ಬೆಂಗಳೂರು:ಬೆಂಗಳೂರು ವಿಮಾನ ನಿಲ್ದಾಣದ ರಸ್ತೆಯ ದೊಡ್ಡಜಾಲ ಬಳಿ ಭಾರೀ ಅಪಘಾತದಲ್ಲಿ ಹಲವಾರು ವಾಹನಗಳು ಒಂದರ ನಂತರ ಒಂದರಂತೆ ಡಿಕ್ಕಿ ಹೊಡೆದವು. ದೊಡ್ಡಜಾಲ ಮೇಲ್ಸೇತುವೆ ಮೇಲೆ ಸೋಮವಾರ ಸಂಜೆ ಈ ಘಟನೆ ನಡೆದಿದೆ.
ಈ ಸರಣಿ ಅಪಘಾತದಲ್ಲಿ ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ಆದರೆ, ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಆದರೆ ಕಾರುಗಳು ವೊಂದಕ್ಕೊಂದು ಗುದ್ದಿಕೊಂಡು ಜಖಂ ಆಗಿವೆ. ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ, ಇದರಲ್ಲಿ ಕನಿಷ್ಠ 8 ಕಾರುಗಳು ಪರಸ್ಪರ ಡಿಕ್ಕಿ ಹೊಡೆದು ಜಖಂ ಕೊಂಡಿರುವುದನ್ನು ಗಮನಿಸಬಹುದಾಗಿದೆ.
Just-in: A serial collision involving multiple cars was reported near Doddajala on Bengaluru airport Road on Monday.
Details awaited.pic.twitter.com/KXZtyGCU5A
— ChristinMathewPhilip (@ChristinMP_)December 18, 2023

ಈ ಅಪಘಾತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಚಿಕ್ಕಜಾಲ ಸಂಚಾರ ಠಾಣೆ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಅಧಿಕಾರಿಗಳು ಕ್ಷಿಪ್ರವಾಗಿ ಕಾರ್ಯನಿರ್ವಹಿಸಿದ ನಂತರ ಟ್ರಾಫಿಕ್​​ ಜಾಮ್ ಅನ್ನು ತೆರವುಗೊಳಿಸಲಾಗಿದೆ.
ಮಾಧ್ಯಮ ವರದಿಗಳ ಪ್ರಕಾರ, ಮಾರುತಿ ಓಮ್ನಿ ವಾಹನದ ಚಾಲಕ ಹಠಾತ್ ಬ್ರೇಕ್ ಹಾಕಿದ್ದರಿಂದ ಹಿಂದೆ ಬರುತ್ತಿದ್ದ ಕಾರುಗಳು ಒಂದಕ್ಕೊಂದು ಡಿಕ್ಕಿಯಾಗಿವೆ. ಈ ವೇಳೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ದಾವೂದ್ ಇಬ್ರಾಹಿಂ ಲವ್ ಸ್ಟೋರಿ: ಭೂಗತ ಪಾತಕಿ ದಾವೂದ್ ಪ್ರೀತಿಯಲ್ಲಿ ಬಿದ್ದ ಸ್ಟಾರ್ ಹೀರೋಯಿನ್ ಯಾರು ಗೊತ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + ten =
Remember me
