ಬೆಂಗಳೂರು:ಸಾಮಾಜಿಕ ಜಾಲತಾಣದಲ್ಲಿ(Social Media)ಭಾರಿ ವೈರಲ್(Viral)ಆಗುತ್ತಿರುವ ನೆದರ್​ಲ್ಯಾಂಡ್ ಮೂಲದ ಯೂಟ್ಯೂಬರ್ ಮೇಲಿನ ಹಲ್ಲೆಯ ವೀಡಿಯೋ ಬಗ್ಗೆ ಇದೀಗ ಬೆಂಗಳೂರು ಪೊಲೀಸ್ ಆಯುಕ್ತರು(Bengaluru Police Commissioner)ರಾಜ್ಯದ ಜನತೆಗೆ ಟ್ವೀಟ್ ಮುಖೇನ ಸ್ಪಷ್ಟನೆ ನೀಡಿದ್ದಾರೆ.
ಇದನ್ನೂ ಓದಿ:ಬೆಂಗಳೂರಿನಲ್ಲಿ 250 ಇಂದಿರಾ ಕ್ಯಾಂಟಿನ್ ಪ್ರಾರಂಭ : ಸಿಎಂ ಸಿದ್ದರಾಮಯ್ಯ
ವಿದೇಶಿ ಯೂಟ್ಯೂಬರ್ ಆದ ಪೆಡ್ರೋ ಮೊಟಾ ಎಂಬುವವರು ಕರ್ನಾಟಕದ ರಾಜಧಾನಿ ಬೆಂಗಳೂರಿಗೆ ಆಗಮಿಸಿದ್ದರು. ಬೆಂಗಳೂರಿನ ಹಲವು ನಗರಗಳನ್ನು ತಮ್ಮ ವೀಕ್ಷಕರಿಗೆ ಪರಿಚಯಿಸುತ್ತಿದ್ದ ವೇಳೆ ಚಿಕ್ಕಪೇಟೆಯ(Chikpete)ಮಾರುಕಟ್ಟೆಯಲ್ಲಿ ಸ್ಥಳೀಯ ವರ್ತಕನೊಬ್ಬ ಅವರ ಕೈಹಿಡಿದು ಎಳೆದಾಡಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿದೆ.

ಈ ವೀಡಿಯೋ(Video)ನೋಡಿದ ಹಲವರು ವರ್ತಕ ನವಾಬ್ ಶರೀಫ್ ಹಯಾತ್ ಎಂಬುವವರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನೆಟ್ಟಿಗರು ಘಟನೆಯ ವೀಡಿಯೋವನ್ನು ಬೆಂಗಳೂರು ಪೊಲೀಸರ ಅಧಿಕೃತ ಟ್ವಿಟರ್(Twitter)ಖಾತೆಗೆ ಟ್ಯಾಗ್ ಮಾಡಿ ಕ್ರಮ ಕೈಗೊಳ್ಳಲು ಒತ್ತಾಯಿಸುತ್ತಿದ್ದಾರೆ.
ಇದನ್ನೂ ಓದಿ:ನ್ಯಾಕ್ ಎ++ ಶ್ರೇಣಿ ಪಡೆದು ದಾಖಲೆ ನಿರ್ಮಿಸಿದ ಬೆಂಗಳೂರು ವಿವಿ; ರಾಜ್ಯದ ಏಕೈಕ, ದೇಶದ ಎರಡನೇ ಸರ್ಕಾರಿ ವಿವಿ ಎಂಬ ಹೆಗ್ಗಳಿಕೆ
ಈ ಪ್ರಶ್ನೆಗಳಿಗೆ ಉತ್ತರ ನೀಡಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ್ ಅವರು, “ಇದು ಹಳೇ ವೀಡಿಯೋ, ಈಗ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಾಗಿ ಹರಿದಾಡುತ್ತಿದೆ. ದೃಶ್ಯದಲ್ಲಿ ಕಿರುಕುಳ ನೀಡಿದ ವ್ಯಕ್ತಿಯನ್ನು ಪತ್ತೆ ಹಚ್ಚಿ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ನಮ್ಮ ಬೆಂಗಳೂರಿನಲ್ಲಿ ಇಂಥ ಘಟನೆಗಳಿಗೆ ಅವಕಾಶವಿಲ್ಲ” ಎಂದು ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದು ಪೋಸ್ಟ್ ಮಾಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 4 =
Remember me
