ಬೆಂಗಳೂರು:ಸೆಪ್ಟೆಂಬರ್ 11 ರಂದು ಬೆಂಗಳೂರಿನಲ್ಲಿ ಆಟೋ, ಟ್ಯಾಕ್ಸಿ ಸೇರಿದಂತೆ ಖಾಸಗಿ ಬಸ್​ಗಳು ರಸ್ತೆಗೆ ಇಳಿಯುವುದಿಲ್ಲ. ರಾಜ್ಯ ಸರ್ಕಾರದ ಶಕ್ತಿ ಯೋಜನೆ ವಿರುದ್ಧ ಸಿಡಿದೆದ್ದ ಖಾಸಗಿ ವಾಹನ ಚಾಲಕರ ಸಂಘಗಳು, ನಗರದಾದ್ಯಂತ ಬೃಹತ್​ ಮುಷ್ಕರ ಹಮ್ಮಿಕೊಂಡಿದೆ.
ಇದನ್ನೂ ಓದಿ:ಕಾನೂನಿನಿಂದ ತಪ್ಪಿಸಿಕೊಳ್ಳಲು ಯಾರಿಂದಲೂ ಆಗಲ್ಲ! ಪರಿಹಾರ ನೀಡದ್ದಕ್ಕೆ KSRTC ಬಸ್ಸನ್ನು ವಶಪಡಿಸಿಕೊಂಡ ಜಿಲ್ಲಾ ನ್ಯಾಯಾಲಯ…
ಸೆಪ್ಟೆಂಬರ್‌ 11 ರಂದು ಸರ್ಕಾರದ ವಿರುದ್ಧ ಬಂದ್ ಅಸ್ತ್ರಕ್ಕೆ ಮುಂದಾದ ಖಾಸಗಿ ಸಾರಿಗೆ ಸಂಘಟನೆಗಳು. ಗುರುವಾರ ನಡೆದ ಒಕ್ಕೂಟದ ಸಭೆಯಲ್ಲಿ ಮುಷ್ಕರದ ಬಗ್ಗೆ ತೀರ್ಮಾನಿಸಿದ್ದಾರೆ. 32 ಸಂಘಟನೆಗಳಿಂದ ಬಂದ್​ಗೆ ಬೆಂಬಲ ದೊರಕಿದ್ದು, ಆಟೋ‌, ಟ್ಯಾಕ್ಸಿ, ಖಾಸಗಿ ಬಸ್ ಸೇರಿದಂತೆ ಸಂಪೂರ್ಣ ಖಾಸಗಿ ಸಾರಿಗೆ ಬಂದ್ ಮಾಡಲು ನಿರ್ಧಾರ ಮಾಡಲಾಗಿದೆ.
ಖಾಸಗಿ ಸಾರಿಗೆ ಮಾಲೀಕರ/ಚಾಲಕರ ಬೇಡಿಕೆ ಈಡೇರಿಕೆಗೆ ನೀಡಿದ್ದ ಗಡುವು ಆಗಸ್ಟ್ 30ಕ್ಕೆ ಮುಕ್ತಾಯಗೊಂಡಿದೆ. ಶಕ್ತಿ ಯೋಜನೆ ಜಾರಿ ಬಳಿಕ ಆಟೋ ಟ್ಯಾಕ್ಸಿ, ಖಾಸಗಿ ಬಸ್ ಮಾಲೀಕರ ಜೀವನ ತತ್ತರವಾಗಿದೆ. ಇದಕ್ಕೆ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಡ ಹಾಕಿದ್ದ ಖಾಸಗಿ ಸಾರಿಗೆ ಮಾಲೀಕರು ಹಾಗೂ ಚಾಲಕರು, ಕಳೆದ ಕೆಲ ದಿನಗಳ ಹಿಂದೆಯಷ್ಟೇ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರೊಂದಿಗೆ ಭೇಟಿ ಮಾಡಿದ್ದರು.
ಇದನ್ನೂ ಓದಿ:ಬುರ್ಜ್ ಖಲೀಫಾ ಮೇಲೆ ರಾರಾಜಿಸಿದ ‘ಜವಾನ್’​ ಟ್ರೇಲರ್​; ರಿಲೀಸ್​ಗೆ ದಿನಗಣನೆ!
ಇದಾದ ಬಳಿಕವೂ ಬೇಡಿಕೆ ಈಡೇರದ ಹಿನ್ನಲೆ ಇದೀಗ ಖಾಸಗಿ ಸಾರಿಗೆ ಅಸೋಸಿಯೇಷನ್ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದು, ಸಭೆಯಲ್ಲಿ ಸೆಪ್ಟೆಂಬರ್ 11ರ ಮಧ್ಯರಾತ್ರಿ 12 ಗಂಟೆಯಿಂದ ಸೋಮವಾರ ಮಧ್ಯರಾತ್ರಿ 11.59 ರವರೆಗೆ ಮುಷ್ಕರಕ್ಕೆ ನಿರ್ಧರಿಸಿದ್ದಾರೆ.
ಕೇಂದ್ರ ಸರ್ಕಾರ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆದಿದ್ದೇಕೆ? ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದೇನು ನೋಡಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × five =
Remember me
