ಬೆಂಗಳೂರು:ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಾ.24ರಂದು ಕೊಮ್ಮಘಟ್ಟಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಅವರು ಸಂಚರಿಸುವ ಮಾರ್ಗದಲ್ಲಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ಸಲುವಾಗಿ ಅಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 4 ಗಂಟೆವರೆಗೆ ನಗರದ ಕೆಲ ಮಾರ್ಗಗಳಲ್ಲಿ ಎಲ್ಲಾ ಮಾದರಿ ಸರಕು ಸಾಗಣೆ ವಾಹಗಳ ಸಂಚಾರ ನಿರ್ಬಂಧಿಸಲಾಗಿದೆ.
ಟೌನ್‌ಹಾಲ್ ಕಡೆಯಿಂದ ಎನ್.ಆರ್.ರಸ್ತೆಯ ಮಾರ್ಗವಾಗಿ ಮೈಸೂರ ರಸ್ತೆ ಕಡೆಗೆ, ನಾಯಂಡಹಳ್ಳಿ ಜಂಕ್ಷನ್‌ನಿಂದ ಬೆಂಗಳೂರು ನಗರದ ಒಳಭಾಗ ಮತ್ತು ಹೊರಭಾಗಕ್ಕೆ ಸಂಚರಿಸುವ ಸರಕು ಸಾಗಣೆ ವಾಹನಗಳು, ಕುಂಬಳಗೋಡು ಕಡೆಯಿಂದ ಕೆಂಗೇರಿ ಕಡೆಗೆ ಸಂಚರಿಸವ ಸರಕು ಸಾಗಣೆ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.
ಟೌನ್‌ಹಾಲ್ ಜಂಕ್ಷನ್‌ನಿಂದ ಎನ್.ಆರ್.ರಸ್ತೆಯ ಮಾರ್ಗವಾಗಿ ಮೈಸೂರು ರಸ್ತೆಗೆ ಸಂಚರಿಸುವ ವಾಹನಗಳು ಲಾಲ್‌ಬಾಗ್ ರಸ್ತೆಯ ಮೂಲಕ ಸಂಚರಿಸಬಹುದು. ನಾಯಂಡಹಳ್ಳಿ ಜಂಕ್ಷನ್‌ನಿಂದ ಬೆಂಗಳೂರು ನಗರದ ಒಳ ಮತ್ತು ಹೊರಭಾಗಕ್ಕೆ ಸಂಚರಿಸುವವರು ನಾಗರಭಾವಿ-ಸುಮ್ಮನಹಳ್ಳಿ ರಿಂಗ್ ರಸ್ತೆಯ ಮಾರ್ಗವಾಗಿ ಸಂಚರಿಸಬಹುದು. ಕುಂಬಳಗೋಡು ಕಡೆಯಿಂದ ಕೇಂಗೇರಿ ಕಡೆಗೆ ಸಂಚರಿಸುವವರು ನೈಸ್ ರಸ್ತೆಯ ಮೂಲಕ ಸಂಚರಿಸಬಹುದು.
ಇನ್ನು ಮಧ್ಯಾಹ್ನ 12 ಗಂಟೆಯಿಂದ ಸಂಜೆ 4 ಗಂಟೆ ವರೆಗೆ ಹಳೇ ವಿಮಾನ ನಿಲ್ದಾಣ ರಸ್ತೆ, ಮೈಸೂರು ರಸ್ತೆ, ಎನ್.ಆರ್.ರಸ್ತೆ, ನೃಪತುಂಗ ರಸ್ತೆ, ಶೇಷಾದ್ರಿ ರಸ್ತೆ, ಪ್ಯಾಲೇಸ್ ರಸ್ತೆ, ರೇಸ್‌ಕೋರ್ಸ್ ರಸ್ತೆ, ಕೆಂಗೇರಿಯಿಂದ ಕೊಮ್ಮಘಟ್ಟ ರಸ್ತೆಗಳನ್ನು ಬಳಸದೆ ಪರ್ಯಾಯ ರಸ್ತೆಗಳನ್ನು ಬಳಸುವಂತೆ ನಗರ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + seventeen =
Remember me
