ಬೆಂಗಳೂರು:ಚಿತ್ರದುರ್ಗದ ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ 17 ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳುಹಿಸಿರುವ ಬೆಂಗಳೂರು ಪೊಲೀಸರು, ಹೊಸ ಆಯಾಮದಲ್ಲಿ ಪ್ರಕರಣದ ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಇದೀಗ ಮೃತ ರೇಣುಕಸ್ವಾಮಿ ಹೆಸರಿನಲ್ಲಿ ಹೊಸ ಸಿಮ್ ಕಾರ್ಡ್ ಖರೀದಿಸಿರುವ ಖಾಕಿ, ಮೊಬೈಲ್ ಮಾಹಿತಿ ರೀ ಅಕ್ಸೆಸ್ ಮಾಡಿದ್ದಾರೆ ಎಂಬುದು ತಿಳಿದುಬಂದಿದೆ.
ಇದನ್ಣೂ ಓದಿ:‘ಕಲ್ಕಿ’ ಯಲ್ಲಿ ‘ಕಮಲ್’ ಕಮಾಲ್​! ಡಬ್ಬಿಂಗ್ ನಲ್ಲೂ ವೈವಿಧ್ಯತೆ ತೋರಿದ ವಿಶ್ವನಾಯಕ.. ಅಭಿಮಾನಿಗಳಿಗೆ ಅಚ್ಚರಿ!!
ರೇಣುಕಸ್ವಾಮಿ ಮೊಬೈಲ್ ಫೋನ್ ಅನ್ನು ಆರೋಪಿಗಳು ಸಾಕ್ಷ್ಯ ನಾಶಮಾಡುವ ಉದ್ದೇಶದಿಂದ ಸುಮ್ಮನಹಳ್ಳಿ ಜಂಕ್ಷನ್ ಸಮೀಪವಿರುವ ರಾಜಕಾಲುವೆಗೆ ಎಸೆದಿದ್ದರು. ಹೀಗಾಗಿ ಅದರಲ್ಲಿದ್ದ ಡಾಟಾ ನಿಷ್ಕ್ರಿಯವಾಗಿತ್ತು. ಆದ್ದರಿಂದ ಕೋರ್ಟ್ ಅನುಮತಿ ಪಡೆದು ಹೊಸ ಸಿಮ್ ಕಾರ್ಡ್ ಖರೀದಿಸಿರುವ ಪೊಲೀಸರು, ರಿ-ಅಕ್ಸೆಸ್ ಮಾಡಿ ಅದರಲ್ಲಿರುವ ಮಾಹಿತಿ ಕಲೆ ಹಾಕುತ್ತಿದ್ದಾರೆ. ಇದೇ ವೇಳೆ ನಟ ದರ್ಶನ್ ಸೇರಿ ನಾಲ್ವರು ಆರೋಪಿಗಳ ಮೊಬೈಲ್​ಗಳನ್ನು ನ್ಯಾಯಾಲಯ ಅನುಮತಿ ಮೇರೆಗೆ ಅನ್​ಸೀಲ್ ಮಾಡಿ, ಯಾರಿಗೆಲ್ಲಾ ಕರೆ ಮಾಡಲಾಗಿತ್ತು ಎಂದು ಪರಿಶೀಲಿಸುತ್ತಿದ್ದಾರೆ.
ದರ್ಶನ್​ಗೆ ಪ್ರತ್ಯೇಕ್ ಸೆಲ್ ವ್ಯವಸ್ಥೆ:ಭದ್ರತಾ ದೃಷ್ಟಿಯಿಂದಾಗಿ ದರ್ಶನ್​ಗೆ ಪ್ರತ್ಯೇಕ ಸೆಲ್ ವ್ಯವಸ್ಥೆ ಮಾಡಲಾಗಿದೆ. ಜೈಲಿನ ಸೆಕ್ಯೂರಿಟಿ ರೂಂ. ನಂ. 3ರಲ್ಲಿ ದರ್ಶನ್ ಹಾಗೂ ಮತ್ತೊಬ್ಬ ಆರೋಪಿ ವಿನಯ್ ಸಹಖೈದಿಗಳಾಗಿ ಜೈಲುವಾಸ ಅನುಭವಿಸುತ್ತಿದ್ದಾರೆ. ಶನಿವಾರ ರಾತ್ರಿ ದರ್ಶನ್​ಗೆ ಜೈಲಿನ ಮೆನುವಿನಂತೆ ಮುದ್ದೆ, ಚಪಾತಿ, ಅನ್ನ ಸಾಂಬಾರ್, ಮಜ್ಜಿಗೆ ನೀಡಲಾಗಿದೆ. ದಿನದ ಮೂರು ಹೊತ್ತು ಮಾಂಸಹಾರ ಸೇವನೆ ಮಾಡುತ್ತಿದ್ದ ದರ್ಶನ್​ಗೆ ಇದೀಗ ಜೈಲೂಟ ಸರಿಯಾಗಿ ಸೇರುತ್ತಿಲ್ಲ. ಹೀಗಾಗಿ ಚಪಾತಿ ಮಾತ್ರ ತಿಂದು ಮಜ್ಜಿಗೆ ಕುಡಿದಿರುವ ದರ್ಶನ್, ಜೈಲು ಸಿಬ್ಬಂದಿ ಕೊಟ್ಟ ಅನ್ನ ಬೇಡ ಎಂದಿದ್ದರು ಎನ್ನಲಾಗಿದೆ.
ಇದನ್ಣೂ ಓದಿ:ಪ್ರಜಾಪ್ರಭುತ್ವದ ಘನತೆಯನ್ನು ಕಾಪಾಡಿಕೊಳ್ಳುವಂತೆ ಪ್ರತಿಪಕ್ಷಗಳಿಗೆ ಪ್ರಧಾನಿ ಮೋದಿ ಸಲಹೆ
ಬೇರೆ ಜೈಲಿಗೆ ಆರೋಪಿಗಳು ಶಿಫ್ಟ್?:ಕೊಲೆ ಆರೋಪಿಗಳು ಈಗಾಗಲೇ ಒಳಸಂಚಿನಲ್ಲಿ ಭಾಗಿಯಾಗಿದ್ದಾರೆ. ಎಲ್ಲರನ್ನೂ ಒಂದೇ ಜೈಲಿನಲ್ಲಿ ಇರಿಸಿದರೆ ಸಂಚು ರೂಪಿಸುವ ಸಾಧ್ಯತೆಗಳಿರುವ ಹಿನ್ನೆಲೆಯಲ್ಲಿ ಆರೋಪಿಗಳನ್ನು ಪ್ರತ್ಯೇಕವಾಗಿ ರಾಜ್ಯದ ವಿವಿಧ ಜೈಲುಗಳಲ್ಲಿ ಇರಿಸಲು ನಿರ್ದೇಶಿಸುವಂತೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ನ್ಯಾಯಾಲಯವು ಸೋಮವಾರ ಮತ್ತೆ ವಿಚಾರಣೆ ನಡೆಸಿ ಕೈದಿಗಳನ್ನು ಬೇರೆ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ನಿರ್ಧರಿಸುವ ಸಾಧ್ಯತೆಗಳಿವೆ.
ಭಾರತದ ಹೆಡ್​ ಕೋಚ್​ ಆಗುವುದಾದರೆ… ಗೌತಮ್ ಗಂಭೀರ್​ ಮುಂದಿಟ್ಟ 5 ಬೇಡಿಕೆಗಳಿಗೆ ದಂಗಾದ ಬಿಸಿಸಿಐ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 8 =
Remember me
