ಇದೀಗ ಅದಕ್ಕೆ ಸಂಬಂಧಿಸಿದಂತೆ ಸ್ನೇಹಿತನ ಹುಚ್ಚಾಟಕ್ಕೆ ಯುವಕನೊಬ್ಬ ಪ್ರಾಣವನ್ನೇ ಕಳೆದುಕೊಂಡಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನ ಸಂಪಿಗೆಹಳ್ಳಿಯಲ್ಲಿ ನಡೆದಿದೆ.
ಮಾರ್ಚ್​ 25ರಂದು ಘಟನೆ ನಡೆದಿದ್ದು, ಮೃತ ಯುವಕನನ್ನು ಯೋಗೇಶ್​ (24) ಎಂದು ಗುರುತಿಸಲಾಗಿದೆ. ಘಟನೆ ಸಂಬಂಧ ಪೊಲೀಸರು ಆರೋಪಿ ಮುರಳಿ (25) ಯನ್ನು ವಶಕ್ಕೆ ಪಡೆದಿದ್ದಾರೆ. ಏರ್​​ಪ್ರೆಷರ್‌ ಪೈಪ್‌ನಿಂದ ಗುದನಾಳಕ್ಕೆ ಗಾಳಿ ಬಿಟ್ಟಿದ್ದರಿಂದ ಹೊಟ್ಟೆಯೊಳಗೆ ಕರುಳು ಬ್ಲಾಸ್ಟ್‌ ಆಗಿ ಯುವಕ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಡಿಸಿಪಿ ಲಕ್ಷ್ಮೀ ಪ್ರಸಾದ್, ಮೃತ ಯೋಗೇಶ್ ಮೂಲತಃ ವಿಜಯಪುರದವನು. ಡೆಲವರಿ ಏಜೆಂಟ್ ಆಗಿ ಕೆಲಸ ಮಾಡಿಕೊಂಡು ಥಣಿಸಂದ್ರದಲ್ಲಿ ವಾಸವಿದ್ದ. ಮಾರ್ಚ್ 25ರಂದು ಬೈಕ್‌ ರಿಪೇರಿ ಮಾಡಿಸಲು ಯೋಗೇಶ್​ ಸಂಪಿಗೆಹಳ್ಳಿ ಅಲ್ಲಿರುವ ಸಿಎನ್‌ಸಿ ಸರ್ವೀಸ್​ ಸೆಂಟರ್​ಗೆ ತೆರಳಿದ್ದ. ಯೋಗೇಶ್​ ಸ್ನೇಹಿತ ಮುರಳಿ ಸಹ ಸಿಎನ್​ಎಸ್ ಸರ್ವೀಸ್​ ಸೆಂಟರ್​ನಲ್ಲಿ ಕೆಲಸ ಮಾಡುತ್ತಿದ್ದ.
ಇದನ್ನೂ ಓದಿ:ಬಿಜೆಪಿಯವರು ನನ್ನ ಶವದ ಮೇಲೆ ಚುನಾವಣೆ ನಡೆಸಲು ಮುಂದಾಗಿದ್ದಾರೆ: ಪ್ರಿಯಾಂಕ್ ಖರ್ಗೆ
ಇವರಿಬ್ಬರು ಹಳೆಯ ಸ್ನೇಹಿತರಾಗಿದ್ದು, ಸರ್ವೀಸ್‌ ಸೆಂಟರ್‌ನಲ್ಲಿದ್ದ ಏರ್​​ಪ್ರೆಷರ್​ ಪೈಪ್‌ನಿಂದ ಇಬ್ಬರು ಆಟ ಆಡಲು ಮುಂದಾಗಿದ್ದರು. ಮೊದಲಿಗೆ ಮುರುಳಿ, ಯೋಗೇಶ್‌ನ ಮುಖ ಹಾಗೂ ಹೊಟ್ಟೆಗೆ ಗಾಳಿ ಬಿಟ್ಟಿದ್ದ. ಇದಾದ ಬಳಿಕ ಯೋಗೇಶ್​ ಗುದನಾಳಕ್ಕೆ ಏರ್​ಪ್ರೆಷರ್​​ನಿಂದ ಗಾಳಿ ಬಿಟ್ಟಿದ್ದಾನೆ. ಇಬ್ಬರು ಸ್ನೇಹಿತರಾಗಿದ್ದ ಕಾರಣ ಆಟ ಆಡಲು ಹೋಗಿ ಘಟನೆ ಸಂಭವಿಸಿದೆ.
ಈ ವೇಳೆ ಗುದನಾಳಕ್ಕೆ ಗಾಳಿ ಬಿಟ್ಟಿದ್ದರಿಂದ ಯೋಗೇಶ್‌ ಹೊಟ್ಟೆ ಊದಿಕೊಂಡು ಕರುಳು ಬ್ಲಾಸ್ಟ್ ಆಗಿದೆ. ತಕ್ಷಣ ಯೋಗೀಶ್ ನರಳಾಟ ಕಂಡು ಮುರಳಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಯೋಗೇಶ್‌ ಮೃತಪಟ್ಟಿದ್ದಾನೆ. ಸದ್ಯ ಮೃತ ಯೋಗೇಶ್‌ ಪೋಷಕರು ಈ ಸಂಬಂಧ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 304 ಅಡಿ ಕೇಸ್ ದಾಖಲಿಸಿಕೊಂಡಿರುವ ಪೊಲೀಸರು ಮುರಳಿಯನ್ನು ವಶಲ್ಲೆ ಪಡೆದಿರುವುದಾಗಿ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + 5 =
Remember me
