ಬೆಂಗಳೂರು:ಹುಡುಗಿಯರೇ ಪೆನ್​​ಡ್ರೈವ್​​ನಲ್ಲಿ ಖಾಸಗಿ ವಿಡಿಯೋ ಹಾಗೂ ಫೋಟೋಸ್ ಇಟ್ಟುಕೊಳ್ಳುವ ಮುನ್ನ ನೂರು ಬಾರಿ ಯೋಚಿಸುವುದು ನಿಮಗೆ ಒಳ್ಳೆಯದು. ಇಲ್ಲವಾದಲ್ಲಿ ಎಂಥಾ ಪಜೀತಿ ಸಿಲುಕಬೇಕಾಗುತ್ತದೆ ಎಂಬುದಕ್ಕೆ ಈ ಘಟನೆ ತಾಜಾ ಉದಾಹರಣೆಯಾಗಿದೆ.
ಪೆನ್​​ ಡ್ರೈವ್​​ನಲ್ಲಿದ್ದ ಯುವತಿಯ ಖಾಸಗಿ ಪೋಟೋ ಕಳುಹಿಸಿ ಹಣಕ್ಕಾಗಿ ಬ್ಲಾಕ್ ಮೇಲ್ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರು ಆಗ್ನೇಯ ವಿಭಾಗದ ಪೊಲೀಸರು ಬಂಧಿಸಿದ್ದಾರೆ.
ಶೋಯೆಬ್ ಮೊಹಮ್ಮದ್ ಬಂಧಿತ ಆರೋಪಿ. ಸಂತ್ರಸ್ತ ಯುವತಿಯೊಬ್ಬಳು ತನ್ನ ಖಾಸಗಿ ಫೋಟೋಸ್ ಹಾಗೂ ವಿಡಿಯೋ ಇಟ್ಟುಕೊಂಡಿದ್ದ ಪೆನ್ ಡ್ರೈವ್ ಕಳೆದುಕೊಂಡಿದ್ದಳು. ಆ ಪೆನ್​​ಡ್ರೈವ್ ಆರೋಪಿ ಕೈಯಲ್ಲಿ ಸಿಕ್ಕಿಬಿದ್ದ ಬಳಿಕ ಹೇಗೋ ಯುವತಿಯ ನಂಬರ್​ ಪಡೆದು, ಆಕೆಯ ವಾಟ್ಸ್​ಆ್ಯಪ್​ ನಂಬರ್​ಗೆ ಪೋಟೋಗಳನ್ನು ಕಳುಹಿಸಿ ಬ್ಲಾಕ್​ಮೇಲ್​ ಮಾಡುತ್ತಿದ್ದ.
ಸುಮಾರು 70 ಸಾವಿರ ರೂ. ಹಣಕ್ಕೆ ಆರೋಪಿ ಬೇಡಿಕೆ ಇಟ್ಟಿದ್ದ. ಹಣ ಕೊಟ್ಟರಷ್ಟೇ ಪೆನ್​ಡ್ರೈವ್ ಕೊಡುವುದಾಗಿ ಬ್ಲಾಕ್​ಮೇಲ್​ ಮಾಡಿದ್ದ. ಆರೋಪಿಯ ಕಿರುಕುಳ ಸಹಿಸಲಾಗದೇ ಸಂತ್ರಸ್ತೆ ಆಗ್ನೇಯ ಸೆನ್ ಪೊಲೀಸರಿಗೆ ದೂರು ನೀಡಿದ್ದಳು. ದೂರು ದಾಖಲಿಸಿದ ಸೆನ್​ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.(ದಿಗ್ವಿಜಯ ನ್ಯೂಸ್​)
ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ನೇಪಾಳ ಸರ್ಕಾರಕ್ಕೆ ಖಡಕ್​ ವಾರ್ನಿಂಗ್​ ಕೊಟ್ಟ ಬಿಕಿನಿ ಕಿಲ್ಲರ್ ಚಾರ್ಲ್ಸ್​ ಶೋಭರಾಜ್!​

ಯುವಕನನ್ನು ಬೆದರಿಸಲು ಗ್ಯಾಂಗ್​ ಕಟ್ಕೊಂಡು 450 ಕಿ.ಮೀ ಪ್ರಯಾಣಿಸಿದ ಟಿಕ್​ಟಾಕ್​ ಸ್ಟಾರ್​ಗೆ ಕಾದಿತ್ತು ಬಿಗ್​ ಶಾಕ್​!

ನನ್ನ ಗುರಿ ಏನಿದ್ರು ರೆಸ್ಟ್ ಆಫ್ ದಿ ವರ್ಲ್ಡ್ ಎಂದು ಗುಡುಗಿದ ರಾಕಿ ಭಾಯ್​: ಜಗತ್ತು ಗೆಲ್ಲಲು ಹೊರಟ ಯಶ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − eleven =
Remember me
