ಬೆಂಗಳೂರು:ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಪ್ರತಾಪ್ ರೆಡ್ಡಿ ಅವರನ್ನು ವರ್ಗಾವಣೆಗೊಳಿಸಿ, ಅವರ ಸ್ಥಾನಕ್ಕೆ ಬಿ ದಯಾನಂದ ಅವರನ್ನು ಆಯುಕ್ತರನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಇಂದು (ಮೇ 30) ಆದೇಶ ಹೊರಡಿಸಿದೆ. ಮುಂದಿನ ಆದೇಶದವರೆಗೆ ಪ್ರತಾಪ್​ ರೆಡ್ಡಿ ಅವರು ಆಂತರಿಕ ಭದ್ರತಾ ವಿಭಾದ ಡಿಜಿಪಿಯನ್ನಾಗಿ ಸರ್ಕಾರ ನೇಮಿಸಿದೆ.
ಬೆಂಗಳೂರು ನಗರ ನೂತನ ಪೊಲೀಸ್ ಆಯುಕ್ತ ಬಿದಯಾನಂದ ಅವರು ಈ ಹಿಂದೆ ಗುಪ್ತಚರ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕರಾಗಿದ್ದರು.ಇದನ್ನೂ ಓದಿ:ದ್ವೇಷದ ರಾಜಕಾರಣ, ತೇಜೋವಧೆ ಮಾಡುವ ಟ್ರೋಲ್​ಗಳ ವಿರುದ್ಧ ಕಠಿಣ ಕ್ರಮ; ಸಿಎಂ ಖಡಕ್ ಸೂಚನೆ!
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಮೂಲದ ಬಿ.ದಯಾನಂದ್ 1994ನೇ ಬ್ಯಾಚ್​ನ ಐಪಿಎಸ್ ಅಧಿಕಾರಿ. ಹಲವು ಉನ್ನತ ಹುದ್ದೆಗಳನ್ನು ನಿರ್ವಹಿಸಿದ ಅನುಭವ ಹೊಂದಿದ್ದು, ಮೈಸೂರು ನಗರ ಪೊಲೀಸ್ ಆಯುಕ್ತರಾಗಿ, ಬೆಂಗಳೂರಿನಲ್ಲಿ ಅಪರಾಧ ವಿಭಾಗದ ಜಂಟಿ ಆಯುಕ್ತರಾಗಿ, ಸಂಚಾರ ವಿಭಾಗದ ಆಯುಕ್ತರಾಗಿ ಕರ್ತವ್ಯ ನಿರ್ವಹಿಸಿದ್ದಾರೆ.
ಇದನ್ನೂ ಓದಿ:ಡೇಟಿಂಗ್ ಮಾಡಬೇಕೆಂದಿದ್ದ ಅಕೌಂಟೆಂಟ್​ಗೆ 2.83 ಲಕ್ಷ ರೂ. ಪಂಗನಾಮ ಹಾಕಿದ್ಲು ನಗ್ನವಾಗಿ ವಿಡಿಯೋ ಕಾಲ್ ಮಾಡಿದ್ದ ಹುಡುಗಿ!
ಟ್ರಾಫಿಕ್‌ನ ವಿಶೇಷ ಆಯುಕ್ತ ಹಾಗೂ ಎಡಿಜಿಪಿ ಎಂಎ ಸಲೀಂ ಅವರನ್ನು ಸಿಐಡಿ ವಿಭಾಗದ ಡಿಜಿಪಿ ಆಗಿ ನೇಮಿಸಲಾಗಿದೆ. ಕೆವಿ ಶರತ್‌ ಚಂದ್ರ ಅವರನ್ನು ಗುಪ್ತಚರ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಇದೀಗ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಿರುವ ಸರ್ಕಾರ, ಒಂದೇ ದಿನ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five − four =
Remember me
