ಬೆಂಗಳೂರು:ನಗರದ ನಂದಿನಿ ಲೇಔಟ್ ಪೊಲೀಸರು ವಾಹನ ಕಳ್ಳತನ‌‌ ಮಾಡುತ್ತಿದ್ದ ಖತರ್ನಾಕ್​ ಕಳ್ಳನನ್ನು ಸೆರೆಹಿಡಿಯುವಲ್ಲಿ  ಯಶಸ್ವಿಯಾಗಿದ್ದು, ಆರೋಪಿಯನ್ನು ಚಂದ್ರಕಾಂತ್ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:ಶಕ್ತಿ ಯೋಜನೆಯಿಂದ ಶ್ರೀಮಂತವಾದ ದೇವಾಲಯಗಳು; ಯಾವ ದೇವಸ್ಥಾನಕ್ಕೆ ಎಷ್ಟು ಆದಾಯ ಬಂದಿದೆ?
ಆರೋಪಿ ಚಂದ್ರಕಾಂತ್​ನನ್ನು ಇದೀಗ ಬೆಂಗಳೂರು ಪೊಲೀಸರು ಬಂಧಿಸಿದ್ದು, ಒಂದು ಆಟೋರಿಕ್ಷಾ ಹಾಗೂ 13 ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. 8.5 ಲಕ್ಷ ರೂ. ಮೌಲ್ಯದ ವಾಹನಗಳನ್ನು ಆರೋಪಿಯಿಂದ ಜಪ್ತಿ ಮಾಡಲಾಗಿದೆ. ಖದೀಮನನ್ನು ಬಂಧಿಸಿ, ವಿಚಾರಣೆ ನಡೆಸಿದ ಬಳಿಕ ಇನ್ನು 14 ಪ್ರಕರಣಗಳು ಬೆಳಕಿಗೆ ಬಂದಿದೆ.
ನಂದಿ‌ನಿ ಲೇಔಟ್, ವಿಜಯನಗರ, ಹೆಬ್ಬಾಳ,‌ ಬಾಗಲಗುಂಟೆ ಸೇರಿದಂತೆ ಎಂಟಕ್ಕೂ ಹೆಚ್ಚು ಠಾಣಾ ವ್ಯಾಪ್ತಿಯಲ್ಲಿ ಕಳ್ಳ ತನ್ನ ಕೈಚಳಕ ತೋರಿಸಿದ್ದಾನೆ. ಈ ಹಿಂದೆ ಜೈಲಿಗೆ ಹೋಗಿ ಬಂದರೂ ಮತ್ತೆ ಅದೇ ಕೆಲಸವನ್ನು ಮುಂದುವರಿಸಿದ್ದನು. ಸದ್ಯ ಆರೋಪಿಯನ್ನು ನಂದಿನಿ ಲೇಔಟ್​ ಪೊಲೀಸರು ಬಂಧಿಸುವಲ್ಲಿ ಸಫಲರಾಗಿದ್ದಾರೆ.
ಭಜರಂಗದಳ ಕಾರ್ಯಕರ್ತರ ಗಡಿಪಾರಿಗೆ ಸಿದ್ಧತೆ? ಡಿಸಿಪಿ ಎದುರು ಹಾಜರಾಗಲು ಸೂಚನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + 1 =
Remember me
