ಬೆಂಗಳೂರು:ಗುಡ್ಡ ಕುಸಿತದಿಂದಾಗಿ ಬೆಂಗಳೂರು-ಮಂಗಳೂರು ಸಂಪರ್ಕಿಸುವ ಎರಡು ಮುಖ್ಯ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬಸ್ ಸಂಚಾರ ವ್ಯತ್ಯಯವಾಗಿರುವ ಹಿನ್ನಲೆ, ಜನರ ಅನುಕೂಲಕ್ಕಾಗಿ ಎರಡು ಹೆಚ್ಚುವರಿ ವಿಶೇಷ ರೈಲು ಸಂಚಾರ ಆರಂಭಿಸಲು ನೈಋತ್ಯ ರೈಲ್ವೆ ಮುಂದಾಗಿದೆ.
ರೈಲು ಸಂಖ್ಯೆ 06547 ಜುಲೈ 19 ರಂದು ರಾತ್ರಿ 11 ಗಂಟೆಗೆ ಕೆಎಸ್ಆರ್ ಬೆಂಗಳೂರಿನಿಂದ ಹೊರಟು, ಮರುದಿನ ಬೆಳಿಗ್ಗೆ 11:40 ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. ಈ ರೈಲು ಬೆಂಗಳೂರು ಕಂಟೋನ್ಮೆಂಟ್, ಎಸ್ಎಂವಿಟಿ ಬೆಂಗಳೂರು, ಚಿಕ್ಕಬಾಣಾವರ, ನೆಲಮಂಗಲ, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಮತ್ತು ಕಬಕ-ಪುತ್ತೂರು, ಬಂಟ್ವಾಳ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ.
ರೈಲು ಸಂಖ್ಯೆ 06548 ಜುಲೈ 20 ರಂದು ಮಧ್ಯಾಹ್ನ 1:40 ಕ್ಕೆ ಮಂಗಳೂರು ಜಂಕ್ಷನ್ ನಿಂದ ಹೊರಟು, ಅದೇ ದಿನ ರಾತ್ರಿ 11:15 ಗಂಟೆಗೆ ಯಶವಂತಪುರ ಆಗಮಿಸಲಿದೆ. ಈ ರೈಲು ಬಂಟ್ವಾಳ, ಕಬಕ-ಪುತ್ತೂರು, ಸುಬ್ರಹ್ಮಣ್ಯ ರೋಡ್, ಸಕಲೇಶಪುರ, ಹಾಸನ, ಚನ್ನರಾಯಪಟ್ಟಣ, ನೆಲಮಂಗಲ, ಮತ್ತು ಚಿಕ್ಕಬಾಣಾವರ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ.
ರೈಲು ಸಂಖ್ಯೆ 06549 ಜುಲೈ 21 ಮತ್ತು 22, 2024 ರಂದು ಮಧ್ಯರಾತ್ರಿ 12:30 ಗಂಟೆಗೆ ಯಶವಂತಪುರದಿಂದ ಹೊರಟು, ಅದೇ ದಿನ ಬೆಳಿಗ್ಗೆ 11:40ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. ಈ ರೈಲು ಚಿಕ್ಕಬಾಣಾವರ, ನೆಲಮಂಗಲ, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಮತ್ತು ಕಬಕ-ಪುತ್ತೂರು, ಬಂಟ್ವಾಳ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ.
ರೈಲು ಸಂಖ್ಯೆ 06550 ಜುಲೈ 21 ಮತ್ತು 22ರಂದು ಮಧ್ಯಾಹ್ನ 1.40ಕ್ಕೆ ಮಂಗಳೂರು ಜಂಕ್ಷನ್​ನಿಂದ ಹೊರಟು, ಅದೇ ದಿನ ರಾತ್ರಿ 11.15ಕ್ಕೆ ಯಶವಂತಪುರ ನಿಲ್ದಾಣಕ್ಕೆ ಆಗಮಿಸಲಿದೆ. ಮಾರ್ಗದಲ್ಲಿ ಈ ರೈಲು ಬಂಟ್ವಾಳ, ಕಬಕ-ಪುತ್ತೂರು, ಸುಬ್ರಹ್ಮಣ್ಯ ರೋಡ್, ಸಕಲೇಶಪುರ, ಹಾಸನ, ಚನ್ನರಾಯಪಟ್ಟಣ, ನೆಲಮಂಗಲ, ಮತ್ತು ಚಿಕ್ಕಬಾಣಾವರ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ.
ಈ ವಿಶೇಷ ರೈಲುಗಳು ಎಸಿ-ಟು ಟೈಯರ್-2, ಎಸಿ-ತ್ರಿ ಟೈಯರ್-2, ಸ್ಲೀಪರ್ ಕ್ಲಾಸ್-6, ಸಾಮಾನ್ಯ ದ್ವಿತೀಯ ದರ್ಜೆ-6 ಮತ್ತು ಎಸ್ಎಲ್ಆರ್/ಡಿ -2 ಸೇರಿದಂತೆ 18 ಬೋಗಿಗಳನ್ನು ಒಳಗೊಂಡಿವೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + one =
Remember me
