ಬೆಂಗಳೂರು:ರಾಜ್ಯ ಕಾಂಗ್ರೆಸ್​ ಪಾಳಯದಲ್ಲಿ ಮುಂದಿನ ಮುಖ್ಯಮಂತ್ರಿ ಕಿತ್ತಾಟ ಸಂಬಂಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಣದ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದೆ.​
ಪದೇಪದೆ ಸಿದ್ದರಾಮಯ್ಯ ಹೆಸರನ್ನು ಮಾಧ್ಯಮಗಳ ಮುಂದೆ ಕೆಲ ಕಾಂಗ್ರೆಸ್​ ನಾಯಕರು ಹೇಳುತ್ತಿರುವುದರಿಂದ ಸಹಜವಾಗಿಯೇ ಡಿಕೆಶಿಗೆ ಅಸಮಾಧಾನವಾಗಿದೆ. ಈಗಾಗಲೇ ಹೈಕಮಾಂಡ್​ ಮಧ್ಯಪ್ರವೇಶಿಸಿ ಎಚ್ಚರಿಕೆಯನ್ನು ನೀಡಿದ್ದರೂ ಒಳರಾಜಕೀಯ ಮಾತ್ರ ಹಾಗೇ ಮುಂದುವರಿದಿದೆ.
ಇದರ ನಡುವೆ ಕೆಪಿಸಿಸಿ ಪ್ರಚಾರ ವಾಹನದಲ್ಲಿ ನಿನ್ನೆಯಿಂದ ಮಾಜಿ ಸಿಎಂ ಸಿದ್ದರಾಮಯ್ಯ ಫೋಟೋ ಮಾಯಾವಾಗಿರುವುದು ಭಾರಿ ಚರ್ಚೆಗೆ ಕಾರಣವಾಗಿದೆ. ಸಿದ್ದರಾಮಯ್ಯ ಮತ್ತು ಡಿಕೆಶಿ ನಡುವೆ ಅಂತರ ಸೃಷ್ಟಿಯಾಗಿದೆ ಎಂಬ ಮಾತುಗಳು ರಾಜಕೀಯ ಪಡಸಾಲೆಯಿಂದ ಕೇಳಿಬಂದಿದೆ.

ಡಿ.ಕೆ ಶಿವಕುಮಾರ್ ನಿವಾಸದಲ್ಲಿ ಇರುವ ಪ್ರಚಾರ ವಾಹನದಲ್ಲಿ ರಾಹುಲ್ ಗಾಂಧಿ ಫೋಟೋ ಮಧ್ಯದಲ್ಲಿ ಎಡಭಾಗಕ್ಕೆ ಕೆಪಿಸಿಸಿ ಅಧ್ಯಕ್ಷರ ಫೋಟೋ ಮತ್ತು ಬಲಭಾಗಕ್ಕೆ ಸಿದ್ದರಾಮಯ್ಯ ಫೋಟೋ ಹಾಕಿದ್ದರು. ಮುಂದಿನ ಸಿಎಂ ಅಭ್ಯರ್ಥಿ ಮಾತು ಕೇಳಿ ಬಂದಿದ್ದೆ ತಡ, ವಾಹನದ ಮೇಲಿನ ಸಿದ್ದರಾಮಯ್ಯ ಫೋಟೋ ಸ್ಟಿಕ್ಕರ್ ಅನ್ನು ಡಿಕೆಶಿ ಬೆಂಬಲಿಗರು ಕಿತ್ತುಹಾಕಿದ್ದಾರೆಂದು ತಿಳಿದುಬಂದಿದೆ. ಸಿಎಂ ರೇಸ್ ಸಮಸ್ಯೆ ಸೃಷ್ಟಿ ಆದ ತಕ್ಷಣ ಈ ಘಟನೆ ನಡೆದಿದ್ದು, ಇದು ಮುಂದೆ ಯಾವ ಸ್ವರೂಪ ಪಡೆದುಕೊಳ್ಳಲಿದೆ ಎಂದು ಕಾದು ನೋಡಬೇಕಿದೆ.(ದಿಗ್ವಿಜಯ ನ್ಯೂಸ್​)

ಭಾರತದ ನಕಾಶೆ ಕೆಡಿಸಿದ ಟ್ವಿಟರ್​: ಎಫ್​ಐಆರ್​ನಲ್ಲಿ ಮನೀಶ್​ ಮಹೇಶ್ವರಿ ಹೆಸರು ಉಲ್ಲೇಖ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + ten =
Remember me
