ಬೆಂಗಳೂರು:ರಾಜ್ಯದ ಕೆಲವೆಡೆ ಇಂದು ರಾಷ್ಟ್ರೀಯ ತನಿಖಾ ದಳ (ಎನ್​ಐಎ) ದಾಳಿ ಮಾಡಿದ್ದು, ಬಿಜೆಪಿ ನಾಯಕ ಪ್ರವೀಣ್​ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಮಂಗಳೂರಿನಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದೆ.
ಇಂದು ಬೆಳಗ್ಗಿನ ಜಾವ ಬೆಳ್ಳಾರೆ ಮನೆಯಲ್ಲಿ ಆರೋಪಿಗಳಾದ ಶಾಫಿ ಬೆಳ್ಳಾರೆ ಮತ್ತು ಇಕ್ಬಾಲ್ ಬೆಳ್ಳಾರೆ ಎಂಬುವರನ್ನು ಅರೆಸ್ಟ್ ಮಾಡಿರುವುದಾಗಿ ಎನ್​ಐಎ ಉನ್ನತ ಮೂಲಗಳ ಮಾಹಿತಿ ನೀಡಿದೆ.
ಆರೋಪಿ ಇಕ್ಬಾಲ್ ಬೆಳ್ಳಾರೆ, ಬೆಳ್ಳಾರೆ ಗ್ರಾಮದ ಪಂಚಾಯತ್​ ಸದಸ್ಯ ಮತ್ತು ಶಾಫಿ ಬೆಳ್ಳಾರೆ ಎಸ್​ಡಿಪಿಐ ರಾಜ್ಯ ಕಾರ್ಯದರ್ಶಿ. ಈ ಇಬ್ಬರು ಜೊತೆಯಲ್ಲಿ ಸುಳ್ಯದ ಇಬ್ರಾಹಿಂ ಶಾ ಎಂಬಾತನನ್ನು ಎನ್​ಐಎ ಬಂಧಿಸಿದೆ.
ಹುಬ್ಬಳ್ಳಿಯಲ್ಲಿಯೂ ಎನ್ಐಎ ದಾಳಿ ನಡೆಸಿದೆ. ಹಳೇ‌ ಹುಬ್ಬಳ್ಳಿಯ ನೂರಾನಿ ಪ್ಲಾಟ್​ನಲ್ಲಿರುವ ಎಸ್​ಡಿಪಿಐ ಮುಖಂಡ ಇಸ್ಮಾಯಿಲ್ ನಾಲಾ‌ಬಂದ್ ಮನೆ ಮೇಲೆ‌ ಹಾಗೂ ಕಸಬಾಪೇಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಕಚೇರಿಯ ಮೇಲೂ ಎನ್​ಐಎ ದಾಳಿ ಮಾಡಿ, ಪರಿಶೀಲನೆ ನಡೆಸುತ್ತಿದೆ. ಇಂದು ಬೆಳಗಿನ ಜಾವ ನಾಲ್ಕು ಗಂಟೆಗೆ 10 ಮಂದಿಯ ಅಧಿಕಾರಿಗಳ ತಂಡದಿಂದ ದಾಳಿ ನಡೆದಿದೆ. ಮನೆಯಲ್ಲಿ ಸಂಪೂರ್ಣ ಪರಿಶೀಲನೆ ನಡೆಸಿ ಅಧಿಕಾರಿಗಳು ಹಿಂದಿರುಗಿದ್ದಾರೆ.
ಮೈಸೂರಿನಲ್ಲೂ ಎನ್‌ಐಎ ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮೈಸೂರಿನ ಎನ್​ಆರ್ ಮೊಹಲ್ಲಾ ಹಾಗೂ ಮಂಡಿ‌ ಮೊಹಲ್ಲಾದಲ್ಲಿ ಎಸ್​ಡಿಪಿಐನ ಕೆಲ ಕಾರ್ಯಕರ್ತರ ಮನೆಗಳ ಮೇಲೆ ದಾಳಿ ಮಾಡಿ ತಪಾಸಣೆ ನಡೆಸಿರುವ ಬಗ್ಗೆ ಮಾಹಿತಿ ಬಂದಿದೆ.(ದಿಗ್ವಿಜಯ ನ್ಯೂಸ್​)
ವಿಜಯವಾಣಿ ಅಚ್ಚಗನ್ನಡ ಅಭಿಯಾನ: ಬನ್ನಿ ಭಾಗವಹಿಸಿ ಬಹುಮಾನ ಗೆಲ್ಲಿ

ಡ್ರೈವಿಂಗ್​ ವೇಳೆ ಮೊಬೈಲ್​ನಲ್ಲಿ ಚಾಟಿಂಗ್​ ಮಾಡ್ತಿದ್ದ ಬಸ್​ ಚಾಲಕನನ್ನು ವಶಕ್ಕೆ ಪಡೆದ ಸಾರಿಗೆ ಇಲಾಖೆ ಅಧಿಕಾರಿಗಳು!

ಗುಜರಾತ್ ಚುನಾವಣೆಗೆ 50 ಸಾವಿರ ಕೋಟಿ ರೂ. ಬೆಟ್ಟಿಂಗ್? ಬಿಜೆಪಿ ಬಹುಮತ ಪಡೆಯಲಿದೆ ಎನ್ನುತ್ತಿರುವ ಬುಕ್ಕಿಗಳು

ಟ್ವಿಟರ್​ನಿಂದ ವಜಾಗೊಂಡ ಬೆನ್ನಲ್ಲೇ ಭಾರತೀಯ ಉದ್ಯೋಗಿ ಮಾಡಿರುವ ಟ್ವೀಟ್​ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ!​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − five =
Remember me
