ಬೆಂಗಳೂರು:ಕರೊನಾ ಮಧ್ಯೆಯೇ ಸ್ನಾತಕೋತ್ತರ ಪದವಿ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿರುವ ಜ್ಞಾನಭಾರತಿಯ ಬೆಂಗಳೂರು ವಿಶ್ವವಿದ್ಯಾಲಯ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪ್ರವೇಶ ಪ್ರಕ್ರಿಯೆಯನ್ನು ಆನ್‌ಲೈನ್‌ನಲ್ಲಿ ನಡೆಸಲು ನಿರ್ಧರಿಸಿದೆ.  ಅರ್ಜಿ ಸಲ್ಲಿಕೆಯಿಂದ ಹಿಡಿದು ಸೀಟು ಹಂಚಿಕೆ ವರೆಗೂ ಎಲ್ಲವನ್ನೂ ಆನ್‌ಲೈನ್‌ನಲ್ಲೇ ನಡೆಯಲಿದೆ.
ಈಗಾಗಲೇ ವಿವಿಯ ಜ್ಞಾನಭಾರತಿ ಕ್ಯಾಂಪಸ್, ರಾಮನಗರ ಪಿಜಿ ಕೇಂದ್ರ ಮತ್ತು ಸಂಯೋಜಿತ ಕಾಲೇಜುಗಳಲ್ಲಿನ 2020-21ನೇ ಸಾಲಿನ ವಿವಿಧ ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದ್ದು ನ.21 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಈಗಾಗಲೇ ಸ್ನಾತಕೋತ್ತರ ಕಾನೂನು ಪದವಿ ಕೋರ್ಸುಗಳಿಗೆ ಆನ್‌ಲೈನ್‌ನಲ್ಲೇ ಪ್ರವೇಶ ಪ್ರಕ್ರಿಯೆ ಆರಂಭಿಸಿರುವ ವಿವಿಯು ಇದು ಯಶಸ್ಸಿನ ಆಧಾರದ ಮೇಲೆ ಉಳಿದ ಸ್ನಾತಕೋತ್ತರ ಕೋರ್ಸುಗಳ ಪ್ರವೇಶವನ್ನೂ ಆನ್‌ಲೈನ್‌ನಲ್ಲೇ ನಡೆಸಲು ತೀರ್ಮಾನಿಸಿದೆ.
ಇತರೆ ಕೋರ್ಸುಗಳಿಗೆ ಹೋಲಿಸಿದರೆ ಕಾನೂನು ಕೋರ್ಸುಗಳ ಪ್ರವೇಶಕ್ಕೆ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇರುವುದರಿಂದ ನಾವು ಈ ವಿಭಾಗದಲ್ಲಿ ಮೊದಲು ಆನ್‌ಲೈನ್ ಪ್ರವೇಶಕ್ಕೆ ಪ್ರಯೋಗ ನಡೆಸಿದ್ದೇವೆ. ಯಾವುದೇ ಅಡಚಣೆ ಅಥವಾ ತಾಂತ್ರಿಕ ತೊಂದರೆಗಳಿಲ್ಲದೆ ಯಶಸ್ವಿಯಾಗಿದೆ. ಇದು ಉಳಿದ ಪಿಜಿ ಕೋರ್ಸ್‌ಗಳ ಪ್ರವೇಶವನ್ನೂ ಆನ್‌ಲೈನ್‌ನಲ್ಲೇ ನಡೆಸಲು ನಮಗೆ ಉತ್ತೇಜನ ನೀಡಿದೆ. ಇದಕ್ಕೆ ಅಗತ್ಯ ಸಾಫ್ಟ್‌ವೇರ್ ಕೂಡ ಸಿದ್ಧಪಡಿಸಿಕೊಂಡಿದ್ದೇವೆ ಎಂದು ವಿವಿಯ ಅಧಿಕಾರಿಗಳು ತಿಳಿಸಿದ್ದಾರೆ.
ಹೇಗೆ ನಡೆಯಲಿದೆ?:ಆನ್‌ಲೈನ್ ಪ್ರವೇಶ ಪ್ರಕ್ರಿಯೆ ವೃತ್ತಿಪರ ಕೋರ್ಸುಗಳ ಪ್ರವೇಶದ ಮಾದರಿಯಲ್ಲಿರುತ್ತದೆ. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ಅರ್ಹತಾ ಪಟ್ಟಿಯನ್ನು ವಿವಿಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ. ವಿದ್ಯಾರ್ಥಿಗಳಿಗೆ ಲಾಗಿನ್ ಐಡಿ ನೀಡಿ ಅದರ ಮೂಲಕ ಅವರು ಸೀಟು ಆಯ್ಕೆಗೆ ಅವಕಾಶ ನೀಡಲಾಗುತ್ತದೆ. ನಂತರ ಅಣಕು ಹಂಚಿಕೆ ನಡೆಸಿ ಆಯ್ಕೆಯನ್ನು ಬದಲಾಯಿಸಲು ಅವಕಾಶ ನೀಡಲಾಗುತ್ತದೆ. ಕೊನೆಯದಾಗಿ ಅರ್ಹತೆಯ ಆಧಾರದ ಮೇಲೆ ನೈಜ ಸೀಟು ಹಂಚಿಕೆಯನ್ನು ವೆಬ್‌ಸೈಟ್‌ನಲ್ಲೇ ಪ್ರಕಟಿಸಲಾಗುತ್ತದೆ. ಇದರ ಸಂದೇಶವನ್ನು ವಿದ್ಯಾರ್ಥಿಗಳ ಮೊಬೈಲ್, ಇಮೇಲ್‌ಗೆ ಕಳುಹಿಸಿ ದಾಖಲಾತಿಗೆ ಸೂಚಿಸಲಾಗುತ್ತದೆ. ಆನಂತರ ವಿದ್ಯಾರ್ಥಿಗಳು ತಮ್ಮ ಪ್ರವೇಶವನ್ನು ಖಚಿತ ಮಾಡಿ ಶುಲ್ಕ ಪಾವತಿಸಿ ಪ್ರವೇಶ ಪಡೆದುಕೊಳ್ಳಬಹುದಾಗಿದೆ.
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಾಕಷ್ಟು ಸುಧಾರಣೆಗಳನ್ನು ನಾವು ತಂದಿದ್ದೇವೆ. ಕರೊನಾ ಹಿನ್ನೆಲೆಯಲ್ಲಿ ಪ್ರವೇಶ ಪ್ರಕ್ರಿಯೆ ಕೂಡ ಆನ್‌ಲೈನ್ ಮಾಡುತಿದ್ದೇವೆ.ಡಾ.ಕೆ.ಆರ್.ವೇಣುಗೋಪಾಲ್, ಕುಲಪತಿ, ಬೆಂಗಳೂರು ವಿವಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + fourteen =
Remember me
