ಬೆಂಗಳೂರು:ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಮತ್ತು ಇಸ್ರೋ ಅಧ್ಯಕ್ಷ ಎಸ್. ಸೋಮನಾಥ್ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ಘೋಷಿಸಿದೆ. ಆಯ್ಕೆ ಸಮಿತಿಯು ಶಿಫಾರಸು ಮಾಡಿದ್ದ ಪಟ್ಟಿಗೆ ರಾಜ್ಯಪಾಲರು ಅನುಮೋದನೆ ನೀಡಿದ್ದಾರೆ ಎಂದು ಬೆಂಗಳೂರು ವಿವಿ ಮೂಲಗಳು ತಿಳಿಸಿವೆ.
ವಿಶ್ವವಿದ್ಯಾಲಯದ 58ನೇ ಘಟಿಕೋತ್ಸವ ಸೆ. 29 ರಂದು ನಡೆಯಬೇಕಿತ್ತು. ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಘಟಿಕೋತ್ಸವವನ್ನು ಮುಂದೂಡಲಾಗಿದೆ. ಸದ್ಯದಲ್ಲಿಯೇ ಮುಂದಿನ ದಿನಾಂಕವನ್ನು ಪ್ರಕಟಿಸಲಾಗುವುದು. ಅದಕ್ಕೂ ಮೊದಲು ಸುದ್ದಿಗೋಷ್ಠಿ ನಡೆಸಿ ಗೌರವ ಡಾಕ್ಟರೇಟ್ ಸೇರಿ ಘಟಿಕೋತ್ಸವಕ್ಕೆ ಸಂಬಂಧಿಸಿದ ಮಾಹಿತಿಯನ್ನು ಅಧಿಕೃತವಾಗಿ ಹಂಚಿಕೊಳ್ಳಲಾಗುತ್ತದೆ‌ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಇಬ್ಬರು ಮಹಿಳಾ ಕಾನ್​ಸ್ಟೆಬಲ್​ಗಳಿಗೆ ಠಾಣೆಯಲ್ಲೇ ಶಾಸ್ತ್ರೋಕ್ತ ಸೀಮಂತ!
ಘಟಿಕೋತ್ಸವ ಸೆ.29ರಂದು ನಡೆಯುವುದಾಗಿದ್ದರೆ, ಬುಧವಾರ ಸುದ್ದಿಗೋಷ್ಠಿ ನಡೆಸಬೇಕಾಗುತ್ತಿತ್ತು. ಕರ್ನಾಟಕ ಬಂದ್ ಇರುವುದರಿಂದ ನಡೆಸಲು ಸಾಧ್ಯವಾಗಿಲ್ಲ ಎಂದು ಬೆಂಗಳೂರು ವಿವಿ ಮೂಲಗಳು ತಿಳಿಸಿವೆ.
ಒಂದು ಪೊಂಗಲ್ ತಿನ್ನುವ ಸಮಯದಲ್ಲಿ ಕಾವೇರಿ ನೀರಿನ ಸಮಸ್ಯೆ ಬಗೆಹರಿಸಬಹುದಿತ್ತು: ಬಿಜೆಪಿ ಹೀಗಂದಿದ್ದೇಕೆ?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five − 3 =
Remember me
