ಬೆಂಗಳೂರು:ಮಾವ ಮಾಡಿದ್ದ ಸಾಲಕ್ಕೆ ಆರೋಪಿಗಳು ಅಳಿಯನನ್ನೇ ಅಪಹರಣ ಮಾಡಿರುವ ಘಟನೆ ನಗರದ ಬೊಮ್ಮನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಆರೋಪಿ ಸ್ವರೂಪ್ ಶೆಟ್ಟಿ ಮತ್ತು ತಂಡದಿಂದ ರಾಜಶೇಖರ ಎಂಬಾತನನ್ನು ಅಪಹರಿಸಲಾಗಿದೆ. ರಾಜಶೇಖರ ಅವರ ಮಾವ ಲಕ್ಷ್ಮಣ್ ರೆಡ್ಡಿ ಮತ್ತು ಸ್ವರೂಪ್ ಶೆಟ್ಟಿ ಮಧ್ಯ ಹಣಕಾಸಿನ ವ್ಯವಹಾರ ನಡೆದಿತ್ತು. ಸ್ವರೂಪ್ ಶೆಟ್ಟಿ ಬಳಿ ಲಕ್ಷ್ಮಣ್​ ರೆಡ್ಡಿ 5 ಲಕ್ಷ ರೂ. ಹಣ ತೆಗೆದುಕೊಂಡಿದ್ದ. ಆದ್ರೆ 2 ಲಕ್ಷ ವಾಪಸ್ ಕೊಟ್ಟು ಉಳಿದ ಮೂರು ಲಕ್ಷ ಕೊಡದೆ ಸತಾಯಿಸುತ್ತಿದ್ದ. ಹೀಗಾಗಿ ಲಕ್ಷ್ಮಣ್ ರೆಡ್ಡಿ ಅಳಿಯ ರಾಜಶೇಖರ್​ನನ್ನು ಸ್ವರೂಪ್ ಆ್ಯಂಡ್ ಗ್ಯಾಂಗ್ ಅಪಹರಿಸಿತ್ತು.
ಬೊಮ್ಮನಹಳ್ಳಿ ಠಾಣಾ ವ್ಯಾಪ್ತಿಯ ಗಾರೆಬಾವಿಪಾಳ್ಯ ಬಳಿ ಅಪಹರಣ ಮಾಡಲಾಗಿದೆ. ಕಿಡ್ನಾಪ್ ಮಾಡಿ ರಾಜಶೇಖರ್ ಫೋನ್​ನಿಂದಲೇ ಲಕ್ಷ್ಮಣ್ ರೆಡ್ಡಿಗೆ ಕರೆ ಮಾಡದೆ ,ಲಕ್ಷ್ಮಣ್ ಅವರ ಅಣ್ಣ ರಾಮಚಂದ್ರರಿಗೆ ಕಾಲ್ ಮಾಡಿಸಿ, ಹಣಕ್ಕೆ ಡಿಮ್ಯಾಂಡ್ ಮಾಡಿದ್ದರು.
ಕರೆ ಮಾಡಿಸಿ 50 ಸಾವಿರ ಹಣ ಅಕೌಂಟ್​ಗೆ ಹಾಕಿಸಿಕೊಂಡಿದ್ದ ಆರೋಪಿಗಳು, ಮತ್ತೆ 2.5 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಎರಡನೇ ಬಾರಿ ಆರೋಪಿಗಳೇ ಮಾತನಾಡಿ ಹಣದ ಬೇಡಿಕೆ ಇಟ್ಟಿದ್ದರು. ನಿಮ್ಮ ಅಳಿಯನನ್ನು ಕಿಡ್ನಾಪ್ ಮಾಡಿದ್ದೇವೆ, 2.5 ಲಕ್ಷ ಹಣ ತಂದು ಕೊಡಿ ಎಂದು ಡಿಮ್ಯಾಂಡ್ ಮಾಡಿದ್ದರು. ಅಲ್ಲದೆ, ರಾಜಶೇಖರ ಮೇಲೆ ಹಲ್ಲೆ ಸಹ ಮಾಡಿದ್ದರು.
ಇದೀಗ ಸ್ವರೂಪ್ ಶೆಟ್ಟಿ ಮತ್ತು ಗ್ಯಾಂಗ್ ವಿರುದ್ಧ ದೂರು ದಾಖಲಾಗಿದೆ. ಬೊಮ್ಮನಹಳ್ಳಿ ಠಾಣೆಯಲ್ಲಿ ರಾಜಶೇಖರ್ ಮಾವ ರಾಮಚಂದ್ರ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಬೊಮ್ಮನಹಳ್ಳಿ ಠಾಣಾ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. (ದಿಗ್ವಿಜಯ ನ್ಯೂಸ್​)

ನಿರ್ದೇಶಕ ರಾಜಮೌಳಿ ಹಾಲಿವುಡ್​ಗೆ ಹಾರೋದು ಫಿಕ್ಸ್!

ಅಭಿವೃದ್ಧಿ ಯೋಜನೆ ಅಜೆಂಡಾ; ದೆಹಲಿಗೆ ಸಿಎಂ ಬೊಮ್ಮಾಯಿ: ಡಬಲ್ ಇಂಜಿನ್ ಸರ್ಕಾರ ಸಾಕಾರಕ್ಕೆ ಯತ್ನ

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ; ಎಂದಿನಿಂದ ಎಂದಿನವರೆಗೆ ಎಕ್ಸಾಂ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + 16 =
Remember me
