ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಬಿಟ್ಟೂ ಬಿಡದೆ ಸುರಿಯುತ್ತಿದ್ದು, ಮುಖ್ಯವಾಗಿ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭರ್ಜರಿ ವರ್ಷಧಾರೆಯಾಗುತ್ತಿದೆ. ಮುಂದಿನ 48 ಗಂಟೆಗಳಿಗೆ ಅನ್ವಯಿಸುವಂತೆ ಹವಾಮಾನ ಇಲಾಖೆ ಅಲ್ಲಿನ ಜಿಲ್ಲೆಗಳಿಗೆ ಅಲರ್ಟ್ ಘೋಷಿಸಿದೆ.
ಸಿಲಿಕಾನ್ ಸಿಟಿಯಲ್ಲಿ ನಿರಂತರ ಗಾಳಿ, ಹಗುರ ಮಳೆ: ಬೆಂಗಳೂರು ನಗರ ಮತ್ತು ಸುತ್ತಮುತ್ತ ಸ್ಥಳಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರ ಮಳೆಯಾಗುವ ಸಾಧ್ಯತೆಯಿದ್ದು, ನಿರಂತರ ಗಾಳಿ ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಡಿಗ್ರಿ ಮತ್ತು 20 ಡಿಗ್ರಿ ದಾಖಲಾಗುವ ಸಾಧ್ಯತೆ ಇದೆ.
ಈ ವರ್ಷ ಕರ್ನಾಟಕದಲ್ಲಿ ಮುಂಗಾರು ಮಳೆ ಚೆನ್ನಾಗಿ ಆಗುತ್ತಿದೆ. ರಾಜ್ಯದ ಬಹುತೇಕ ಜಲಾಶಯಗಳಲ್ಲಿ ನೀರಿನ ಒಳಹರಿವು ಹೆಚ್ಚಾಗಿದ್ದು, ಪ್ರವಾಹದ ಭೀತಿ ಎದುರಾಗಿದೆ.
ಶಿವಮೊಗ್ಗ ಜಿಲ್ಲೆಯ ಆಗುಂಬೆ ಮತ್ತು ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ದಾಖಲಾಗಿದೆ. ಕೊಡಗಿನ ಸೋಮವಾರಪೇಟೆಯಲ್ಲಿ 15 ಸೆಂ.ಮೀ., ಉತ್ತರ ಕನ್ನಡದ ಕ್ಯಾಸಲ್ ರಾಕ್ ಮತ್ತು ಚಿಕ್ಕಮಗಳೂರಿನ ಶೃಂಗೇರಿಯಲ್ಲಿ 14 ಸೆಂ.ಮೀ. ಮಳೆ ಬಿದ್ದಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಮುದ್ರ ಮಟ್ಟದಲ್ಲಿರುವ ಆಫ್ – ಶೋರ್ ಟ್ರಫ್ ಈಗ ದಕ್ಷಿಣ ಗುಜರಾತ್​ನಿಂದ ಉತ್ತರ ಕರ್ನಾಟಕ ಕರಾವಳಿಯವರೆಗೆ ಹಾದು ಹೋಗುತ್ತಿದೆ. ಆದ್ದರಿಂದ ಕರಾವಳಿ ಕರ್ನಾಟಕ ಮತ್ತು ಪಕ್ಕದ ಪಶ್ಚಿಮ ಘಟ್ಟಗಳ ಜಿಲ್ಲೆಗಳಲ್ಲಿ ಬಲವಾದ ಗಾಳಿ ಬೀಸುತ್ತಿದೆ.
ಉಡುಪಿ ಜಿಲ್ಲೆಗೆ ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್, ದಕ್ಷಿಣ ಕನ್ನಡಕ್ಕೆ ಆರೆಂಜ್ ಮತ್ತು ಯೆಲ್ಲೋ, ಉತ್ತರ ಕನ್ನಡ ಜಿಲ್ಲೆಗೆ ಮುಂದಿನ 48 ಗಂಟೆಗಳ ಕಾಲ ಆರೆಂಜ್ ಅಲರ್ಟ್ ನೀಡಲಾಗಿದೆ. ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗಕ್ಕೆ ಇಂದು ಯೆಲ್ಲೋ ಮತ್ತು ನಾಳೆ ಆರೆಂಜ್ ಅಲರ್ಟ್, ಕೊಡಗುಗೆ ಇಂದು ಯೆಲ್ಲೋ ಅಲರ್ಟ್ ಕೊಡಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × five =
Remember me
