ಬೆಂಗಳೂರು: ಚುನಾವಣೆ ಮುಗಿದು ಸರ್ಕಾರ ರಚನೆ ಆಗಿ ತಿಂಗಳುಗಳೇ ಕಳೆದರೂ ಬಿಜೆಪಿಯಿಂದ ಇನ್ನೂ ವಿರೋಧ ಪಕ್ಷದ ನಾಯಕನ ಆಯ್ಕೆ ಆಗಿಲ್ಲ. ಪಕ್ಷದ ನೂತನ ರಾಜ್ಯಾಧ್ಯಕ್ಷರ ಆಯ್ಕೆ ಕೂಡ ಆಗಿಲ್ಲ. ಈ ಕುರಿತು ಸ್ವಪಕ್ಷೀಯರಿಂದಲೂ ತೀವ್ರ ಟೀಕೆ ವ್ಯಕ್ತವಾಗುತ್ತಿದ್ದರೂ ಪಕ್ಷವನ್ನು ರಾಜ್ಯದಲ್ಲಿ ಬಲಗೊಳಿಸುವ ನಿಟ್ಟಿನಲ್ಲಿ ಅಂಥ ಯಾವುದೇ ಬಿರುಸಿನ ಚಟುವಟಿಕೆ ಕಾಣುತ್ತಿಲ್ಲ. ಈ ಎಲ್ಲದರ ಮಧ್ಯೆ ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ ಅವರೇ ಪಕ್ಷವನ್ನು ಮುನ್ನಡೆಸಬೇಕು ಎಂಬ ಕೂಗೊಂದು ಕೇಳಿಬಂದಿದೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಿವಾಸದಲ್ಲಿ ನಿನ್ನೆ ರಾತ್ರಿ ಬೆಂಗಳೂರಿನ ಬಿಜೆಪಿ ಶಾಸಕರು ಸಭೆ ಸೇರಿದ್ದು, ಆ ಸಭೆಯಲ್ಲಿ ಬಿಎಸ್​ವೈ ನಾಯಕತ್ವಕ್ಕೆ ಬೇಡಿಕೆ ವ್ಯಕ್ತವಾಗಿದೆ. ನೂತನ ರಾಜ್ಯಾಧ್ಯಕ್ಷರ ಆಯ್ಕೆ ಆಗುವವರೆಗೂ ಪಕ್ಷವನ್ನು ನೀವೇ ಮುನ್ನಡೆಸಬೇಕು ಎಂದು ಶಾಸಕರು ಬಿಎಸ್​ವೈ ಬಳಿ ಮನವಿ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ:ಇನ್ನುಮುಂದೆ ಕರಿಮಣಿ ಮಾಲೀಕ ನಾನಲ್ಲ: ವಿಚ್ಛೇದನ ಘೋಷಿಸಿದ ಕಿರಿಕ್ ಕೀರ್ತಿ
ಕಾಂಗ್ರೆಸ್ ಪಕ್ಷವನ್ನು ಹೆದರಿಸಲು ನೀವೊಬ್ಬರೇ ಸಮರ್ಥರು, ನಿಮ್ಮ ನಾಯಕತ್ವ ಅತ್ಯವಶ್ಯ. ಪಕ್ಷದ ನಾಯಕತ್ವದ ಕೊರತೆಯ ಲಾಭ ಪಡೆಯಲು ಕಾಂಗ್ರೆಸ್ ನಾಯಕರು ಹವಣಿಸುತ್ತಿದ್ದು, ನೀವು ನಾಯಕತ್ವ ವಹಿಸಿಕೊಂಡರೆ ಕಾಂಗ್ರಸ್ ನಾಯಕರ ಎಲ್ಲಾ ಯೋಜನೆಗಳೂ ತಲೆಕೆಳಗಾಗಲಿವೆ ಎಂದು ಬೆಂಗಳೂರಿನ ಬಿಜೆಪಿ ಶಾಸಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಇಲ್ಲಿನ ಹಾಸ್ಟೆಲ್​-ಪಿಜಿ ಸೀಲಿಂಗ್ ಫ್ಯಾನ್​ಗಳಿಗೆ ಸ್ಪ್ರಿಂಗ್ ಅಳವಡಿಕೆ!; ವಿದ್ಯಾರ್ಥಿಗಳ ಜೀವ ಉಳಿಸಲು ವಿನೂತನ ಕ್ರಮ
ಈಗಿರುವ ಪರಿಸ್ಥಿತಿಯಲ್ಲಿ ಬಿಜೆಪಿ ಶಾಸಕರ ಸಮಸ್ಯೆ ಕೇಳಲು ಪಕ್ಷದ ವೇದಿಕೆಯಲ್ಲಿ ನಾಯಕರೇ ಇಲ್ಲದಂತಾಗಿದೆ. ಕ್ಷೇತ್ರದ ಸಮಸ್ಯೆ ಕುರಿತು ಚರ್ಚಿಸಲು ಕೂಡ ಯಾರೂ ಮುಂದಾಗುತ್ತಿಲ್ಲ. ನಮ್ಮಲ್ಲಿರುವ ನಾಯಕತ್ವದ ಕೊರತೆಯ ಲಾಭವನ್ನು ಕಾಂಗ್ರೆಸ್ ಪಡೆದುಕೊಳ್ಳುತ್ತಿದೆ. ನೀವು ನಿವೃತ್ತಿ ಘೋಷಣೆ ಮಾಡಿದ್ದರೂ ನಾಯಕತ್ವ ವಹಿಸಿಕೊಳ್ಳಲು ಯಾವ ಅಡ್ಡಿಯೂ ಬಾರದು. ಶಾಸಕರ ಬೆನ್ನಿಗೆ ನಿಲ್ಲಲು, ಸಮಸ್ಯೆಗಳನ್ನು ಆಲಿಸಲು ನಿಮ್ಮ ನಾಯಕತ್ವವೇ ಸೂಕ್ತ ಎಂದು ಶಾಸಕರು ಒತ್ತಾಯಿಸಿದ್ದಾರೆ. ಶಾಸಕರ ಈ ಒತ್ತಾಯಕ್ಕೆ ಮಣಿದು, ಮುಂದಿನ ವಾರ ಆ. 23ರಂದು ಹೋರಾಟದ ಅಖಾಡಕ್ಕಿಳಿಯಲು ಬಿಎಸ್​ವೈ ಮುಂದಾಗಿದ್ದಾರೆ ಎನ್ನಲಾಗಿದೆ.
‘ಅಯ್ಯೋ ಪಾಪ..’ ಎಂದು ಹಣ ಹಾಕುವ ಮುನ್ನ ಹುಷಾರು: ಹೀಗೂ ವಂಚಿಸುತ್ತಾರೆ!

ಮನೆ ಬಳಿ ಬಂದವರಿಗೆ ಸಾಕುನಾಯಿ ಕಚ್ಚಿದರೆ ಮಾಲೀಕರಿಗೆ 6 ತಿಂಗಳು ಜೈಲು, ದಂಡ: ಪೊಲೀಸರ ಎಚ್ಚರಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + seventeen =
Remember me
