– ಕೆಲಸದಿಂದ ತೆಗೆದಿದ್ದಕ್ಕೆ ನಡೆಯಿತಾ ಪ್ರತಿಮಾ ಹತ್ಯೆ!
ಬೆಂಗಳೂರು:ಸರ್ಕಾರಿ ಅಧಿಕಾರಿ ಪ್ರತಿಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿತ್ತು. ಆದರೆ ವಿಚಾರಣೆ ವೇಳೆ ಆರೋಪಿ ಒಬ್ಬನೇ ಎಂಬುದು ಸ್ಪಷ್ಟವಾಗಿದೆ.
ಕಳೆದ ಐದು ವರ್ಷಗಳಿಂದ ಕಾರು ಚಾಲಕನ ಕೆಲಸ ಮಾಡುತ್ತಿದ್ದ ಕಿರಣ್ ನಿಂದ ಕೃತ್ಯ‌ ನಡೆದಿರುವುದು ತನಿಖೆ ವೇಳೆ ಬಯಲಾಗಿದೆ. ಆರೋಪಿ ಕಿರಣ್ ಗುತ್ತಿಗೆ ಆಧಾರದಲ್ಲಿ ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿದ್ದ. ಆತನ ತಂದೆ ಸಹ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ಚಾಲಕನಾಗಿ ಕೆಲಸ ನಿರ್ವಹಿಸುತ್ತಿದ್ದರು. ಆರೋಪಿ ಕಿರಣ್ ಹಾಗೂ ಪ್ರತಿಮಾ ನಡುವೆ ಕೆಲ ಕಲ ವಿಚಾರಗಳಿಗೆ ಭಿನ್ನಾಭಿಪ್ರಾಯವುಂಟಾಗಿತ್ತು. ಹೀಗಾಗಿ ಕೆಲ ದಿನಗಳ ಹಿಂದಷ್ಟೇ ಕಿರಣ್ ನನ್ನ ಚಾಲಕನ ಕೆಲಸದಿಂದ ಪ್ರತಿಮಾ ತೆಗೆದು ಹಾಕಿದ್ದರು.
ಕೆಲಸದಿಂದ ತೆಗೆದಿದ್ದಕ್ಕೆ ಕೋಪಗೊಂಡಿದ್ದ ಕಿರಣ್​, ಶನಿವಾರ (ಪ್ರತಿಮಾ ಕೊಲೆಯಾದ ದಿನ ನ.6) ಪ್ರತಿಮಾ ಅವರ ಮನೆಗೆ ತೆರಳಿದ್ದ ಕಿರಣ್, ತಪ್ಪಾಗಿದೆ ಕೆಲಸದಿಂದ ತೆಗೆಯಬೇಡಿ ಎಂದು ಕೇಳಿಕೊಂಡಿದ್ದಾನೆ. ಅಲ್ಲದೇ ಪ್ರತಿಮಾರ ಕಾಲಿಗೆ ಬಿದ್ದು ಬೇಡಿಕೊಂಡಿದ್ದಾನೆ. ಆದರೆ ‘ಎಷ್ಟೇ ಮನವಿ ಮಾಡಿದರೂ ಸಹ ಸಾಧ್ಯವಿಲ್ಲ’ ಎಂದು ಪ್ರತಿಮಾ ಕಠಿಣವಾಗಿ ಪ್ರತಿಕ್ರಿಯಿಸಿದ್ದರು. ಇದರಿಂದ ಸಿಟ್ಟಿಗೆದ್ದ ಕಿರಣ್ ಪ್ರತಿಮಾಳನ್ನು ಉಸಿರುಗಟ್ಟಿಸಿ ನಂತರ ಚಾಕುವಿನಿಂದ ಕುತ್ತಿಗೆ ಸೀಳಿ ಹತ್ಯೆಗೈದಿದ್ದಾಗಿ ಪೊಲೀಸರೆದುರು ಬಾಯ್ಬಿಟ್ಟಿದ್ದಾನೆ.
ಈ ಕೃತ್ಯ ಎಸಗಿದ ನಂತರ ಚಾಮರಾಜನಗರದತ್ತ ಪರಾರಿಯಾದ್ದ. ಪೊಲೀಸರು ಕ್ಷಿಪ್ರ ಕಾರ್ಯಚರಣೆ ನಡೆಸಿ ಕಿರಣ್​ನ ಫೋನ್ ಸಿಗ್ನಲ್ ಆಧರಿಸಿ ಕೊನೆಗೆ ಮಹದೇಶ್ವರಬೆಟ್ಟದಲ್ಲಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಕೃತ್ಯದ ಬಳಿಕ ಪರಾರಿಯಾಗಿದ್ದ ಕಿರಣ್ ನನ್ನ ಚಾಮರಾಜನಗರ ಬಳಿ ಪೊಲೀಸರು ವಶಕ್ಕೆ ಪಡೆದಿದ್ದರು. ಸದ್ಯ ಆರೋಪಿಯ ಪ್ರಾಥಮಿಕ ವಿಚಾರಣೆ ಪೂರ್ಣಗೊಳಿಸಿರುವ ಪೊಲೀಸರು ಆತನನ್ನ ನ್ಯಾಯಾಲಯಕ್ಕೆ ಹಾಜರು ಪಡಿಸಿ, ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆಯಲು ಸಿದ್ಧತೆ ಮಾಡಿಕೊಂಡಿರುವುದಾಗಿ ತಿಳಿಸಿದ್ದಾರೆ.
ಅಕ್ರಮ ಕಲ್ಲು ಗಣಿಗಾರಿಕೆ ಮೇಲೆ ರೇಡ್​ ಹೋಗುವ ಮಾಹಿತಿಯನ್ನು ಲೀಕ್ ಮಾಡುತ್ತಿದ್ದ. ಈ ಕಾರಣಕ್ಕೆ ಪ್ರತಿಮಾ ಅವರು ಕಿರಣ್​ಗೆ ಎಚ್ಚರಿಕೆ ನೀಡಿದ್ದರು. ಹಾಗೇ ಕೆಲ ದಿನಗಳ ಹಿಂದೆ ಒಂದು ಅಕ್ಸಿಡೆಂಟ್ ಮಾಡಿದ್ದ. ಈ ಕಾರಣಕ್ಕೆ ಪ್ರತಿಮಾ ಅವರು ಕಾರು ಚಾಲಕ ಕಿರಣ್​ನನ್ನು 10 ದಿನಗಳ ಹಿಂದೆ ಅಷ್ಟೇ ಕೆಲಸದಿಂದ ತೆಗೆದು ಹಾಕಿದ್ದರು ಎನ್ನಲಾಗಿದೆ.
KEA Exam Scam; ‘ಸರ್ಕಾರ’ ಎಂಬ ಹೆಸರಿನಿಂದ ಅಕ್ರಮದಲ್ಲಿ ಭಾಗಿಯಾಗಿರೋ ಅಭ್ಯರ್ಥಿಗಳಿಗೆ ವಾಟ್ಸಪ್ ಕಾಲ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + eighteen =
Remember me
