ರಾಮನಗರ:ನಾನು ನಿರಂತರವಾಗಿ ಜನರ ಮಧ್ಯೆ ಇದ್ದು ಕೆಲಸ ಮಾಡಿದ್ದು, ಈಗ ನನಗೆ ಕೂಲಿ ಕೊಡಿ ಎಂದು ಕೇಳುತ್ತಿದ್ದೇನೆ. ಜನರಿಂದ ನನಗೆ ಉತ್ತಮ ಸ್ಪಂದನೆ ಸಿಗುತ್ತಿದೆ ಎಂದು ಸಂಸದ ಡಿ.ಕೆ. ಸುರೇಶ್ ತಿಳಿಸಿದರು.
ಇದನ್ನೂ ಓದಿ:ಅಧ್ಯಾತ್ಮಿಕ ಸದ್ಗುರು ಜಗ್ಗಿ ವಾಸುದೇವ್ ಆರೋಗ್ಯದಲ್ಲಿ ಚೇತರಿಕೆ, ಆಸ್ಪತ್ರೆಯಿಂದ ಬಿಡುಗಡೆ
ಕನಕಪುರದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದ ಅವರು, “ನಾಳೆ ಬೆಳಗ್ಗೆ 11 ಗಂಟೆಗೆ ರಾಮನಗರದಲ್ಲಿ ನಾಮಪತ್ರ ಸಲ್ಲಿಕೆ ಮಾಡುತ್ತಿದ್ದು, ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರುಗಳಾದ ರಾಮಲಿಂಗಾ ರೆಡ್ಡಿ, ಗೃಹ ಸಚಿವರಾದ ಪರಮೇಶ್ವರ್ ಅವರು ಕೂಡ ಆಗಮಿಸಲಿದ್ದಾರೆ. ಅದೇ ರೀತಿ ಸಾರ್ವಜನಿಕರಿಗೂ ಆಹ್ವಾನ ನೀಡಿ, ನನಗೆ ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದ್ದೇನೆ” ಎಂದು ತಿಳಿಸಿದರು.
ನಿಶಾ ಯೋಗೇಶ್ವರ್ ಪಕ್ಷ ಸೇರ್ಪಡೆ ಬಗ್ಗೆ ವರಿಷ್ಠರು ತೀರ್ಮಾನಿಸುತ್ತಾರೆ:ಯೋಗೇಶ್ವರ್ ಅವರ ಪುತ್ರಿ ನಿಶಾ ಯೋಗೇಶ್ವರ್ ಅವರು ಪಕ್ಷ ಸೇರ್ಪಡೆಯಾಗುವ ಸುದ್ದಿ ಹರಿದಾಡುತ್ತಿದೆ ಎಂದು ಕೇಳಿದಾಗ, “ಈ ಬಗ್ಗೆ ಚರ್ಚೆ ನಡೆಯುತ್ತಿದ್ದು, ಪಕ್ಷದ ವರಿಷ್ಠರು ಈ ಬಗ್ಗೆ ತೀರ್ಮಾನ ಮಾಡಲಿದ್ದಾರೆ. ಅವರು ಬಹಳ ದಿನಗಳಿಂದ ಪಕ್ಷ ಸೇರುವುದಾಗಿ ಹೇಳುತ್ತಿದ್ದಾರೆ. ಅವರ ಸ್ವಯಂ ತೀರ್ಮಾನದ ಬಗ್ಗೆ ಜಿಲ್ಲೆಯ ಮುಖಂಡರು ಹಾಗೂ ನಾಯಕರ ಜತೆ ಚರ್ಚೆ ಮಾಡಿ ಅವರ ಅಭಿಪ್ರಾಯದ ಮೇರೆಗೆ ತೀರ್ಮಾನಿಸಲಾಗುವುದು” ಎಂದು ತಿಳಿಸಿದರು.
ಕೋಲಾರದಲ್ಲಿ ಮುನಿಯಪ್ಪ ಅವರ ಕುಟುಂಬಕ್ಕೆ ಟಿಕೆಟ್ ನೀಡಬಾರದು ಎಂಬ ಆಗ್ರಹದೊಂದಿಗೆ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರ ರಾಜೀನಾಮೆ ಬೆದರಿಕೆ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ನನಗೆ ಮಾಹಿತಿ ಇಲ್ಲ” ಎಂದು ತಿಳಿಸಿದರು.
ಕಾಂಗ್ರೆಸ್​, ಬಿಜೆಪಿ ನಾಯಕರಿಗೆ ಕೇಂದ್ರ ಚುನಾವಣಾ ಆಯೋಗ ನೋಟಿಸ್!: ಕಾರಣ ಹೀಗಿದೆ?

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:16 − three =
Remember me
